ನವದೆಹಲಿ:ಸೈಬರ್​ ಅಪರಾಧ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಆರ್ಥಿಕ ಅಪರಾಧಗಳಲ್ಲಿ ಭಾಗಿಯಾಗಿರುವ ಸೈಬರ್ ಅಪರಾಧಿಗಳ ವಿರುದ್ಧ ದೇಶಾದ್ಯಂತ 105 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿದೆ. ‘ಆಪರೇಷನ್ ಚಕ್ರ’ ಹೆಸರಿನಲ್ಲಿ ನಡೆದ ಈ ದಾಳಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಪಡೆಗಳು ಸಹಯೋಗ ನೀಡಿವೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನಾಲ್ಕು ಸ್ಥಳಗಳು, ದೆಹಲಿಯಲ್ಲಿ ಐದು, ಚಂಡೀಗಢದಲ್ಲಿ ಮೂರು ಮತ್ತು ಪಂಜಾಬ್, ಕರ್ನಾಟಕ ಮತ್ತು ಅಸ್ಸಾಂನಲ್ಲಿ ತಲಾ ಎರಡು ಸ್ಥಳಗಳಲ್ಲಿ ಕಾರ್ಯಾಚರಣ ನಡೆಸಲಾಗಿದೆ ಎಂದು ವರದಿಯಾಗಿದೆ. ಇದನ್ನು ಹೊರತುಪಡಿಸಿ, ಪುಣೆ ಮತ್ತು ಅಹಮದಾಬಾದ್‌ನಲ್ಲಿ ಅಮೆರಿಕದ ಪ್ರಜೆಗಳನ್ನು ಗುರಿಯಾಗಿಸಿಕೊಂಡ ಎರಡು ಕಾಲ್ ಸೆಂಟರ್‌ಗಳ ಮೇಲೆ ದಾಳಿ ನಡೆದಿದೆ.
ಈ ಶೋಧದ ವೇಳೆ ಅಪಾರ ಪ್ರಮಾಣದ ಡಿಜಿಟಲ್ ಸಾಕ್ಷ್ಯಗಳು, 1.5 ಕೋಟಿ ರೂ. ನಗದು ಮತ್ತು 1.5 ಕೆಜಿ ಚಿನ್ನ ಪತ್ತೆಯಾಗಿದೆ ಎಂದು ವರದಿಯಾಗಿದೆ. ಸಿಬಿಐ ತಂಡವು 87 ಕಡೆಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಪಡೆಗಳು 18 ಕಡೆಗಳಲ್ಲಿ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ. ರಾಜಸ್ಥಾನದ ಒಂದೇ ಒಂದು ಸ್ಥಳದಿಂದ ಸಿಬಿಐ ₹ 1.5 ಕೋಟಿ ನಗದು ಮತ್ತು ಒಂದೂವರೆ ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡಾರ್ಕ್ ವೆಬ್‌ನಲ್ಲಿನ ಹಣಕಾಸಿನ ವಹಿವಾಟುಗಳು ಮತ್ತು ಸೈಬರ್‌ಕ್ರೈಮ್ ಚಟುವಟಿಕೆಗಳ ವಿವರಗಳನ್ನು ಒಳಗೊಂಡಿರುವ ಬೃಹತ್ ಡಿಜಿಟಲ್ ಪುರಾವೆಗಳನ್ನು ಸಹ ಸಂಸ್ಥೆ ವಶಪಡಿಸಿಕೊಂಡಿರುವುದಾಗಿ ತಿಳಿದುಬಂದಿದೆ. (ಏಜೆನ್ಸೀಸ್​)
ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ವಿ.ಆರ್ ಸುದರ್ಶನ್ ರಾಜೀನಾಮೆ: ಅಧ್ಯಕ್ಷ ಡಿಕೆಶಿಗೆ ಪತ್ರ
VIDEO: ‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’: ಕಾರ್ಣಿಕೋತ್ಸವದಲ್ಲಿ ‘ಯುವ ಸಿಎಂ’ ಕುರಿತು ಭವಿಷ್ಯವಾಣಿ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:ten + seventeen =
Remember me
