ಚೆನ್ನೈ:ಹಲವೆಡೆಗಳಲ್ಲಿ ಪೆಟ್ರೋಲ್​ ಬೆಲೆ 100ರ ಗಡಿ ದಾಟಿದೆ. ಇಂಥ ಸಮಯದಲ್ಲಿ ತಮಿಳುನಾಡು ಸರ್ಕಾರ ವಾಹನ ಸವಾರರಿಗೆ ಗುಡ್​ನ್ಯೂಸ್​ ಕೊಟ್ಟಿದ್ದು, ಪೆಟ್ರೋಲ್​ ಬೆಲೆಯನ್ನು ಮೂರು ರೂಪಾಯಿಗೆ ಇಳಿಸಿದೆ.
ಹಣಕಾಸು ಸಚಿವ ಪಿ ತ್ಯಾಗರಾಜನ್ ಈ ವಿಷಯವನ್ನು ತಿಳಿಸಿದ್ದು, ಪೆಟ್ರೋಲ್ ಮೇಲಿನ ರಾಜ್ಯ ಸುಂಕವನ್ನು ಕಡಿತಗೊಳಿಸಿರುವುದಾಗಿ ಹೇಳಿದ್ದಾರೆ. ಹೀಗೆ ಮಾಡಿದರೆ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 1,160 ಕೋಟಿ ರೂಪಾಯಿ ನಷ್ಟವಾಗಲಿದ, ಆದರೂ ವಾಹನ ಬಳಕೆದಾರರ ಹಿತಾಸಕ್ತಿಯಿಂದ ಹೀಗೆ ಮಾಡಿರುವುದಾಗಿ ಅವರು ಹೇಳಿದ್ದಾರೆ.
ಡಿಎಂಕೆ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಜನರಿಗೆ ಪೆಟ್ರೋಲ್ ಬೆಲೆಯನ್ನು ಪ್ರತೀ ಲೀಟರ್​ಗೆ 5 ರೂಪಾಯಿಗಳಷ್ಟು ಕಡಿತ ಮಾಡುವುದಾಗಿ ಘೋಷಿಸಿತ್ತು. ಅಷ್ಟು ಸಾಧ್ಯವಾಗಿಲ್ಲದ ಕಾರಣ ಮೂರು ರೂಪಾಯಿ ಇಳಿಸಿರುವುದಾಗಿ ಅವರು ಹೇಳಿದ್ದಾರೆ.
ಈ ಸುದ್ದಿ ವೈರಲ್​ ಆಗುತ್ತಿದ್ದಂತೆಯೇ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಜನರು ಇದೇ ರೀತಿ ತಮಗೂ ಅನ್ವಯ ಮಾಡುವಂತೆ ಆಗ್ರಹಿಸುತ್ತಿದ್ದಾರೆ. ತಮಿಳುನಾಡು ಸರ್ಕಾರಕ್ಕೆ ಇದು ಸಾಧ್ಯವಿರುವಾಗ ಬೇರೆ ರಾಜ್ಯಗಳಿಗೆ ಸಾಧ್ಯವಿಲ್ಲವೇಕೆ ಎನ್ನುವುದು ಅವರ ಪ್ರಶ್ನೆ.
ಬಲವಂತದ ಸಂಭೋಗದಿಂದ ಪಾರ್ಶ್ವವಾಯುವಿಗೆ ತುತ್ತಾದ ಪತ್ನಿ: ಪತಿಗೆ ಹಕ್ಕಿದೆ ಎಂದ ಕೋರ್ಟ್​!

ಕಾರಿನಲ್ಲಿ ಹೋಗುವಾಗ ಹೆಲ್ಮೆಟ್‌ ಹಾಕಲಿಲ್ಲವೆಂದು ವಕೀಲನಿಗೆ ಬಿತ್ತು ಒಂದು ಸಾವಿರ ರೂ. ದಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
