ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸರ್ಕಾರದ ಚಿಂತಕರ ಚಾವಡಿ ನೀತಿ ಆಯೋಗದ ಏಳನೇ ಆಡಳಿತ ಮಂಡಳಿ ಸಭೆ ಇಂದು ನಡೆಯಿತು. ದೆಹಲಿಯ ರಾಷ್ಟ್ರಪತಿ ಭವನದಲ್ಲಿನ ಸಾಂಸ್ಕೃತಿಕ ಕೇಂದ್ರದಲ್ಲಿ ಈ ಸಭೆ ನಡೆದಿದ್ದು, 2019ರ ಜುಲೈ ನಂತರ ಸದಸ್ಯರ ಖುದ್ದು ಹಾಜರಿಯಲ್ಲಿ ಜರುಗುತ್ತಿರುವ ಮೊದಲ ಆಡಳಿತ ಮಂಡಳಿ ಸಭೆ ಇದಾಗಿತ್ತು. ಏಕೆಂದರೆ ಕರೊನಾದ ಹಿನ್ನೆಲೆಯಲ್ಲಿ ಈ ಸಭೆಯನ್ನು 2020 ರಲ್ಲಿ ಆಯೋಜಿಸಲಾಗಲಿಲ್ಲ. 2021 ರಲ್ಲಿ ವರ್ಚುವಲ್ ಸಭೆಯನ್ನು ನಡೆಸಲಾಯಿತು.
ಈ ಸಭೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಹೊರತುಪಡಿಸಿ ಉಳಿದ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಅನೇಕ ಕೇಂದ್ರ ಸಚಿವರು ಭಾಗವಹಿಸಿದ್ದರು. ತೆಲಂಗಾಣ ಸೇರಿದಂತೆ ರಾಜ್ಯಗಳ ವಿರುದ್ಧ ಕೇಂದ್ರ ಸರ್ಕಾರ ತೀವ್ರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದ್ದ ಕೆಸಿಆರ್, ಇದರ ವಿರುದ್ಧ ಪ್ರತಿಭಟನೆಯಾಗಿ ತಾವು ಸಭೆಗೆ ಗೈರಾಗುತ್ತಿರುವುದಾಗಿ ಪ್ರಧಾನಿಗೆ ಪತ್ರ ಬರೆದಿದ್ದರು. ಈಗಷ್ಟೇ ಕೋವಿಡ್ 19ರಿಂದ ಚೇತರಿಸಿಕೊಂಡಿರುವ ಬಿಹಾರ ಸಿಎಂ ನಿತೀಶ್ ಕುಮಾರ್, ಪ್ರಧಾನಿ ಮೋದಿ ಅವರ ಜತೆಗಿನ ಸಭೆಯಿಂದ ತಪ್ಪಿಸಿಕೊಳ್ಳುತ್ತಿರುವುದು ಕಳೆದ ಒಂದು ತಿಂಗಳಲ್ಲಿ ಇದು ಎರಡನೇ ಸಲವಾಗಿದೆ.
ಆಜಾದಿ ಕಾ ಅಮೃತ ಮಹೋತ್ಸದ 75ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಭಾರತದ ಸುಸ್ಥಿರ ಅಭಿವೃದ್ಧಿಗೆ ಸಂಘಟನಾತ್ಮಕ ಪ್ರಯತ್ನ ಕೈಗೊಳ್ಳಲು ಚಿಂತಕರ ಚಾವಡಿ ಎಂದು ಗುರುತಿಸಲಾಗಿರುವ ನೀತಿ ಆಯೋಗ ನೀಲ ನಕ್ಷೆ ಸಿದ್ಧಗೊಳಿಸಿವೆ.
ನೀತಿ ಆಯೋ ಸಭೆಯ ಕಾರ್ಯಸೂಚಿಯು ಬೆಳೆ ವೈವಿಧ್ಯೀಕರಣ ಮತ್ತು ಎಣ್ಣೆಕಾಳುಗಳು ಮತ್ತು ದ್ವಿದಳ ಧಾನ್ಯಗಳು ಮತ್ತು ಕೃಷಿ ಸಮುದಾಯಗಳಲ್ಲಿ ಸ್ವಾವಲಂಬನೆಯನ್ನು ಸಾಧಿಸುವುದು, ಶಾಲಾ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ, ಉನ್ನತ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮತ್ತು ನಗರ ಆಡಳಿತ ಮೊದಲಾದವುಗಳನ್ನು ಒಳಗೊಂಡಿದೆ.
ಹಲವು ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳಲ್ಲಿನ ಹಾಗೂ ಸಾರ್ವಜನಿಕ ಸಮಸ್ಯೆಗಳು ಹಾಗೂ ಕೆಲವೊಂದು ಯೋಜನೆಗಳ ಕುರಿತು ಈ ಸಭೆಯಲ್ಲಿ ಪ್ರಸ್ತಾಪಿಸಿದರು. ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಕಲ್ಲಿದ್ದಲು ಸೇರಿದಂತೆ ಪ್ರಮುಖ ಖನಿಜಗಳ ಮೇಲಿನ ರಾಯಲ್ಟಿ ದರವನ್ನು ಪರಿಷ್ಕರಿಸಲು ಮತ್ತು ನೌಕರರ ಹಿತದೃಷ್ಟಿಯಿಂದ ಹೊಸ ಪಿಂಚಣಿ ಯೋಜನೆಯಲ್ಲಿನ ಠೇವಣಿಗಳನ್ನು ಮರುಪಾವತಿಸುವಂತೆ ಒತ್ತಾಯಿಸಿದರು. 20 ಸಾವಿರಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ನಗರಗಳು ಮತ್ತು ನಗರಗಳ ಸಮೀಪವಿರುವ ಗ್ರಾಮೀಣ ಪ್ರದೇಶಗಳಲ್ಲಿ MNREGA ಜಾರಿಗೊಳಿಸಬೇಕು ಎಂದು ಹೇಳಿದರು.
ಇದೇ ವೇಳೆ ಸಗಣಿಯಿಂದ ವರ್ಮಿ ಕಾಂಪೋಸ್ಟ್ ತಯಾರಿಸುತ್ತಿರುವ ಛತ್ತೀಸ್‌ಗಢವನ್ನು ಪ್ರಧಾನಿ ಮೋದಿ ಶ್ಲಾಘಿಸಿದರು.
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ತಮ್ಮ ರಾಜ್ಯವು ಪ್ರತಿ ವರ್ಷ ಪ್ರಾಕೃತಿಕ ವಿಕೋಪಗಳಿಂದ ಅಪಾರ ಹಾನಿ ಅನುಭವಿಸುತ್ತಿದ್ದು, ಇದಕ್ಕೆ ಕೇಂದ್ರ ಸರ್ಕಾರ ವಿಶೇಷ ಕಾಳಜಿ ವಹಿಸಬೇಕು ಎಂದು ಕೋರಿದರು. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಯ ಕಾನೂನು ಖಾತರಿಯ ವಿಷಯವನ್ನು ಪ್ರಸ್ತಾಪಿಸಿದರು.(ಏಜೆನ್ಸೀಸ್​)
ಟ್ಯಾಟೂ ಪ್ರಿಯರೇ ಎಚ್ಚರ… ಹಚ್ಚೆ ಹಾಕಿಸಿಕೊಂಡವರಿಗೆ ಎಚ್​ಐವಿ ಸೋಂಕು- ಆಗಿದ್ದು ಹೀಗೆ..

ಒಟ್ಟಿಗೇ ವಿಮಾನ ಹಾರಿಸಿ ಇತಿಹಾಸ ಸೃಷ್ಟಿಸಿದ ಅಮ್ಮ-ಮಗಳು: ವೈರಲ್​ ವಿಡಿಯೋಗೆ ಕಮೆಂಟ್ಸ್​ಗಳ ಸುರಿಮಳೆ

ಪತ್ನಿ ಹೆಸರಿಗೆ ಮಾಡಿಸಿದ 35 ಲಕ್ಷ ರೂ. ವಿಮೆ: ಕೊಲ್ಲಲು ನೀಡಿದ ಐದು ಲಕ್ಷ ರೂ- ಭಯಾನಕ ಮರ್ಡರ್​ ಕೇಸ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + thirteen =
Remember me
