ನವದೆಹಲಿ:ಅದು 2013. ನರೇಂದ್ರ ಮೋದಿಯವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಅವಧಿಯದು. ಪುಣೆಯ ಫರ್ಗುಸನ್ ಕಾಲೇಜ್‍ನಲ್ಲಿ ಅವರು ಮಾಡಿದ್ದ ಭಾಷಣದ ತುಣುಕು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗುತ್ತಿದೆ. ಇದಕ್ಕೆ ಕಾರಣ ಟೊಕಿಯೋ ಒಲಿಂಪಿಕ್‌ನಲ್ಲಿ ನೀರಜ್‌ ಚೋಪ್ರಾ ಚಿನ್ನ ಗೆದ್ದು ಭಾರತದ ಗರಿಮೆಯನ್ನು ಹೆಚ್ಚಿಸಿದ್ದು.ಅಷ್ಟಕ್ಕೂ ಅಂದು ಮುಖ್ಯಮಂತ್ರಿಯಾಗಿದ್ದ ಮೋದಿಯವರು ಭಾಷಣ ಮಾಡುತ್ತಾ, ನಾವು ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲಲು ಸಾಧ್ಯವೇಕೆ ಆಗುತ್ತಿಲ್ಲ ಎಂಬ ಬಗ್ಗೆ ವಿವರಣೆ ನೀಡಿದ್ದರು. ಆ ಭಾಷಣದಲ್ಲಿ ಅವರು, ಒಲಿಂಪಿಕ್ಸ್ ಗೆಲ್ಲಲು ಯುವ ಸೈನಿಕರಿಗೆ ಸೂಕ್ತ ತರಬೇತಿ ನೀಡಿದರೆ 8-10 ಚಿನ್ನದ ಪದಕಗಳು ಭಾರತಕ್ಕೆ ಲಭಿಸುತ್ತವೆ ಎಂದಿದ್ದರು. 1.2 ಬಿಲಿಯನ್‌ ಜನಸಂಖ್ಯೆ ಇರುವ ನಮ್ಮ ದೇಶದಲ್ಲಿ ಕ್ರೀಡಾಪಟುಗಳ ಕೊರತೆಯಿಲ್ಲ. ಅದರಲ್ಲಿಯೂ ಸೇನೆಯಲ್ಲಿ ಇರುವ ನವಯುವಕರಿಗೆ ತರಬೇತಿ ಕೊರತೆ ಇದೆ. ಇಂಥವರಿಗೆ ಸೂಕ್ತ ತರಬೇತಿ ನೀಡುವ ಜವಾಬ್ದಾರಿ ನಮ್ಮ ಮೇಲಿದೆ. ಪ್ರೋತ್ಸಾಹ, ತರಬೇತಿ ನೀಡಿನೋಡಿ, ಆಗ ಅವರ ತಾಕತ್ತು ಗೊತ್ತಾಗುತ್ತದೆ ಎಂದಿದ್ದರು ಮೋದಿ.ಭಾಷಣ ಹೇಳಿ ಸುಮ್ಮನಾಗಿರಲಿಲ್ಲ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದ ಮೋದಿಯವರು. ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೀರಜ್ ಚೋಪ್ರಾ ಅವರು ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದಿರುವ ಕಾರಣ, ಮೋದಿಯವರ ಭವಿಷ್ಯ ನಿಜವಾಗಿದೆ ಎಂದು ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಮೋದಿಯವರು ಪ್ರಧಾನಿಯಾದ ಬಳಿಕವೂ ಇಂಥ ಕ್ರೀಡಾ ತಾರೆಯರಿಗೆ ಹೆಚ್ಚು ಉತ್ತೇಜನ ನೀಡಿ ಅವರಿಗೆ ತಾವು ನುಡಿದಂತೆಯೇ ಹೆಚ್ಚಿನ ತರಬೇತಿ, ಪ್ರೋತ್ಸಾಹ ನೀಡುತ್ತಿದ್ದುದೇ ಇಂದು ನೀರಜ್‌ ಚಿನ್ನ ಗೆಲ್ಲಲು ಸಾಧ್ಯವಾಗಿದೆ. ಮೋದಿಯವರು ನುಡಿದಂತೆ ನಡೆದಿದ್ದಾರೆ. ಅವರ ಭವಿಷ್ಯ ನಿಜವಾಗಿದೆ ಎಂದು ಅವರ ಅಭಿಮಾನಿಗಳು ಕಮೆಂಟ್‌ ಮಾಡುತ್ತಿದ್ದಾರೆ.ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಒಲಿಂಪಿಕ್ಸ್ ನಲ್ಲಿ ಭಾಗವಹಿಸಿದ್ದ ಎಲ್ಲ 228 ಮಂದಿಯನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದು, ಕ್ರೀಡಾಪಟುಗಳ ಜೊತೆ ಮಾತನಾಡಿದ್ದಾರೆ.ಪ್ರಧಾನಿ ಮೋದಿ ಭಾಷಣದ ತುಣುಕು ಇಲ್ಲಿದೆ ನೋಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
