ಗಾಂಧಿನಗರ (ಗುಜರಾತ್‌):ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿ ನಂತರ ಆಕೆಯ ಕೊಲೆ ಮಾಡಿರುವ 27 ವರ್ಷದ ಯುವಕನಿಗೆ ಗುಜರಾತ್‌ ಹೈಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಶಿಕ್ಷೆಯನ್ನು ಪ್ರಕಟ ಮಾಡುತ್ತಿದ್ದಂತೆಯೇ ಯುವಕ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿದ್ದಾನೆ!ಮಧ್ಯಪ್ರದೇಶದ ಅಪರಾಧಿ ಯುವಕನ ಹೆಸರು ಸುಜಿತ್‌ ಸಾಕೇಟ್‌, ಈತ ತನಗೆ ಜೀವಾವಧಿ ಶಿಕ್ಷೆ ವಿಧಿಸಿದ್ದ ನ್ಯಾಯಾಧೀಶ ಪಿ.ಎಸ್‌.ಕಾಳ ಅವರ ಮೇಲೆ ಚಪ್ಪಲಿ ಎಸೆದಿದ್ದಾನೆ. ಆದರೆ ಅದೃಷ್ಟವಶಾತ್‌ ಚಪ್ಪಲಿ ಗುರಿತಪ್ಪಿ ಅಲ್ಲಿರುವ ಕಟಕಟೆಯ ಬಾಕ್ಸ್‌ನಲ್ಲಿ ಬಿದ್ದಿದೆ.ಈತ ಕಳೆದ ಏಪ್ರಿಲ‌ 30 ರಂದು ಐದು ವರ್ಷದ ವಲಸೆ ಕಾರ್ಮಿಕರ ಮಗಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ. ಬಾಲಕಿಯ ಪಾಲಕರು ಕೆಲಸಕ್ಕೆಂದು ಹೋಗಿದ್ದ ವೇಳೆ ಚಾಕೊಲೇಟ್‌ ಕೊಡಿಸುವ ಆಸೆ ತೋರಿಸಿ ಬಾಲಕಿಯನ್ನು ಅಪಹರಿಸಿದ್ದ. ನಂತರ ದೂರದ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿದ್ದ.ಈತನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ವಿಚಾರಣೆ ನಡೆಸಿದ್ದ ಕೋರ್ಟ್‌ ಈತನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಇದ್ದಕ್ಕಿದ್ದಂತೆಯೇ ಹೊತ್ತಿ ಉರಿದ ಮನೆ: ಐವರು ಸುಟ್ಟುಕರಕಲು- ನಾಲ್ಕೂ ಮಕ್ಕಳನ್ನು ಕಳೆದುಕೊಂಡ ಅಪ್ಪ-ಅಮ್ಮ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
