ನ್ಯೂಯಾರ್ಕ್:ಸಾಹಿತ್ಯ, ಸಂಗೀತ ಹಾಗೂ ಮಾಧ್ಯಮ ಕ್ಷೇತ್ರಗಳಲ್ಲಿ ಅಮೋಘ ಸಾಧನೆ ಮಾಡಿದವರಿಗೆ ನೀಡುವ ಅಮೆರಿಕದ ಪುಲಿಟ್ಜರ್ ಪ್ರಶಸ್ತಿ ಪ್ರಕಟಗೊಂಡಿದ್ದು, ನಾಲ್ವರು ಭಾರತೀಯರು ಇದಕ್ಕೆ ಭಾಜನರಾಗಿದ್ದಾರೆ.
ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಮತ್ತು ಸರ್ಕಾರಿ ವಿಶೇಷ ಪಡೆಗಳ ಮಧ್ಯೆ ನಡೆದ ಸಂಘರ್ಷ ವೇಳೆ ಬಲಿಯಾಗಿದ್ದ ಫೋಟೋ ಜರ್ನಲಿಸ್ಟ್ ಡ್ಯಾನಿಶ್ ಸಿದ್ದಿಕಿ ಅವರಿಗೆ ಎರಡನೆಯ ಬಾರಿ ಈ ಪ್ರಶಸ್ತಿ ಲಭಿಸಿದೆ. ಈ ಬಾರಿ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅಪ್ಘಾನಿಸ್ತಾನದ ಕಂದಹಾರ್ ನಗರದ ಸ್ಪಿನ್ ಬೋಲ್ಡಾಕ್ ಜಿಲ್ಲೆಯಲ್ಲಿ ಆಫ್ಘನ್ ಪಡೆಗಳು ಮತ್ತು ತಾಲಿಬಾನ್ ನಡುವಿನ ಘರ್ಷಣೆ ವರದಿ ಮಾಡುವಾಗ ಮೃತಪಟ್ಟಿದ್ದರು.
ಇಷ್ಟು ಮಾತ್ರವಲ್ಲದೇ ಭಾರತದಲ್ಲಿ ಕೋವಿಡ್-19 ಚಿತ್ರಣವನ್ನು ಮನಮುಟ್ಟುವಂತೆ ಕ್ಯಾಮೆರಾದಲ್ಲಿ ಫೋಟೋ ಕ್ಲಿಕ್ಕಿಸಿದ್ದ ರಾಯಿಟರ್ಸ್ ಸುದ್ದಿ ಸಂಸ್ಥೆಯ ವಿಡಿಯೋ ಜರ್ನಲಿಸ್ಟ್‌ಗಳಿಗೆ ಈ ಸಾಲಿನ ಪ್ರಶಸ್ತಿ ಸಿಕ್ಕಿದೆ. ಈ ತಂಡದಲ್ಲಿ ಡ್ಯಾನಿಶ್ ಸಿದ್ದಿಕಿ ಜತೆಗೆ ಅದ್ನಾನ್ ಅಬಿದಿ, ಸಾನ್ನಾ ಇರ್ಷದ್ ಮಟ್ಟೂ ಮತ್ತು ಅಮಿತ್ ದಾವೆ ಅವರೂ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಡ್ಯಾನಿಶ್ ಸಿದ್ದಿಕಿ ಅವರು 2018ರಲ್ಲಿಯೂ ಈ ಪ್ರಶಸ್ತಿಗೆ ಭಾಜನರಾಗಿದ್ದರು. ರೋಹಿಂಗ್ಯಾ ಬಿಕ್ಕಟ್ಟಿನ ವರದಿಗಾಗಿ ಅವರಿಗೆ ಆಗ ಈ ಪ್ರಶಸ್ತಿ ಲಭಿಸಿತ್ತು. ಆಗ ಸಿದ್ದಿಕಿ ಅವರು ರಾಯಿಟರ್ಸ್ ತಂಡದ ಭಾಗವಾಗಿ ಈ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.
ಫ್ಲೋರಿಡಾದ ಬ್ಯಾಟರಿ ಸಂಸ್ಕರಣೆ ಘಟಕದೊಳಗೆ ವಿಷಯುಕ್ತ ವಾತಾವರಣ ಇರುವುದರ ಕುರಿತು ಸರಣಿ ತನಿಖಾ ವರದಿಗಳನ್ನು ಮಾಡಿದ್ದ ‘ಟಂಪಾ ಬೇ ಟೈಮ್ಸ್’ ಪತ್ರಿಕೆಯ ಮೂವರು ಪತ್ರಕರ್ತರಿಗೆ ಪುಲಿಟ್ಜರ್ ಪ್ರಶಸ್ತಿ ಲಭಿಸಿದೆ. ಇವರ ವರದಿಯ ಪರಿಣಾಮವಾಗಿ ಘಟಕದಲ್ಲಿ ಅಧಿಕಾರಿಗಳು ಸುರಕ್ಷಿತ ಕ್ರಮಗಳನ್ನ ಕೈಗೊಂಡರು.
ಫ್ಲೋರಿಡಾದ ಸೀಸೈಡ್ ಅಪಾರ್ಟ್ಮೆಂಟ್ ಟವರ್‌ಗಳು ಕುಸಿದ ಘಟನೆಯನ್ನು ಬ್ರೇಕಿಂಗ್ ನ್ಯೂಸ್ ಕೊಟ್ಟ ‘ಮಿಯಾಮಿ ಹೆರಾಲ್ಡ್’ ಪತ್ರಿಕೆಯ ಸಿಬ್ಬಂದಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇರಾಕ್, ಸಿರಿಯಾ ಮತ್ತು ಅಫ್ಘಾನಿಸ್ತಾನ್ ದೇಶಗಳಲ್ಲಿ ಅಮೆರಿಕ ಸೇನೆ ನಡೆಸಿದ ಕಾರ್ಯಾಚರಣೆಯಿಂದ ನಾಗರಿಕರಿಗೆ ಆಗಿರುವ ಸಾವುನೋವುಗಳನ್ನು ಮನಮುಟ್ಟುವಂತೆ ಕಟ್ಟಿಕೊಟ್ಟಿದ್ದ ‘ನ್ಯೂಯಾರ್ಕ್ ಟೈಮ್ಸ್’ ಪತ್ರಿಕೆಯ ಸಿಬ್ಬಂದಿಗೆ ಹಾಗೂ ಅಮೆರಿಕ ಅಧ್ಯಕ್ಷೀಯ ಚುನಾವಣೆ ಬಳಿಕ ಕಳೆದ ವರ್ಷ ಅಮೆರಿಕ ಸಂಸತ್ತಿನ ( ಕ್ಯಾಪಿಟಲ್ ಹಿಲ್) ಮೇಲೆ ಟ್ರಂಪ್ ಬೆಂಬಲಿಗರು ದಾಳಿ ಮಾಡಿದ ಘಟನೆಯನ್ನು ವರದಿ ಮಾಡಿದ ಪತ್ರಕರ್ತರಿಗೆ ವಿಶೇಷ ಗೌರವ ನೀಡಲಾಗಿದೆ.
ಇವುಗಳನ್ನು ಹೊರತುಪಡಿಸಿ ವಿವರಣಾತ್ಮಕ ವರದಿಗಾರಿಕೆ, ಸ್ಥಳೀಯ ವರದಿಗಾರಿಕೆ, ರಾಷ್ಟ್ರೀಯ ವರದಿಗಾರಿಕೆ, ಅಂತಾರಾಷ್ಟ್ರೀಯ ವರದಿಗಾರಿಕೆ, ವಿಶೇಷ ಬರಹ, ಕಾಮೆಂಟರಿ, ಸಂಪಾದಕೀಯ ಬರಹ, ಧ್ವನಿ ವರದಿಗಾರಿಕೆ ಮೊದಲಾದ ಪತ್ರಿಕೋದ್ಯಮ ವಿಭಾಗದಲ್ಲಿ ಹಾಗೂ ಸಾಹಿತ್ಯ, ಸಂಗೀತ ವಿಭಾಗದಲ್ಲೂ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.
ಅವಳ ಗಂಡ ಇವಳಿಗೆ, ಇವಳ ಗಂಡ ಅವಳಿಗೆ: ಕರೆಂಟ್‌ ಹೋದಾಗ ಆಗೋಯ್ತು ಎಡವಟ್ಟು…

ಬಿಜೆಪಿ ಮುಖಂಡನಿಂದ ಭಾರಿ ವಂಚನೆ? ಡೆತ್‌ನೋಟ್‌ ಬರೆದಿಟ್ಟು ಮೈಸೂರು ಉದ್ಯಮಿ ಆತ್ಮಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − five =
Remember me
