ನವದೆಹಲಿ:ಇಂದು ಜುಲೈ 22 ದೇಶದ ಇತಿಹಾಸದಲ್ಲಿ ವಿಶೇಷ ದಿನ. 1947ರಲ್ಲಿ ಇದೇ ದಿನ ನಮ್ಮ ರಾಷ್ಟ್ರಧ್ವಜವನ್ನು ಅಳವಡಿಸಿಕೊಂಡ ದಿನವಿದು. ನಮಗೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳಾದ ಹಿನ್ನೆಲೆಯಲ್ಲಿ ಈ ದಿನವನ್ನು ಸ್ಮರಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು, ದೇಶದ ಜನರನ್ನು ಮನವಿಯೊಂದನ್ನು ಮಾಡಿದ್ದಾರೆ.
ಕೇಂದ್ರ ಸರ್ಕಾರ ಆಜಾದ್ ಕಿ ಅಮೃತ್ ಮಹೋತ್ಸವ್ ಎಂದು ವರ್ಷವಿಡೀ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರತಿ ಮನೆಯಲ್ಲಿ ತಿರಂಗ ಅಭಿಯಾನವನ್ನು ಬಲಪಡಿಸೋಣ. ಆಗಸ್ಟ್ 13ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಯಲ್ಲಿ ಹಾರಿಸಿ ಅಥವಾ ಪ್ರದರ್ಶಿಸಿ, ಈ ಅಭಿಯಾನ ರಾಷ್ಟ್ರಧ್ವಜದ ಮೇಲೆ ಭಾರತೀಯರ ಸಂಬಂಧವನ್ನು ಮತ್ತಷ್ಟು ಬಲಗೊಳಿಸುತ್ತದೆ ಎಂದು ಮೋದಿ ಹೇಳಿದ್ದಾರೆ.
ನಮ್ಮ ತ್ರಿವರ್ಣಧ್ವಜದ ಜೊತೆ ಸಹಯೋಗ ಹೊಂದಿದ ಸಮಿತಿಯ ವಿವರ, ಪಂಡಿತ್ ಜವಹರಲಾಲ್ ನೆಹರೂ ಅವರು ಅನಾವರಣಗೊಳಿಸಿದ ತ್ರಿವರ್ಣಧ್ವಜವನ್ನು ಟ್ವೀಟ್​ ಮೂಲಕ ಶೇರ್​ ಮಾಡಿಕೊಂಡಿರುವ ಪ್ರಧಾನಿಯವರು, ಇದು ನಮ್ಮ ಭಾರತದ ಮೊದಲ ಪ್ರಧಾನಿ ಪಂಡಿತ್​ ನೆಹರು ಅನಾವರಣಗೊಳಿಸಿರುವ ಧ್ವಜ ಎಂದು ಹೇಳಿದ್ದಾರೆ.
ದೇಶದ ಪ್ರತಿಯೊಬ್ಬ ನಾಗರಿಕರಲ್ಲಿ ದೇಶಭಕ್ತಿಯ ಭಾವನೆ ಮೂಡಿಸಲು, ಕೇಂದ್ರ ಸರ್ಕಾರವು ‘ಹರ್ ಘರ್ ತಿರಂಗ’ ಎಂಬ ಅತ್ಯುತ್ತಮ ಕಾರ್ಯಕ್ರಮವನ್ನು ಘೋಷಿಸಿದೆ. ದೇಶಾದ್ಯಂತ 20 ಕೋಟಿ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಕಾರ್ಯಕ್ರಮವನ್ನು ನಿಗದಿಪಡಿಸಿದೆ.
ಹರ್ ಘರ್ ತಿರಂಗಾ ಅಭಿಯಾನದ ಪ್ರಚಾರಕ್ಕಾಗಿ ಸರ್ಕಾರ https://harghartiranga.com/ ಎಂಬ ವೆಬ್ ಸೈಟ್ ನ್ನು ಕೂಡಾ ಆರಂಭಿಸಿದೆ. ಈ ವೆಬ್ ಸೈಟ್ ಮೂಲಕ ಭಾರತೀಯರು ತಮ್ಮ ಮನೆಯಲ್ಲಿ ಧ್ವಜ ಹಾರಿಸಬಹುದು. ಇಲ್ಲಿ ವರ್ಚುವಲ್ ಆಗಿ ಪಿನ್ ಎ ಫ್ಲ್ಯಾಗ್ ಮಾಡಬಹುದು ಮತ್ತು ಸೆಲ್ಫಿ ವಿತ್ ಫ್ಲಾಗ್ ಫೋಸ್ಟ್ ಮಾಡಬಹುದು.
Today, 22nd July has a special relevance in our history. It was on this day in 1947 that our National Flag was adopted. Sharing some interesting nuggets from history including details of the committee associated with our Tricolour and the first Tricolour unfurled by Pandit Nehru.pic.twitter.com/qseNetQn4W
— Narendra Modi (@narendramodi)July 22, 2022

ಗರ್ಭಪಾತದ ಕುರಿತು ಸುಪ್ರೀಂ ಮಹತ್ವದ ತೀರ್ಪು: ಕಾಯ್ದೆ ವ್ಯಾಪ್ತಿ ವಿಸ್ತರಣೆ- ಅವಿವಾಹಿತೆಗೆ ಅಸ್ತು

ಇಂದು ಅನಂತ್​ ಕುಮಾರ್​ ಹುಟ್ಟುಹಬ್ಬ: ಮಾಜಿ ಸಚಿವರ ಸ್ಮರಣಾರ್ಥ ಸರ್ಕಾರದಿಂದ ಜಮೀನು ಗಿಫ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
