ಪಟ್ನಾ:ವಾಯು ಪಡೆ, ನೌಕಾ ಪಡೆ ಹಾಗೂ ಭೂಸೇನೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಅಗ್ನಿಪಥ’ ಯೋಜನೆಯನ್ನು ವಿರೋಧಿಸಿ ಬಿಹಾರ ಸೇರಿದಂತೆ ಕೆಲವು ಕಡೆಗಳಲ್ಲಿ ಪ್ರತಿಭಟನೆ ಶುರುವಾಗಿದ್ದು, ಅದೀಗ ಕಲ್ಲು ತೂರಾಟಕ್ಕೂ ಅವಕಾಶ ಮಾಡಿಕೊಟ್ಟಿದೆ.
ಅಗ್ನಿಪಥಕ್ಕೆ ಕಾಂಗ್ರೆಸ್​ ಮುಖಂಡರಾದ ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿರುವ ನಡುವೆಯೇ ಬಿಹಾರದಲ್ಲಿ ಕಲ್ಲು ತೂರಾಟ ನಡೆಸಲಾಗುತ್ತಿದೆ. ಇಂದು ಬೆಳಗ್ಗೆ ರೈಲಿಗೆ ಬೆಂಕಿ ಹಚ್ಚುವ ಮೂಲಕ ವಿಕೃತ ಮೆರೆದಿದ್ದ ಪುಂಡರ ಗುಂಪು ಇದೀಗ ಈ ಯೋಜನೆಯನ್ನು ನೆಪ ಮಾಡಿಕೊಂಡು ಬಿಜೆಪಿ ಮುಖಂಡರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದಾಗಲೇ 22 ರೈಲುಗಳ ಪ್ರಯಾಣವನ್ನು ರದ್ದುಗೊಳಿಸಲಾಗಿದೆ.
ನಾವಡದಲ್ಲಿ ನ್ಯಾಯಾಲಯಕ್ಕೆ ತೆರಳುತ್ತಿದ್ದ ಬಿಜೆಪಿ ಶಾಸಕಿ ಅರುಣಾದೇವಿ ಅವರ ವಾಹನದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ಶಾಸಕಿ ಸೇರಿದಂತೆ ಪಕ್ಷದ ಐವರು ಮುಖಂಡರು ಗಾಯಗೊಂಡಿದ್ದಾರೆ. ನಾವಡದಲ್ಲಿರುವ ಬಿಜೆಪಿ ಕಚೇರಿಯನ್ನೂ ಧ್ವಂಸಗೊಳಿಸಲಾಗಿದೆ.
“ನನ್ನ ಕಾರಿನ ಮೇಲೆ ಪಕ್ಷದ ಧ್ವಜವನ್ನು ಅಳವಡಿಸಿದ್ದನ್ನು ನೋಡಿದ ಪ್ರತಿಭಟನಾಕಾರರು ಪ್ರಚೋದನೆಗೆ ಒಳಗಾಗಿದ್ದಾರೆ, ಅವರು ಅದನ್ನು ಹರಿದು ಹಾಕಿದರು. ನನ್ನ ಚಾಲಕ, ಇಬ್ಬರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ವೈಯಕ್ತಿಕ ಸಿಬ್ಬಂದಿಗೆ ಗಾಯಗಳಾಗಿವೆ” ಎಂದು ಶಾಸಕಿ ಹೇಳಿದ್ದಾರೆ. ಈ ಬಗ್ಗೆ ಪೊಲೀಸರಲ್ಲಿ ದೂರು ದಾಖಲಿಸಲೂ ನನಗೆ ತುಂಬಾ ಭಯವಾಯಿತು ಎಂದಿದ್ದಾರೆ.
ಅರ್ರಾದಲ್ಲಿರುವ ರೈಲು ನಿಲ್ದಾಣದಲ್ಲಿ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪ್ರತಿಭಟನಾಕಾರರ ಬೃಹತ್ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಅನ್ನು ಆಶ್ರಯಿಸಬೇಕಾಯಿತು. ಪ್ರತಿಭಟನಾಕಾರರು ಹಳಿಗಳ ಮೇಲೆ ಪೀಠೋಪಕರಣಗಳನ್ನು ಎಸೆದು ಬೆಂಕಿ ಹಚ್ಚಿದರು. ಬೆಂಕಿಯನ್ನು ನಂದಿಸಲು ರೈಲ್ವೆ ಸಿಬ್ಬಂದಿ ಅಗ್ನಿಶಾಮಕಗಳನ್ನು ಬಳಸಬೇಕಾಯಿತು.
ಈ ನಡುವೆ ರಾಹುಲ್​ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಟ್ವೀಟ್​ ಮಾಡುವ ಮೂಲಕ ಅಗ್ನಿಪಥ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ‘ದೇಶ ಪಾಕಿಸ್ತಾನ ಹಾಗೂ ಚೀನಾದಿಂದ ಬೆದರಿಕೆ ಎದುರಿಸುತ್ತಿದೆ. ಆದರೆ ಅಗ್ನಿಪಥ ಯೋಜನೆಯಿಂದ ಸೇನಾಪಡೆಗಳ ಕಾರ್ಯವಿಧಾನದ ಮೇಲೆ ಪರಿಣಾಮ ಬೀರುತ್ತದೆ. ದೇಶದ ಗೌರವ, ಸಂಪ್ರದಾಯ, ಪಡೆಗಳ ಶಿಸ್ತಿನೊಂದಿಗೆ ಸರ್ಕಾರವು ರಾಜಿ ಮಾಡಿಕೊಳ್ಳುವುದನ್ನು ಬಿಡಬೇಕು ಎಂದು ರಾಹುಲ್​ ಗಾಂಧಿ ಹೇಳಿದ್ದಾರೆ.
When India faces threats on two fronts, the uncalled for Agnipath scheme reduces the operational effectiveness of our armed forces.
The BJP govt must stop compromising the dignity, traditions, valour & discipline of our forces.
— Rahul Gandhi (@RahulGandhi)June 15, 2022

ಬಿಜೆಪಿ ಸರ್ಕಾರವು ಸೈನ್ಯದ ನೇಮಕಾತಿಯನ್ನು ಏಕೆ ತನ್ನ ಪ್ರಯೋಗಾಲಯವನ್ನಾಗಿ ಮಾಡುತ್ತಿದೆ? ಸೈನಿಕರ ಸುದೀರ್ಘ ಕೆಲಸ ಸರ್ಕಾರಕ್ಕೆ ಹೊರೆಯಾಗಿದೆಯೇ? ಈ 4 ವರ್ಷಗಳ ಆಡಳಿತವು ನೆಪವಾಗಿದೆ ಎಂದು ಯುವಕರು ಹೇಳುತ್ತಿದ್ದಾರೆ. ಮಾಜಿ ಸೈನಿಕರೂ ಇದನ್ನು ಒಪ್ಪುವುದಿಲ್ಲ.ಸೇನಾ ನೇಮಕಾತಿಗೆ ಸಂಬಂಧಿಸಿದ ಸೂಕ್ಷ್ಮ ವಿಚಾರದ ಬಗ್ಗೆ ಚರ್ಚೆ,ಗಂಭೀರ ಚಿಂತನೆ ಇಲ್ಲ ಕೇವಲ ಸ್ವೇಚ್ಛಾಚಾರ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.
भाजपा सरकार सेना भर्ती को अपनी प्रयोगशाला क्यों बना रही है? सैनिकों की लंबी नौकरी सरकार को बोझ लग रही है?
युवा कह रहे हैं कि ये 4 साला नियम छलावा है। हमारे पूर्व सैनिक भी इससे असहमत हैं।
सेना भर्ती से जुड़े संवेदनशील मसले पर न कोई चर्चा, न कोई गंभीर सोच-विचार।बस मनमानी?pic.twitter.com/nNn83Cq0sq
— Priyanka Gandhi Vadra (@priyankagandhi)June 15, 2022

ಉದ್ಯೋಗ ಪರ್ವಕ್ಕೆ ಅಗ್ನಿಪಥ

ಕೇಂದ್ರದ ಅಗ್ನಿಪಥ ಯೋಜನೆ ವಿರೋಧಿಸಿ ಬಿಹಾರದಲ್ಲಿ ಪ್ರತಿಭಟನೆ: ರೈಲಿಗೆ ಬೆಂಕಿ ಹಚ್ಚಿ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − four =
Remember me
