ಇಸ್ಲಾಮಾಬಾದ್:ಪ್ರಧಾನಿ ನಿವಾಸ ಬಾಡಿಗೆಗೆ ಇದೆ- ಆಸಕ್ತರು ಸಂಪರ್ಕಿಸಿ… ಹೀಗೆಂದು ಘೋಷಣೆ ಮಾಡಿರುವವರು ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌.
ಪಾಕಿಸ್ತಾನವು ತೀವ್ರ ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿಯವರ ಅಧಿಕೃತ ನಿವಾಸವನ್ನು ಬಾಡಿಗೆ ನೀಡಲು ಮುಂದಾಗಿದ್ದಾರೆ ಇಮ್ರಾನ್‌. ಈ ಕುರಿತಾಗಿ ಖುದ್ದು ಇಮ್ರಾನ್ ಖಾನ್ ಅವರೇ ಹೀಗೊಂದು ನಿರ್ಧಾರಕ್ಕೆ ಬಂದಿದ್ದಾರೆ ಎಂದು ಪಾಕಿಸ್ತಾನ ಸುದ್ದಿಸಂಸ್ಥೆಗಳು ಹೇಳಿವೆ.
ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಫ್ಯಾಷನ್ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಈ ಪ್ರಧಾನಿ ನಿವಾಸ ಬಾಡಿಗೆಗೆ ಸಿಗಲಿದೆ. ಸರ್ಕಾರದ ಯಾವುದೇ ನಿಯಮಗಳನ್ನು ಉಲ್ಲಂಘಿಸದೇ ಈ ಕಟ್ಟಡ ಬಳಸಿಕೊಳ್ಳಬಹುದಾಗಿದೆ. ಈ ಷರತ್ತುಗಳಿಗೆ ಒಪ್ಪುವವರು ಬಾಡಿಗೆಗೆ ಬರಬಹುದು ಎಂದು ಸೂಚನೆ ನೀಡಲಾಗಿದೆ.
2019ರ ಅಗಸ್ಟ್‌ನಲ್ಲಿ ಇಮ್ರಾನ್ ಖಾನ್ ಅವರು ಪ್ರಧಾನಿಯವರ ಅಧಿಕೃತ ನಿವಾಸದಿಂದ ಸ್ವಂತ ಮನೆಗೆ ಶಿಫ್ಟ್ ಆಗಿದ್ದರು. ಅಲ್ಲಿಂದ ಈ ನಿವಾಸ ಖಾಲಿಯೇ ಇತ್ತು. ನಂತರ ಪ್ರಧಾನಿ ನಿವಾಸವನ್ನು ವಿಶ್ವವಿದ್ಯಾಲಯವಾಗಿ ಪರಿವರ್ತಿಸತ್ತೇವೆ ಎಂದು ಪಾಕಿಸ್ತಾನ ಸರ್ಕಾರ ಹೇಳಿತ್ತು.
ಆದರೀಗ ಪಾಕಿಸ್ತಾನ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನಿವಾಸವನ್ನು ಬಾಡಿಗೆಗೆ ನೀಡಲು ಮುಂದಾಗಿರುವುದಾಗಿ ತಿಳಿದಿದೆ. ಈ ಹಿಂದೆ ಇಮ್ರಾನ್‍ಖಾನ್ ತಮ್ಮ ಸಚಿವಾಲಯದ ಕರೆಂಟ್ ಬಿಲ್ ಕಟ್ಟದೆ ಸುದ್ದಿಯಾಗಿದ್ದರು. ಇದೀಗ ನಿವಾಸವನ್ನು ಬಾಡಿಗೆ ನೀಡುವ ನಿರ್ಧಾರಕ್ಕೆ ಬಂದಿದ್ದು, ಮತ್ತೆ ಟ್ರೋಲ್‌ ಆಗ್ತಿದ್ದಾರೆ.
ತನಿಖೆಗೆ ಕರೆದೊಯ್ಯುವ ನೆಪದಲ್ಲಿ ಪಿಎಸ್‌ಐ ಮೇಲೆ ರೇಪ್‌ಗೆ ಯತ್ನಿಸಿದ ಸಬ್‌ ಇನ್ಸ್‌ಪೆಕ್ಟರ್‌!

ಯಶವಂತಪುರ- ಶಿವಮೊಗ್ಗ ನಡುವೆ ನೂತನ ರೈಲು: ಎಲ್ಲೆಲ್ಲಿ, ಎಷ್ಟು ಹೊತ್ತಿಗೆ ನಿಲುಗಡೆ? ಇಲ್ಲಿದೆ ಡಿಟೇಲ್ಸ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
