ಕೋಯಿಕ್ಕೋಡ್‌:ಮೊನ್ನೆ ಶುಕ್ರವಾರ ಕೇರಳದ ಕೋಯಿಕ್ಕೋಡ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಭಾರಿ ದುರಂತದಲ್ಲಿ ಮೃತಪಟ್ಟ ಸಹ ಪೈಲಟ್‌ ಅಖಿಲೇಶ್‌ ಕುಮಾರ್‌ ಅವರ ಪತ್ನಿಗೆ ಇದುವರೆಗೂ ತಮ್ಮ ಪತಿಯ ಸಾವಿನ ಬಗ್ಗೆ ಮಾಹಿತಿಯೇ ಇಲ್ಲ.
ಹೌದು. ತುಂಬು ಗರ್ಭಿಣಿಯಾಗಿರುವ ಅವರ ಪತ್ನಿ, ಇನ್ನೇನು ಒಂದು ವಾರದಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಆಘಾತವಾಗದೇ ಇರಲಿ ಎನ್ನುವ ಕಾರಣಕ್ಕೆ ಅವರಿಗೆ ಇನ್ನೂ ಪತಿಯ ಸಾವಿನ ವಿಷಯ ತಿಳಿಸಿಲ್ಲ.
ದುಬೈನಿಂದ 191 ಪ್ರಯಾಣಿಕರನ್ನು ಹೊತ್ತು ಕೇರಳ ತಲುಪಿದ ಏರ್​ ಇಂಡಿಯಾ ವಿಮಾನ ಕರೀಪುರದಲ್ಲಿರುವ ಕೋಯಿಕ್ಕೋಡ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕ್ರ್ಯಾಶ್ ಲ್ಯಾಂಡಿಂಗ್ ಆಗಿ 18 ಮಂದಿ ಬಲಿ ಪಡೆದಿರುವರ ಪೈಕಿ ಅಖಿಲೇಶ್‌ ಕೂಡ ಒಬ್ಬರು.
ಉತ್ತರ ಪ್ರದೇಶದ ಮಥುರಾ ಮೂಲದ ಅಖಿಲೇಶ್‌, 2017ರಲ್ಲಿ ಮೇಘಾ ಅವರ ಜತೆ ವಿವಾಹವಾಗಿದ್ದು, ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದರು. ಆದರೆ ಮಗುವಿನ ಮುಖ ನೋಡುವ ಮೊದಲೇ ವಿಮಾನ ದುರಂತ ಅವರನ್ನು ಬಲಿ ಪಡೆದುಬಿಟ್ಟಿದೆ.
ಇದನ್ನೂ ಓದಿ:ಪ್ರವಾಹದ ವೇಳೆ ಸೆಲ್ಫಿ ಆಸೆನಾ? ಹಾಗಿದ್ರೆ ಆರು ತಿಂಗಳು ಜೈಲಿಗೆ ಹೋಗಲು ರೆಡಿಯಾಗಿ!
ಕೆಲ ತಿಂಗಳ ಹಿಂದಷ್ಟೇ ಅಖಿಲೇಶ್‌ ಅವರನ್ನು ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿ ಸುತ್ತುವರೆದು ಜೈಜೈಕಾರ ಹಾಕಿದ್ದರು. ಏಕೆಂದರೆ ಕರೊನಾ ವೈರಸ್‌ ಹಿನ್ನೆಲೆಯಲ್ಲಿ, ಲಾಕ್‌ಡೌನ್‌ ನಂತರ ಭಾರತದಿಂದ ಶುರುವಾಗಿದ್ದ ವಂದೇಭಾರತ್‌ ವಿಮಾನವನ್ನು ಮೊದಲು ಇಳಿಸಿದವರು ಇದೇ ಅಖಿಲೇಶ್‌.
ಮೇ 8ರಂದು ಕೇರಳದ ಇದೇ ಕೋಯಿಕ್ಕೋಡ್ ವಿಮಾನ ನಿಲ್ದಾಣಕ್ಕೆ ತಲುಪಿಸಿದ್ದ ಪೈಲಟ್‌ಗಳ ತಂಡದಲ್ಲಿ ಅಖಿಲೇಶ್‌ ಕುಮಾರ್‌ ಸಹ ಒಬ್ಬರಾಗಿದ್ದರು.
ಆ ವೇಳೆ, ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿ ಹಾಗೂ ಪ್ರಯಾಣಿಕರು ಇವರನ್ನು ಸುತ್ತುವರಿದು ಚಪ್ಪಾಳೆ ತಟ್ಟುವ ಮೂಲಕ ಗೌರವದ ಸ್ವಾಗತ ನೀಡಿದ್ದರು. ಆದರೆ, ಇದೀಗ ವಿಮಾನ ದುರಂತದಲ್ಲಿ ಮಡಿದು ಎಲ್ಲರೂ ಕಣ್ಣೀರು ಹಾಕುವಂತೆ ಮಾಡಿದ್ದಾರೆ.
ಈರುಳ್ಳಿಯಿಂದ ಹರಡುತ್ತಿದೆ ಸೋಂಕು- 500ಕ್ಕೂ ಅಧಿಕ ಮಂದಿಯಲ್ಲಿ ಪತ್ತೆ: ಏನಿದು ವೈರಸ್‌?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × five =
Remember me
