ಚಂಡೀಗಢ:ಮೂರು ಲೋಕಸಭೆ ಹಾಗೂ ಏಳು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗುತ್ತಿದೆ.
ಈ ಪೈಕಿ ಪಂಜಾಬ್​ನ ಆಡಳಿತಾರೂಢ ಆಪ್​ಗೆ ಭಾರಿ ಮುಖಭಂಗವಾಗಿರುವ ಘಟನೆ ನಡೆದಿದೆ. ಪಂಜಾಬ್​ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಭದ್ರಕೋಟೆಯಾಗಿದ್ದ ಸಂಗ್ರೂರ್ ಲೋಕಸಭಾ ಕ್ಷೇತ್ರದಲ್ಲಿ ಆಮ್​ ಆದ್ಮಿ ಪಕ್ಷದ ಅಭ್ಯರ್ಥಿ ಹೀನಾಯ ಸೋಲು ಕಂಡಿದ್ದಾರೆ. ಶಿರೋಮಣಿ ಅಕಾಲಿದಳದ ಅಭ್ಯರ್ಥಿ ಸಿಮ್ರಂಜಿತ್ ಸಿಂಗ್ ಮಾನ್ ಗೆದ್ದು ಬೀಗಿದ್ದಾರೆ. ಸುಮಾರು 7 ಸಾವಿರ ಮತಗಳ ಅಂತರದಿಂದ ಆಪ್​ನ ಗುರ್ಮೈಲ್ ಸಿಂಗ್​ ಅವರನ್ನು ಸೋಲಿಸಿದ್ದಾರೆ.
77 ವರ್ಷದ ಸಿಮ್ರಂಜಿತ್ ಸಿಂಗ್ ಮಾನ್ ಅವರು ಮಾಜಿ ಸಂಸದ ಮತ್ತು ಶಿರೋಮಣಿ ಅಕಾಲಿದಳದ (ಅಮೃತಸರ) ಅಧ್ಯಕ್ಷ. ಕಾಂಗ್ರೆಸ್ ಅಭ್ಯರ್ಥಿ ದಲ್ವೀರ್ ಸಿಂಗ್ ಗೋಲ್ಡಿ, ಬಿಜೆಪಿಯ ಕೇವಲ್ ಧಿಲ್ಲೋನ್ ಮತ್ತು ಅಕಾಲಿದಳದ ಕಮಲದೀಪ್ ಕೌರ್ ರಾಜೋನಾ ಕ್ರಮವಾಗಿ ಮೂರು, ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ.
2022 ರ ವಿಧಾನಸಭಾ ಚುನಾವಣೆಯಲ್ಲಿ ಲೆಹ್ರಾ, ದಿರ್ಬಾ, ಬರ್ನಾಲಾ, ಸುನಮ್, ಭದೌರ್, ಮೆಹಲ್ ಕಲಾನ್, ಮಲೇರ್‌ಕೋಟ್ಲಾ, ಧುರಿ ಮತ್ತು ಸಂಗ್ರೂರ್ ಎಲ್ಲಾ ಒಂಬತ್ತು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಸಂಗ್ರೂರ್ ಸಂಸದೀಯ ಕ್ಷೇತ್ರವನ್ನು ಭದ್ರಕೋಟೆ ಎಂದು ಪರಿಗಣಿಸಲಾಗಿದೆ. ಈ ವರ್ಷದ ಆರಂಭದಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ನಂತರ ಭಗವಂತ್ ಮಾನ್ ಅವರು ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಉಪಚುನಾವಣೆ ನಡೆದಿತ್ತು. ಈಗ ರಾಜ್ಯದ ಮುಖ್ಯಮಂತ್ರಿಯಾಗಿರುವ ಭಗವಂತ್ ಮಾನ್ ಅವರು 2014 ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಸಂಗ್ರೂರ್ ಕ್ಷೇತ್ರವನ್ನು ಗೆದ್ದಿದ್ದರು.
50 ಮಂದಿ ಹೋದ ಮೇಲೂ ಶಿವಸೇನೆ ಮುಳುಗಿಹೋಯ್ತಾ? ಜೆಡಿಎಸ್ ತೊರೆಯುವವರಿಗೆ ಎಚ್​ಡಿಕೆ ಟಾಂಗ್

ಗಾಯಕ ಕಿಶೋರ್​ ಕುಮಾರ್​ರನ್ನೇ ಬ್ಯಾನ್​ ಮಾಡಿದ್ರು, ಆಮೇಲೆ ಆಗಿದ್ದು… ತುರ್ತು ಪರಿಸ್ಥಿತಿಯ ಕರಾಳ ದಿನ ನೆನಪಿಸಿದ ಪ್ರಧಾನಿ

ಮದ್ವೆಯಾಗಿ ಪತ್ನಿಯರನ್ನು ಮಾರಾಟ ಮಾಡುತ್ತಿದ್ದ ಭಯಾನಕ ಕ್ರಿಮಿನಲ್! 12 ಮಂದಿಗೆ ಮೋಸ ಮಾಡಿದ್ದವ ಕೊನೆಗೂ ಸಿಕ್ಕಿಬಿದ್ದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
