ತಿರುವನಂತಪುರ (ಕೇರಳ):ಕನ್ನಡ, ಮಲಯಾಳಿ, ತಮಿಳು ಮತ್ತು ತೆಲುಗು ಭಾಷೆಗಳ ಹಲವಾರು ಚಿತ್ರಗಳಲ್ಲಿ ಹಿನ್ನೆಲೆ ಗಾಯಕಿಯಾಗಿ ಧ್ವನಿ ನೀಡಿದ ಖ್ಯಾತ ಗಾಯಕಿ ಸಂಗೀತಾ ಸಚಿತ್ ಕೊನೆಯುಸಿರೆಳೆದಿದ್ದಾರೆ. ಇವರಿಗೆ 46 ವರ್ಷ ವಯಸ್ಸಾಗಿತ್ತು.
ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸುಮಾರು 200 ಹಾಡುಗಳನ್ನು ಇವರು ಹಾಡಿದ್ದಾರೆ.
ತಮಿಳಿನ ನಾಲೈ ತೀರ್ಪು ಚಿತ್ರದಲ್ಲಿ ಹಾಡುವ ಮೂಲಕ ಸಂಗೀತ ಲೋಕಕ್ಕೆ ಪದಾರ್ಪಣೆ ಮಾಡಿದ್ದ ಸಂಗೀತಾ ಅವರಿಗೆ ಹೆಸರು ತಂದುಕೊಟ್ಟದ್ದು ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಸಂಯೋಜಿಸಿದ ತಮಿಳು ಚಲನಚಿತ್ರ ಮಿಸ್ಟರ್ ರೋಮಿಯೋ. ಈ ಚಿತ್ರದಲ್ಲಿನ ‘ತಣ್ಣೀರೈ ಕತಲಿಕ್ಕುಮ್’ ಹಾಡು ಸೂಪರ್​ ಹಿಟ್ ಆಗಿತ್ತು.
ಇದಿಷ್ಟೇ ಅಲ್ಲದೇ ಮಲಯಾಳದ ಕಕ್ಕುಯಿಲ್‌ನ ಅಲಾರೆ ಗೋವಿಂದಾ, ಎನ್ನ್ ಸ್ವಂತಂ ಜಾನಕಿಕುಟ್ಟಿಯ ಅಂಬಿಲಿಪೂವಟ್ಟಂ ಮತ್ತು ಧುಮ್ ಧುಮ್ ಧುಮ್ ಧುರಯಾತೋ ಅವರು ಹಾಡಿರುವ ಜನಪ್ರಿಯ ಹಾಡುಗಳು. ಮಲಯಾಳಂನಲ್ಲಿ ಅವರ ಕೊನೆಯ ಹಾಡು ಕುರುತಿ ಚಿತ್ರದ ಥೀಮ್ ಸಾಂಗ್.
ಇವರ ಹಾಡಿಗೆ ಮನಸೋತಿದ್ದ ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಅವರು ಕಾರ್ಯಕ್ರಮವೊಂದರಲ್ಲಿ ತಾವು ಧರಿಸಿದ್ದ 10 ಪವನ್ ಚಿನ್ನದ ಸರವನ್ನು ಗೌರವಾರ್ಥವಾಗಿ ಉಡುಗೊರೆಯಾಗಿ ನೀಡಿದ್ದರು.
ಅವಳು ನನ್ನನ್ನು ಬೆತ್ತಲೆ ನೋಡಿದ್ರೆ ಈ ಪ್ರಶ್ನೆಗೆ ಉತ್ತರಿಸಲಿ ನೋಡೋಣ: ವಿಶ್ವದ ನಂ.1 ಶ್ರೀಮಂತನ ಚಾಲೆಂಜ್​​!
VIDEO: ಯುವತಿಯ ಪ್ರಾಣ ಕಸಿದ ಬುರ್ಖಾ- ಬೈಕ್​ನಲ್ಲಿ ಹೋಗುವಾಗ ಅವಘಡ: ಭಯಾನಕ ವಿಡಿಯೋ ವೈರಲ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 − 1 =
Remember me
