ಕೋಲ್ಕತಾ:ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದ (WBSSC) ನೇಮಕಾತಿ ಅಕ್ರಮಗಳಿಗೆ ಸಂಬಂಧಿಸಿದ ಹಗರಣದಲ್ಲಿ ಸಿಲುಕಿರುವ ಪಶ್ಚಿಮ ಬಂಗಾಳ ವಜಾಗೊಂಡ ಸಚಿವ ಪಾರ್ಥ ಚಟರ್ಜಿ ಹಾಗೂ ಅವರ ಆಪ್ತೆ ನಟಿ ಅರ್ಪಿತಾ ಮುಖರ್ಜಿ ಅವರ ಕುರಿತಂತೆ ಜಾರಿ ನಿರ್ದೇಶನಾಲಯದ (ಇಡಿ) ತನಿಖೆಯಿಂದ ಕುತೂಹಲದ ಅಂಶಗಳು ಬೆಳಕಿಗೆ ಬಂದಿವೆ.
ಬಂಗಾಳದ ಗ್ರೂಪ್ ‘ಸಿ’ ಮತ್ತು ‘ಡಿ’ ಹಾಗೂ ಸಹಾಯಕ ಶಿಕ್ಷಕರು ಮತ್ತು ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿನ ಹಗರಣದ ತನಿಖೆ ನಡೆಸಿದಾಗ ಈ ಇಬ್ಬರು ಸಿಕ್ಕಿಬಿದ್ದಿದ್ದರು. ಈ ಹೈ ಪ್ರೊಫೈಲ್ ಬಂಧನ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಭಾರಿ ಕೋಲಾಹಲವನ್ನೇ ಉಂಟು ಮಾಡಿದೆ. ಸದ್ಯ ಇಬ್ಬರೂ ಬಂಧನದಲ್ಲಿದ್ದಾರೆ. ಇದಾಗಲೇ ಇವರ ಮನೆಯಲ್ಲಿದ್ದ ಹಲವಾರು ಲೈಂಗಿಕ ಆಟಿಕೆಗಳು ಸೇರಿದಂತೆ ಕೋಟಿ ಕೋಟಿ ಹಣವನ್ನು ಇಡಿ ವಶಕ್ಕೆ ಪಡೆದಿದೆ. ಇವರ ಕುರಿತು ಇನ್ನಷ್ಟು ಆಳಕ್ಕೆ ಹೋದಾಗ ತಮಗೆ ಸಿಕ್ಕಿರುವ ಮಾಹಿತಿಗಳನ್ನು ಅಧಿಕಾರಿಗಳು ಕೋರ್ಟ್​ಗೆ ಸಲ್ಲಿಸಿರುವ ಜಾರ್ಚ್​ಷೀಟ್​ನಲ್ಲಿ ಬಹಿರಂಗಪಡಿಸಿದ್ದಾರೆ.
ತನಿಖೆ ವೇಳೆ ವಶಪಡಿಸಿಕೊಂಡ 50 ಕೋಟಿ ರೂ. ಮತ್ತು 5 ಕೋಟಿ ಮೌಲ್ಯದ ಚಿನ್ನಾಭರಣ ಪಾರ್ಥ ಚಟರ್ಜಿಗೆ ಸೇರಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಪಾರ್ಥಸಾರಥಿ ಮತ್ತು ಅರ್ಪಿತಾ ಅವರ ಜಂಟಿ ಹೆಸರಿನಲ್ಲಿರುವ 31 ವಿಮಾ ಪಾಲಿಸಿಗಳಿಗೆ ಪಾರ್ಥ ಚಟರ್ಜಿ ಅವರೇ ಎಲ್ಲ ಪ್ರೀಮಿಯಂಗಳನ್ನು ಪಾವತಿಸುತ್ತಿದ್ದರು ಎಂದು ಇಡಿ ಹೇಳಿದೆ.
ಇದೇ ವೇಳೆ ಒಂದು ಕುತೂಹಲದ ಅಂಶವನ್ನೂ ಅಧಿಕಾರಿಗಳು ಕೋರ್ಟ್​ ಮುಂದೆ ತೆರೆದಿಟ್ಟಿದ್ದಾರೆ. ಅದೇನೆಂದರೆ ಅರ್ಪಿತಾ ಮುಖರ್ಜಿ ಮಗುವೊಂದನ್ನು ದತ್ತು ಪಡೆಯಲು ಬಯಸಿದ್ದರು ಎಂಬ ಅಂಶ! ಮಗುವನ್ನು ದತ್ತು ಪಡೆದುಕೊಳ್ಳುವುದಕ್ಕೆ ಸಂಬಂಧಿಸಿದಂತೆ ಪಾರ್ಥ ಚಟರ್ಜಿ ತಮ್ಮ ಕುಟುಂಬದ ಸ್ನೇಹಿತರಾಗಿ ನಿರಾಕ್ಷೇಪಣಾ ಪ್ರಮಾಣಪತ್ರಕ್ಕೆ ಸಹಿ ಹಾಕಿ ನೀಡಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ಏನಿದು ಹಗರಣ?ಬಂಗಾಳದ ಗ್ರೂಪ್ ‘ಸಿ’ ಮತ್ತು ‘ಡಿ’ ಹಾಗೂ ಸಹಾಯಕ ಶಿಕ್ಷಕರು ಮತ್ತು ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿನ ಹಗರಣದ ತನಿಖೆ ನಡೆಸುವಂತೆ ಕೋಲ್ಕತ ಹೈಕೋರ್ಟ್​ ಈ ಹಿಂದೆ ನಿರ್ದೇಶಿಸಿತ್ತು. ಇದಾದ ಬಳಿಕ ಸಿಬಿಐ ಈ ಸಂಬಂಧ ಎಫ್​ಐಆರ್​ ದಾಖಲಿಸಿತ್ತು. ಈ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದ ಬೆನ್ನಲ್ಲೇ ಮಧ್ಯಪ್ರವೇಶಿಸಿದ ಇ.ಡಿ ಅರ್ಪಿತಾ ಹಾಗೂ ಸೇರಿದಂತೆ ಅನೇಕರ ಮನೆಗಳ ಮೇಲೆ ದಾಳಿ ನಡೆಸಿತ್ತು.
ಅಂದಹಾಗೆ ಸಚಿವ ಚಟರ್ಜಿ ಅವರು ಪ್ರಸ್ತುತ ಕೈಗಾರಿಕೆ ಮತ್ತು ವಾಣಿಜ್ಯ ಸಚಿವರಾಗಿದ್ದರು. ಆದರೆ, ಅವರನ್ನು ವಜಾಗೊಳಿಸಲಾಗಿದೆ. ಅವರು ಶಿಕ್ಷಣ ಸಚಿವರಾಗಿದ್ದಾಗ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದಿಂದ (ಡಬ್ಲ್ಯುಬಿಎಸ್‌ಎಸ್‌ಸಿ) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ರಮ ನೇಮಕಾತಿಗಳನ್ನು ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ. ಅರ್ಪಿತಾ ಮುಖರ್ಜಿ ಅಲ್ಲದೆ, ಬಂಗಾಳದ ಶಿಕ್ಷಣ ಸಚಿವ ಪರೇಶ್​ ಸಿ ಅಧಿಕಾರಿ ಮತ್ತು ಶಾಸಕ ಮಾಣಿಕ್​ ಭಟ್ಟಾಚಾರ್ಯ ಸೇರಿದಂತೆ ಇತರರ ಮನೆಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.(ಏಜೆನ್ಸೀಸ್​)
ಶಿವಮೊಗ್ಗದಲ್ಲಿ ಬಂಧಿತ ಶಂಕಿತ ಉಗ್ರರ ಮೊಬೈಲ್​ ಫೋನ್​ ಬಿಚ್ಚಿಟ್ಟಿತು ಕರಾಳ ರಹಸ್ಯ!
VIDEO: ಹೆಣ್ಮಕ್ಕಳನ್ನು ಚುಡಾಯಿಸುವವರೇ ಎಚ್ಚರ… 20 ಸೆಕೆಂಡ್​ನಲ್ಲಿ 40 ಬಾರಿ ಚಪ್ಪಲಿ ಏಟು! ತೆಪ್ಪಗೆ ಕುಳಿತ ಕಾಮುಕ!
VIDEO: ಹಿಂದೂ ಹೆಸರು ಹೇಳಿ ಮದ್ವೆಯಾದ ವಿವಾಹಿತ ವಕೀಲ: ದುರ್ಗೆಯ ಹಚ್ಚೆ ನೋಡಿ ಮೋಸ ಹೋದಾಕೆಗೆ ನರಕ ದರ್ಶನ!
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:3 × 3 =
Remember me
