ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಚಂದಗಾಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
24 ಗಂಟೆಗಳಲ್ಲಿ ದಕ್ಷಿಣ ಕಾಶ್ಮೀರದಲ್ಲಿ ನಡೆದ ಎರಡನೇ ಎನ್‌ಕೌಂಟರ್ ಇದಾಗಿದೆ. 2022ರ ಮೊದಲ ಐದು ದಿನಗಳಲ್ಲಿ ಐದನೆಯದು. ಈ ಎಲ್ಲ ಎನ್‌ಕೌಂಟರ್‌ಗಳಲ್ಲಿ ಇಂದು ಹತರಾದ 3 ಜನ ಉಗ್ರರು ಸೇರಿದಂತೆ ಎಂಟು ಮಂದಿ ಉಗ್ರರನ್ನು ಕೊಲ್ಲಲಾಗಿದೆ.
ಈಗ ಹತರಾಗಿರುವ ಉಗ್ರರು ಜೈಶ್ ಎ ಮೊಹಮ್ಮದ್ ಸಂಘಟನೆಯವರಾಗಿದ್ದು, ಅವರಲ್ಲಿ ಒಬ್ಬ ಪಾಕಿಸ್ತಾನ ಮೂಲದವನು. ಉಗ್ರರಿಂದ 2 ಎಂ- 4 ಕಾರ್ಬೈನ್‌ಗಳು ಮತ್ತು 1 ಎಕೆ ಸರಣಿ ರೈಫಲ್ ಸೇರಿದಂತೆ ಯುದ್ಧ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ವಲಯ ಐಜಿಪಿ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಕೆಲ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ಬಂದಿತ್ತು. ಪೊಲೀಸರು ಮತ್ತು ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದವು. ನಂತರ ಅವರ ನಡುವೆ ಗುಂಡಿನ ಕಾಳಗ ನಡೆದಿದೆ.
ಈ ವರ್ಷ ನಡೆದ 5 ಎನ್‌ಕೌಂಟರ್​​ಗಳಲ್ಲಿ, ಶ್ರೀನಗರದಲ್ಲಿ ಕೇವಲ ಒಂದು ಗಂಟೆಯ ಅವಧಿಯಲ್ಲಿ 2 ಎನ್‌ಕೌಂಟರ್‌ ಕಳೆದ ಸೋಮವಾರ ನಡೆದಿದೆ. ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಒಂದು ಎನ್‌ಕೌಂಟರ್ ಮತ್ತು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳು ತಲಾ ಒಂದು ಎನ್‌ಕೌಂಟರ್ ನಡೆದಿವೆ. ಮಂಗಳವಾರ ಕುಲ್ಗಾಮ್ ಜಿಲ್ಲೆಯಲ್ಲಿ ಇಬ್ಬರು ಉಗ್ರರು ಸತ್ತಿದ್ದರೆ, ಜಿಲ್ಲೆಯ ಓಕೆ ಗ್ರಾಮದಲ್ಲಿ ಇನ್ನೊಂದು ಎನ್‌ಕೌಂಟರ್ ನಡೆದಿದ್ದು, ಇದರಲ್ಲಿ ಇಬ್ಬರು ಸ್ಥಳೀಯ ಎಲ್‌ಇಟಿ ಉಗ್ರರು ಹತರಾಗಿದ್ದಾರೆ.
10 ರಿಂದ 12ನೇ ತರಗತಿ ಹೊರತುಪಡಿಸಿ ಉಳಿದ ತರಗತಿಗಳು ಆನ್‌ಲೈನ್‌ನಲ್ಲಿ- ನೈಟ್‌ ಕರ್ಫ್ಯೂ ಮುಂದುವರಿಕೆ

ಲಂಚಕ್ಕೆ ಹಣ ಕೊಡದ ಗರ್ಭಿಣಿ ಪತ್ನಿ ಜತೆ ಮಗನನ್ನೂ ಜೀವಂತ ಸುಟ್ಟುಹಾಕಿದ ಪಾಪಿ ಗಂಡ! ಕಣ್ಣಿಗೆ ಬಟ್ಟೆಕಟ್ಟಿ ದುಷ್ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
