ನವದೆಹಲಿ:ನನಗೆ ಕರುಣೆ ಬೇಡ, ನಾನು ಅದನ್ನು ಒತ್ತಾಯಿಸುವುದೂ ಇಲ್ಲ. ಕೋರ್ಟ್‌ ಏನೇ ಶಿಕ್ಷೆ ಕೊಟ್ಟರೂ ಅದನ್ನು ಅನುಭವಿಸಲು ಸಿದ್ಧನಿದ್ದೇನೆ ಎಂದು ಅಪರಾಧಿ ಸ್ಥಾನದಲ್ಲಿ ನಿಂತಿರುವ ಪ್ರಸಿದ್ಧ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ.ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಾಗಲೇ ಇವರು ತಪ್ಪಿತಸ್ಥರು ಎಂದು ಕೋರ್ಟ್‌ ಹೇಳಿತ್ತು. ಇಂದು ಅವರ ಶಿಕ್ಷೆ ಅವಧಿ ನಿಗದಿಪಡಿಸುವ ವಿಚಾರಣೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ನಡೆಯುತ್ತಿತ್ತು.ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡ ಭೂಷಣ್‌ ಅವರು, ಪ್ರಕರಣದಲ್ಲಿ ತಾವು ದೋಷಿ ಎಂದು ನೀಡಿರುವ ಆದೇಶವನ್ನು ಪುನರ್‌ ಪರಿಶೀಲಿಸಲು ಕೋರಿ ಅರ್ಜಿ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ, ವಿಚಾರಣೆ ದಿನಾಂಕವನ್ನು ಮುಂದೂಡುವಂತೆ ಕೋರಿದರು. ಆದರೆ ಈ ಮನವಿಯನ್ನು ಮಾನ್ಯ ಮಾಡಲು ಕೋರ್ಟ್‌ ನಿರಾಕರಿಸಿತು.
ಇದನ್ನೂ ಓದಿ:ಮೊದಲ ಬಾರಿಗೆ ಪಿಸಿಎಂಬಿ ಪುಸ್ತಕ ಕನ್ನಡ ಭಾಷೆಯಲ್ಲಿ: ಸುರೇಶ್‌ ಕುಮಾರ್‌
ಅದಕ್ಕೆ ಬೇಸರ ವ್ಯಕ್ತಪಡಿಸಿದ ಪ್ರಶಾಂತ್‌ ಭೂಷಣ್‌ ಅವರು, ನ್ಯಾಯಾಲಯದ ತಿರಸ್ಕಾರಕ್ಕೆ ಗುರಿಯಾಗಿದ್ದಕ್ಕೆ ತುಂಬಾ ಬೇಸರವಾಗಿದೆ. ಆರೋಗ್ಯಕರ ಪ್ರಜಾಪ್ರಭುತ್ವಕ್ಕಾಗಿ, ಟೀಕೆಗಳನ್ನು ಮಾಡಬೇಕಾಗುತ್ತದೆ. ಮೂರು ದಶಕಗಳಿಂದ ಯಾವ ಘನ ನ್ಯಾಯಾಲಯದ ಗೌರವವನ್ನು ಎತ್ತಿ ಹಿಡಿಯಲು ಪ್ರಯತ್ನಿಸಿದ್ದೇನೋ ಅದೇ ನ್ಯಾಯಾಲಯ ನಿಂದನೆ ಪ್ರಕರಣದಲ್ಲಿ ನನ್ನನ್ನು ತಪ್ಪಿತಸ್ಥನೆಂದು ಘೋಷಿಸಿದೆ. ನನ್ನನ್ನು ಸಂಪೂರ್ಣವಾಗಿ ತಪ್ಪು ಅರ್ಥ ಮಾಡಿಕೊಂಡಿದ್ದಕ್ಕೆ ನನಗೆ ನೋವಿದೆ. ಉದ್ದೇಶವನ್ನು ಅರಿಯದೆ, ಸ್ಪಷ್ಟ ವಿಚಾರಣೆ ನಡೆಸದೆ ನ್ಯಾಯಾಲಯ ಈ ತೀರ್ಮಾನಕ್ಕೆ ಬಂದಿರುವುದಕ್ಕೆ ಆಘಾತವಾಗಿದೆ ಎಂದಿದ್ದಾರೆ.ಅಂತಿಮವಾಗಿ ಕೋರ್ಟ್ 3 ದಿನಗಳ ಒಳಗಡೆ ಮರು ಪರಿಶೀಲನಾ ಅರ್ಜಿಯನ್ನು ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.ಏನಿದು ಪ್ರಕರಣ. ಇಲ್ಲಿ ನೋಡಿ…ಸುಪ್ರೀಂಕೋರ್ಟ್‌ಗೆ ಅವಹೇಳನ- ಖ್ಯಾತ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಅಪರಾಧಿ
ಸ್ಮಾರ್ಟ್‌ಫೋನ್‌ ಉದ್ಯಮದಲ್ಲಿ ವರ್ಷಾಂತ್ಯದಲ್ಲಿ ಭರಪೂರ ಉದ್ಯೋಗ


ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen + seven =
Remember me
