ಭುವನೇಶ್ವರ:ಇಲ್ಲಿನ ರಾಜಭವನದ ಬಳಿಯ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪೆಟ್ರೋಲ್ ಬಂಕ್​ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಎಂಟು ಮಂದಿ ಗಾಯವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡವರನ್ನು ಕಟಕ್​ನ ಎಸ್​ಸಿಬಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ ಮತ್ತು ಉಳಿದವರಿಗೆ ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕ್ಯಾಪಿಟಲ್ ಆಸ್ಪತ್ರೆಯ ನಿರ್ದೇಶಕ ಎಲ್.ಡಿ. ಸಾಹು ತಿಳಿಸಿದ್ದಾರೆ.
ಇದರ ಭೀಕರತೆ ಎಷ್ಟಿತ್ತೆಂದರೆ ಸುತ್ತಮುತ್ತಲಿನ ಮನೆಯಲ್ಲಿ ಇರುವವರಿಗೆ ಇಡೀ ಕಟ್ಟಡವೇ ಅಲ್ಲಾಡಿದಂತೆ ಭಾಸವಾಗಿದೆ. ಈ ಪೆಟ್ರೋಲ್​ ಬಂಕ್​ ಜನನಿಭಿಡ ಪ್ರದೇಶದಲ್ಲಿ ಇರುವ ಹಿನ್ನೆಲೆಯಲ್ಲಿ ಸುತ್ತಲೂ ಕಟ್ಟೆಚ್ಚರ ವಹಿಸಲಾಗಿದೆ.
ಇದನ್ನೂ ಓದಿ:ನನಗೆ ಐವರು ಗಂಡಂದಿರು, ಮೂವರು ಅಪ್ಪಂದಿರು: ನಮ್ಮಲ್ಲಿದು ಕಾಮನ್​, ಅಚ್ಚರಿಯ ಮಾಹಿತಿ ಬಿಚ್ಚಿಟ್ಟಿದ್ದಾಳೆ ಯುವತಿ…
ಮೂರು ಅಗ್ನಿಶಾಮಕ ದಳಗಳು ಅಗ್ನಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.ಘಟನೆಗೆ ನಿಖರ ಕಾರಣವೇನು ಎಂದು ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಬೆಂಕಿಯು ಪೆಟ್ರೋಲ್ ಮತ್ತು ಡೀಸೆಲ್ ಇರುವ ಇನ್ನೆರಡು ಟ್ಯಾಂಕ್​ಗಳಿಗೆ ಹರಡದಂತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಎರಡು ಟ್ಯಾಂಕರ್​ಗಳಿಂದ ಇಂಧನವನ್ನು ಹೊರಹಾಕಲು ತಕ್ಷಣ ಕ್ರಮ ಕೈಗೊಳ್ಳುವಂತೆ ಐಒಸಿಎಲ್ ಗೆ ಸೂಚಿಸಲಾಗಿದೆ ಎಂದಿದ್ದಾರೆ.
ಇದೇ ವೇಳೆ, ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದು, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಶಾಹೀನ್​ಬಾಗ್​ನಂಥ ಸ್ಥಳದಲ್ಲಿ ಪ್ರತಿಭಟನೆ ಸಹಿಸಲ್ಲ- ಕೋರ್ಟ್​ ಆದೇಶ ಕಾಯದೇ ಕ್ರಮ ತೆಗೆದುಕೊಳ್ಳಿ: ಸುಪ್ರೀಂ

ಅಧಿಕಾರ ನಮ್ಮ ಕೈಯಲ್ಲಿದ್ದಿದ್ರೆ 15 ನಿಮಿಷದಲ್ಲೇ ಚೀನಿ ಸೈನಿಕರು ಕಾಲ್ಕೀಳುತ್ತಿದ್ದರು!

ಹಾಥರಸ್​ ಪ್ರಕರಣ: ಗ್ರಾಮದ ಮುಖಂಡನಿಂದ ಸ್ಫೋಟಕ ಮಾಹಿತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
