ನವದೆಹಲಿ:ನ್ಯಾಯಾಂಗ ಮತ್ತು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ವಿರುದ್ಧದ ಆಕ್ಷೇಪಾರ್ಹ ಟ್ವೀಟ್​ಗಳಿಗಾಗಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿಯಾಗಿದ್ದ ಹಿರಿಯ ವಕೀಲ ಪ್ರಶಾಂತ್ ಭೂಷಣ್​ಗೆ 1 ರೂ. ದಂಡ ಕಟ್ಟುವಂತೆ ಕಳೆದ ವಾರವಷ್ಟೇ ಸುಪ್ರೀಂಕೋರ್ಟ್ ತೀರ್ಪು ನೀಡಿದೆ.ಇದರ ಬೆನ್ನಲ್ಲೇ ಇದೀಗ ತೀರಾ ಹಳೆಯದಾಗಿರುವ ಪ್ರಕರಣವೊಂದರ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಕೈಗೆತ್ತಿಕೊಂಡಿದೆ. 11 ವರ್ಷ ಹಳೆಯ ನ್ಯಾಯಾಂಗ ನಿಂದನೆ ಪ್ರಕರಣ ಇದಾಗಿದೆ.ಸುಪ್ರೀಂಕೋರ್ಟ್​ನ 16 ಮುಖ್ಯನ್ಯಾಯಮೂರ್ತಿಗಳಲ್ಲಿ ಅರ್ಧದಷ್ಟು ಮಂದಿ ಭ್ರಷ್ಟರು ಎಂದು ಪ್ರಶಾಂತ್​ ಭೂಷಣ್​ ಅವರು 2009ರಲ್ಲಿ ತೆಹಲ್ಕಾ ನಿಯತಕಾಲಿಕಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿಕೆ ನೀಡಿದ್ದರು. ಅವರ ವಿರುದ್ಧ ಅದೇ ಸಾಲಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು.
ಇದನ್ನೂ ಓದಿ:ತಾಯಿಗೆ ಹೆಣ್ಣುಮಕ್ಕಳ ಪೂರೈಕೆ ಮಾಡುತ್ತಿದ್ದ ಮಕ್ಕಳು- ಬೀದಿ ಬದಿಯೇ ಇವರ ಅಡ್ಡಾ!ಸದ್ಯ ಅದರ ವಿಚಾರಣೆ ನಡೆದಿರಲಿಲ್ಲ. ಇದೀಗ ಈ ಕೇಸ್​ಗೆ ಮರುಜೀವ ಸಿಕ್ಕಿದೆ. ಈ ಪ್ರಕರಣದ ಕುರಿತು ಕೋರ್ಟ್​ಗೆ ಸಹಕಾರ ನೀಡುವಂತೆ ಸುಪ್ರೀಂಕೋರ್ಟ್ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರಿಗೆ ಹೇಳಿದೆ.ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವೀಲ್ಕರ್ ನೇತೃತ್ವದ ಪೀಠ ಇಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ಪ್ರಕರಣದ ವಿಚಾರಣೆ ನಡೆಸಿದೆ. ವಿಚಾರಣೆಯನ್ನು ಅಕ್ಟೋಬರ್ ಎರಡನೇ ವಾರಕ್ಕೆ ಮುಂದೂಡಲಾಗಿದ್ದು, ಅಂದು ಈ ವಿವಾದದ ಕುರಿತು ಕೋರ್ಟ್​ಗೆ ಸಹಾಯ ಮಾಡುವಂತೆ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರನ್ನು ಕೇಳಿಕೊಂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
