ನವದೆಹಲಿ :ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ (84) ಅವರ ಆರೋಗ್ಯ ಸ್ಥಿತಿ ಕ್ಷೀಣಿಸುತ್ತಲೇ ಇರುವ ಹಿನ್ನೆಲೆಯಲ್ಲಿ ಅವರನ್ನು ಸೇನಾ ಸಂಶೋಧನಾ ಮತ್ತು ರೆಫರಲ್ ಆಸ್ಪತ್ರೆಗೆ ಸೇರಿಸಲಾಗಿದೆ. ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆಗಳು ಕಂಡು ಬಂದಿಲ್ಲ, ಚಿಂತಾಜನಕ ಪರಿಸ್ಥಿತಿ ಮುಂದುವರಿದಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ತಂದೆಯ ಆರೋಗ್ಯ ಸ್ಥಿತಿಯ ಬಗ್ಗೆ ತೀವ್ರವಾಗಿ ನೊಂದುಕೊಂಡಿರುವ ಅವರ ಮಗಳು ಶರ್ಮಿಸ್ತಾ ಮುಖರ್ಜಿ ಟ್ವಿಟರ್‌ ಖಾತೆಯಲ್ಲಿ ಅಪ್ಪನ ಕುರಿತಾಗಿ ಅನಿಸಿಕೆಯೊಂದನ್ನು ಹಂಚಿಕೊಂಡಿದ್ದಾರೆ.
ಕಳೆದ ವರ್ಷ ಇದೇ ಸಮಯದಲ್ಲಿ ಅಂದರೆ ಅಗಸ್ಟ್ 8ರಂದು ತಂದೆಯವರಿಗೆ ಭಾರತ ರತ್ನ ಗೌರವ ನೀಡಲಾಗಿತ್ತು. ಇದು ಜೀವನ ಅತ್ಯಂತ ಖುಷಿಯ ಕ್ಷಣವಾಗಿತ್ತು. ಇದಾಗಿ ಸರಿಯಾಗಿ ಒಂದು ವರ್ಷಕ್ಕೆ ಅಗಸ್ಟ್ 10ರಿಂದ ಅವರ ಆರೋಗ್ಯ ಗಂಭೀರವಾಗಿರುವುದು ಅತ್ಯಂತ ನೋವಿನ ಸಂಗತಿ ಎಂದಿದ್ದಾರೆ.
“ಆವರ ಜೀವವನಕ್ಕೆ ಈ ಸಮಯದಲ್ಲಿ ಏನು ಒಳ್ಳೆಯದು ಎನಿಸುತ್ತದೆಯೋ ಅದನ್ನು ದಯಪಾಲಿಸು ಏವರೆ, ನನಗೆ ಸಂತೋಷ ಮತ್ತು ದುಃಖ ಏನೇ ಆದರೂ ಅದನ್ನು ಭರಿಸುವ ಶಕ್ತಿ ಕೊಡು’ ಎಂದು ಬರೆದುಕೊಂಡಿದ್ದಾರೆ.
Last year 8August was 1 of d happiest day 4 me as my dad received Bharat Ratna.Exactly a year later on 10Aug he fell critically ill. May God do whatever is best 4 him & give me strength 2 accept both joys & sorrows of life with equanimity. I sincerely thank all 4 their concerns🙏
— Sharmistha Mukherjee (@Sharmistha_GK)August 12, 2020

ಸದ್ಯ ಪ್ರಣಬ್ ಮುಖರ್ಜಿ ಅವರು ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದಾರೆ. ಚಿಕಿತ್ಸೆ ಪೂರಕವಾದ ಸ್ಪಂದನೆ ಪೂರ್ಣ ಪ್ರಮಾಣದಲ್ಲಿ ದೊರಕುತ್ತಿಲ್ಲ ಚಿಕಿತ್ಸೆ ಮುಂದುವರಿಸಲಾಗುತ್ತಿದೆ ಎಂದು ಆಸ್ಪತ್ರೆಯ ಹೆಲ್ತ್‌ ಬುಲೆಟಿನ್‌ನಲ್ಲಿ ವಿವರಿಸಲಾಗಿದೆ.
ಪ್ರಣಬ್ ಮುಖರ್ಜಿ ಅವರಿಗೆ ಕರೊನಾ ‌ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ವೇಳೆ ಅವರಿಗೆ ಮೆದುಳು ಸಂಬಂಧಿಸಿದ ತುರ್ತು ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಬಂದ ಹಿನ್ನೆಲೆ ಆಪರೇಷನ್ ಕೂಡಾ ಮಾಡಲಾಗಿದ್ದು ಸದ್ಯ ಆರೋಗ್ಯ ತೀವ್ರ ಗಂಭೀರ ಪರಿಸ್ಥಿತಿಯಲ್ಲಿದೆ.(ಏಜೆನ್ಸೀಸ್‌)
ಪಾಕ್‌ಗೆ ಬಿಗ್‌ ಷಾಕ್‌: ಸಾಲವೂ ಬಂದ್‌, ತೈಲವೂ ಬಂದ್‌ ಎಂದ ಸೌದಿ ಅರೇಬಿಯಾ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × four =
Remember me
