ನವದೆಹಲಿ:ಹಿಂದೂ ದೇವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದಕ್ಕೆ ತಿರುಗೇಟು ನೀಡಿ ಪ್ರವಾದಿ ಮೊಹಮ್ಮದ್​ ಕುರಿತಂತೆ ಮಾತನಾಡಿ ಭಾರಿ ಇಕ್ಕಟ್ಟಿನಲ್ಲಿ ಸಿಲುಕಿರುವ ಬಿಜೆಪಿ ನಾಯಕಿ ನೂಪುರ್​ ಶರ್ಮಾ ಅವರು ಈಗ ಸ್ವಲ್ಪ ನಿರಾಳರಾಗಿದ್ದಾರೆ. ಪ್ರವಾದಿ ಮೊಹಮ್ಮದ್​ ಕುರಿತು ಹೇಳಿಕೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಇವರ ವಿರುದ್ಧ ದೇಶದ ವಿವಿಧ ಪೊಲೀಸ್​ ಠಾಣೆಯಲ್ಲಿ ದಾಖಲಾಗಿರುವ ಎಲ್ಲಾ ಕೇಸ್​ಗಳನ್ನು ಒಂದೇ ಕಡೆ ನಡೆಸುವಂತೆ ಮಾಡಿಕೊಂಡ ಮನವಿಯನ್ನು ಸುಪ್ರೀಂಕೋರ್ಟ್​ ಒಪ್ಪಿಕೊಂಡಿದೆ.
ಹಲವಾರು ಪೊಲೀಸ್​ ಠಾಣೆಗಳಲ್ಲಿ ಇವರ ವಿರುದ್ಧ ದೂರು ದಾಖಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ವಿವಿಧ ಕೋರ್ಟ್​ಗಳಲ್ಲಿ ವಿಚಾರಣೆ ನಡೆಯುತ್ತಿದೆ. ಎಲ್ಲೆಡೆ ತಾವು ಹೋಗುವುದು ಕಷ್ಟಸಾಧ್ಯವಾಗುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಒಂದೇ ಕಡೆ ನಡೆಸಲು ಅನುಮತಿ ನೀಡಬೇಕು ಎಂದು ನೂಪುರ್​ ಶರ್ಮಾ ಮಾಡಿಕೊಂಡ ಮನವಿಯನ್ನು ಕೋರ್ಟ್​ ಪುರಸ್ಕರಿಸಿದೆ.
ನೂಪುರ್ ಶರ್ಮಾ ಅವರಿಗೆ ಜೀವ ಬೆದರಿಕೆ ಬಂದಿರುವ ಅಂಶವನ್ನೂ ಪರಿಗಣಿಸಿರುವ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೆಬಿ ಪರ್ದಿವಾಲಾ ಅವರ ಪೀಠ​, ಒಂದೇ ಕಡೆ ನಡೆಸಲು ಅನುಮತಿ ನೀಡಿದೆ. ಈ ಹಿಂದೆ ಸುಪ್ರೀಂಕೋರ್ಟ್​ ನೂಪುರ್​ ಶರ್ಮಾ ಪರವಾಗಿ ತೀರ್ಪು ನೀಡಿ, ಸದ್ಯ ದಾಖಲಾಗಿರುವ ಎಫ್‌ಐಆರ್​ಗಳಿಗೆ ಸಂಬಂಧಿಸಿ ಯಾವುದೇ ಬಲವಂತದ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಆದೇಶಿಸಿತ್ತು. ಈಗ ಮತ್ತೊಮ್ಮೆ ನೂಪುರ್​ ನಿಟ್ಟುಸಿರು ಬಿಡುವಂತಾಗಿದೆ.
ದೆಹಲಿ, ಮಹಾರಾಷ್ಟ್ರ, ತೆಲಂಗಾಣ, ಪಶ್ಚಿಮ ಬಂಗಾಳ, ಕರ್ನಾಟಕ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಅಸ್ಸಾಂ ರಾಜ್ಯಗಳಲ್ಲಿ ನೂಪುರ್​ ವಿರುದ್ಧ ಕೇಸ್​ ದಾಖಲಾಗಿದೆ. ಈ ಎಲ್ಲಾ ಕೇಸ್​ಗಳನ್ನು ದೆಹಲಿ ಒಂದಕ್ಕೇ ವರ್ಗಾವಣೆ ಮಾಡಿ ಅಲ್ಲಿಯೇ ವಿಚಾರಣೆ ನಡೆಸುವಂತೆ ಪೀಠ ಹೇಳಿದೆ.(ಏಜೆನ್ಸೀಸ್​)
ನ್ಯಾಯಾಂಗ ಇತಿಹಾಸದಲ್ಲೇ ಅಪರೂಪದ ಘಟನೆ: ‘ಸುಪ್ರೀಂ’ ವಿರುದ್ಧವೇ ತಿರುಗಿಬಿದ್ದ ನಿವೃತ್ತ ನ್ಯಾಯಮೂರ್ತಿಗಳು, ಸೇನಾ ಅಧಿಕಾರಿಗಳು!

ನೂಪುರ್​ ಶರ್ಮಾಗೆ ಸುಪ್ರೀಂನಿಂದ ಬಿಗ್​ ರಿಲೀಫ್​: ಯಾವುದೇ ಕ್ರಮ ಕೈಗೊಳ್ಳದಿರಲು ಕೋರ್ಟ್​ ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − one =
Remember me
