ಲಖನೌ:ಗ್ರಾಮ ಪಂಚಾಯಿತಿಯಿಂದ ಹಿಡಿದು ದೊಡ್ಡ ಮಟ್ಟದ ಚುನಾವಣೆ ಯಾವುದೇ ಇದ್ದರೂ ಚುನಾವಣೆ ಸಮೀಪಿಸಿತು ಎಂದರೆ ಹಣ, ಹೆಂಡ ಸೇರಿದಂತೆ ವಿವಿಧ ವಸ್ತುಗಳನ್ನು ವಶ ಪಡಿಸಿಕೊಳ್ಳುವುದು ನಡೆದೇ ಇರುತ್ತದೆ.
ಮತದಾರರನ್ನು ಆಕರ್ಷಿಸಲು ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಇದೇ ಕಾರಣಕ್ಕೆ ಅವರಿಗೆ ವಿವಿಧ ರೀತಿಯ ಆಮಿಷ ಒಡ್ಡಲು ರಾಶಿ ರಾಶಿ ಹಣ, ಮದ್ಯ ಹಾಗೂ ಇನ್ನಿತರ ವಸ್ತುಗಳನ್ನು ಒಂದೆಡೆ ಕೂಡಿ ಹಾಕುವುದು, ಅವುಗಳನ್ನು ಪೊಲೀಸರು ಸೀಜ್​ ಮಾಡುವುದು ಎಲ್ಲವೂ ಮಾಮೂಲು.
ಆದರೆ ಉತ್ತರ ಪ್ರದೇಶದ ಹಸಂಗಂಜ್‍ನ ಗ್ರಾಮ ಪಂಚಾಯತಿ ಚುನಾವಣೆಗೆ ಎಲ್ಲಕ್ಕಿಂತ ಸ್ವಲ್ಪ ಭಿನ್ನವಾದದ್ದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದೇನೆಂದರೆ ಜಿಲೇಬಿ ಮತ್ತು ಸಮೋಸಾ! ಅಭ್ಯರ್ಥಿಯೊಬ್ಬರು ಮತದಾರರಿಗೆ ಹಂಚುತ್ತಿದ್ದ ಎರಡು ಕ್ವಿಂಟಲ್ ಜಲೇಬಿ ಹಾಗೂ 1,050 ಸಮೋಸಾಗಳನ್ನು ಉನ್ನಾವ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಜತೆಗೆ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದರಿಂದ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲೇಬಿ, ಸಮೋಸಾ ಜತೆ ಎಲ್‍ಪಿಜಿ ಸಿಲಿಂಡರ್, ಹಿಟ್ಟು, ತುಪ್ಪ ಮತ್ತು ಜಲೇಬಿ ಮತ್ತು ಸಮೋಸ ತಯಾರಿಸಲು ಬಳಸುತ್ತಿದ್ದ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಪಂಚಾಯತ್ ಚುನಾವಣೆ ಏಪ್ರಿಲ್ 15 ರಿಂದ ನಾಲ್ಕು ಹಂತಗಳಲ್ಲಿ ನಡೆಯಲಿದ್ದು, ಅಂತಿಮ ಹಂತದ ಚುನಾವಣೆ ಏಪ್ರಿಲ್ 29ರಂದು ನಡೆಯಲಿದೆ ಹಾಗೂ ಫಲಿತಾಂಶ ಮೇ 2 ರಂದು ಪ್ರಕಟವಾಗಲಿದೆ.
ಗಂಡ ಬದುಕಿರುವಾಗಲೇ ಸ್ವಯಾರ್ಜಿತ ಆಸ್ತಿ ಕೇಳಬಹುದೆ? ಪಿತ್ರಾರ್ಜಿತ ಆಸ್ತಿಯಲ್ಲಿ ಯಾರಿಗೆಲ್ಲಾ ಹಕ್ಕಿವೆ?

ನೀವು ಸೈನ್ಸ್​ ವಿದ್ಯಾರ್ಥಿಯೆ? ಹಾಗಿದ್ದರೆ ರಾಜ್ಯ ಸರ್ಕಾರದ ಇಲಾಖೆಯಲ್ಲಿದೆ 154 ಹುದ್ದೆಗಳು

ಕೆಲಸದ ಒತ್ತಡ ತಾಳಲಾಗುತ್ತಿಲ್ಲ… ಸಾಯದೇ ದಾರಿ ಇಲ್ಲ… ಡೆತ್​ನೋಟ್​ ಬರೆದು ಬ್ಯಾಂಕ್​ ಮ್ಯಾನೇಜರ್​ ಆತ್ಮಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 9 =
Remember me
