ಬೆಂಗಳೂರು:ಕರ್ನಾಟಕ ರಾಜ್ಯಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಕೆ ಮಾಡುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿದೆ.
ಕರ್ನಾಟಕ ಕೇಳಿರುವಷ್ಟು ಆಕ್ಸಿಜನ್‌ ಪೂರೈಕೆ ಮಾಡುವುದು ಕಷ್ಟ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ರಾಜ್ಯ ಹೈಕೋರ್ಟ್‌ ಸರ್ಕಾರ ಕೇಳಿದಷ್ಟು ಆಕ್ಸಿಜನ್‌ ಪೂರೈಸಲು ಆದೇಶಿಸಿತ್ತು. ಈ ವಿವಾದ ಸುಪ್ರೀಂಕೋರ್ಟ್‌ಗೆ ಹೋಗಿತ್ತು.
ಇದೀಗ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಾನು ತಡೆ ನೀಡುವುದಿಲ್ಲ ಎಂದಿರುವ ಸುಪ್ರೀಂಕೋರ್ಟ್‌, ಹೈಕೋರ್ಟ್ ಆದೇಶದ ಮಧ್ಯೆ ನಾನು ಪ್ರವೇಶಿಸುವುದಿಲ್ಲ, ಅದು ನೀಡಿರುವ ಆದೇಶ ತಪ್ಪಲ್ಲ ಎಂದಿದೆ. ಜತೆಗೆ 4 ದಿನಗಳಲ್ಲಿ ರಾಜ್ಯದ ಮನವಿ ಪರಿಗಣಿಸಲು ಕೇಂದ್ರಕ್ಕೆ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ.
ಕರ್ನಾಟಕದ ಜನರನ್ನು ಕಷ್ಟಕ್ಕೆ ದೂಡಲು ಸಾಧ್ಯವಿಲ್ಲ. ಮನವಿ ಪರಿಗಣಿಸುವವರೆಗೆ ತಕ್ಷಣ ಜಾರಿ ಬರುವಂತೆ ದಿನಕ್ಕೆ 1200 ಮೆ.ಟನ್.ಗೆ ಹೆಚ್ಚಿಸಲು ನ್ಯಾಯಮೂರ್ತಿಗಳು ಸೂಚನೆ ನೀಡಿದ್ದಾರೆ.
ಕೋವಿಶೀಲ್ಡ್‌ ಲಸಿಕೆ ತಯಾರಕ ಪೂನಾವಾಲಾಗೆ ಸಿಎಂ, ಪ್ರಭಾವಿಗಳಿಂದ ಕೊಲೆ ಬೆದರಿಕೆ! ಭದ್ರತೆಗೆ ಮೊರೆ

ಆಶ್ರಮಕ್ಕೆ ಸೇವೆ ಸಲ್ಲಿಸಲು ಹೋದ ನಾಲ್ವರು ಮಹಿಳೆಯರ ಮೇಲೆ ‘ದೇವಮಾನವ’ನಿಂದ ಅತ್ಯಾಚಾರ

ಅಗಲಿದ ನಟನ ಶೋಕಾಚರಣೆ ವೇಳೆ ಸಭೆಯ ನಡುವೆ ಅಧ್ಯಕ್ಷನ ನೆಕ್ಕಿದ ನಾಯಿಗಳು- ವಿಡಿಯೋ ವೈರಲ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 3 =
Remember me
