ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜೂನ್‌ 7) ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಕುತೂಹಲಕ್ಕೆ ಕಾರಣವಾಗಿದೆ.
ಇದಾಗಲೇ ಹಲವು ರಾಜ್ಯಗಳಲ್ಲಿ ಲಾಕ್‌ಡೌನ್‌ ಮಾಡಲಾಗಿದ್ದು, ಕೆಲವು ರಾಜ್ಯಗಳು ಲಾಕ್‌ಡೌನ್‌ ಸಡಿಲಗೊಳಿಸುತ್ತಿವೆ. ಕೆಲವೆಡೆ ಇನ್ನೂ ಲಾಕ್‌ಡೌನ್‌ ಸಡಿಲಿಕೆ ಆಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ ಏನೆಲ್ಲಾ ಮಾತನಾಡಬಹುದು ಎಂಬ ಬಗ್ಗೆ ತೀವ್ರ ಕುತೂಹಲ ಉಂಟಾಗಿದೆ.
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ದೇಶದ ಬಹುತೇಕ ನಗರಗಳಲ್ಲಿ ಸೋಂಕಿನ ಪ್ರಮಾಣ ಕಡಿಮೆ ಆಗುತ್ತಿರುವುದಾಗಿ ವರದಿಯಾಗಿದೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿಯವರು ಭಾಷಣ ಮಾಡುತ್ತಿರುವುದರಿಂದ ಇದರ ಕುರಿತಾಗಿಯೇ ಹೇಳಲಿದ್ದಾರೆಯೇ ಅಥವಾ ಇನ್ನೇನು ಮಾತನಾಡಬಹುದು ಎಂಬ ಬಗ್ಗೆ ಕುತೂಹಲವಿದೆ.
Prime Minister Shri@narendramodiwill address the nation at 5 PM today, 7th June.
— PMO India (@PMOIndia)June 7, 2021

ಕಳೆದ ವರ್ಷ ಇದೇ ಸಮಯದಲ್ಲಿ ಕರೊನಾ ಮೊದಲ ಅಲೆ ಇದ್ದಾಗ ಅನೇಕ ಬಾರಿ ಪ್ರಧಾನಿಯವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಆದರೆ ಈ ಬಾರಿ ಎರಡೇ ಎರಡು ಸಲ ಮಾತನಾಡಿದ್ದಾರೆ. ಇದಾಗಲೇ ಮೋದಿಯವರು ಎರಡು ಬಾರಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಮಾಲೋಚನೆ ಮಾಡಿದ್ದಾರೆ. ಕೆಲವು ಮುಖ್ಯಮಂತ್ರಿಗಳು ತಾವು ಲಾಕ್‌ಡೌನ್‌ ಮುಂದುವರೆಸಿರುವುದಾಗಿ ಹೇಳಿದ್ದರೆ, ಕೆಲವರು ಅನ್‌ಲಾಕ್‌ ಪ್ರಕ್ರಿಯೆ ಶುರು ಮಾಡುವುದಾಗಿ ತಿಳಿಸಿದ್ದಾರೆ.
ಪೊಲೀಸ್​ ಇಲಾಖೆಯಲ್ಲಿ ವೈಜ್ಞಾನಿಕ ಅಧಿಕಾರಿ ಹುದ್ದೆ: 84 ಸ್ಥಾನಗಳಿಗೆ ಅರ್ಜಿ ಆಹ್ವಾನ

VIDEO: ಕ್ಷಣ ಕ್ಷಣವೂ ದೊಡ್ಡದಾಗುತ್ತಾ ಮನೆಗಳನ್ನು ನುಂಗಿಹಾಕ್ತಿದೆ ಭಯಾನಕ ಗುಂಡಿ: ಬೆಚ್ಚಿಬಿದ್ದ ಜನತೆ

ಆಗ ಅಜಯ್‌- ಶಿಖಾ… ಈಗ ಗೌತಮ್‌- ಅಶ್ವತಿ: ಇದು ಮೈಸೂರು- ಮಂಡ್ಯ ಜಿಲ್ಲಾಧಿಕಾರಿಗಳ ವಿಶೇಷತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
