ನವದೆಹಲಿ:‘ಎಲ್ಲರಿಗೂ ಸೂರು‘ ಎಂಬ ಪ್ರಧಾನಿ ನರೇಂದ್ರ ಮೋದಿ ಕನಸಿನ ಯೋಜನೆಗೆ ಬಜೆಟ್‌ನಲ್ಲಿ ಮಾನ್ಯತೆ ಸಿಕ್ಕಿದೆ. ಈ ಮೂಲಕವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ 48 ಸಾವಿರ ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದರು. ‌
2022-23ರಲ್ಲಿ 80 ಲಕ್ಷ ಮನೆಗಳನ್ನು ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದರು. ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ ಯೋಜನೆಯನ್ನು 2024 ರವರೆಗೆ ಮುಂದುವರಿಸುವ ಪ್ರಸ್ತಾವನೆಗೆ ಕಳೆದ ತಿಂಗಳು ಕೇಂದ್ರ ಸರ್ಕಾರವು ಅನುಮೋದನೆ ನೀಡಿತ್ತು. ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ ಅಡಿಯಲ್ಲಿ 2.95 ಕೋಟಿ ಪಕ್ಕಾ ಮನೆಗಳನ್ನು ಒದಗಿಸುವ ಗುರಿಯನ್ನು ಸರ್ಕಾರ ಹೊಂದಿದ್ದು, ಈ ಪೈಕಿ ನವೆಂಬರ್ 2021 ರ ವೇಳೆಗೆ 1.65 ಕೋಟಿ ಪಕ್ಕಾ ಮನೆಗಳನ್ನು ನಿರ್ಮಿಸಲಾಗಿದೆ. ಉಳಿದ ಕುಟುಂಬಗಳು ಸಹ ಈ ನಿರ್ಧಾರದಿಂದ ತಮ್ಮ ಪಕ್ಕಾ ಮನೆಗಳನ್ನು ನಿರ್ಮಿಸಿಕೊಳ್ಳಬಹುದು,
2021ರ ಮಾರ್ಚ್‌ರವರೆಗೆ, ಈ ಯೋಜನೆ ಅಡಿ ಗ್ರಾಮೀಣ ವಿಭಾಗದಲ್ಲಿ 1.97 ಲಕ್ಷ ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಈ ಪೈಕಿ ಕೇಂದ್ರ ಸರ್ಕಾರ 1,44,162 ಕೋಟಿ ರೂ. ವೆಚ್ಚ ಭರಿಸಿದೆ. ಉಳಿದ ಪಕ್ಕಾ ಮನೆಗಳ ನಿರ್ಮಾಣಕ್ಕೆ ಸರ್ಕಾರ 2,17,257 ಕೋಟಿ ರೂ.ಗೆ ಅನುಮೋದನೆ ನೀಡಿದ್ದು, 2024ರ ವೇಳೆಗೆ ಉಳಿದ ಕುಟುಂಬಗಳಿಗೆ ಪಕ್ಕಾ ಮನೆಗಳನ್ನು ನೀಡುವ ಗುರಿಯನ್ನು ಹೊಂದಲಾಗಿದೆ.
ಕಾವೇರಿ- ಪೆನ್ನಾರ್ ಸೇರಿದಂತೆ 5 ನದಿಗಳ ಜೋಡಣೆ: ಬಜೆಟ್‌ನಲ್ಲಿ ಘೋಷಣೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
