ಡೆಹ್ರಾಡೂನ್​ (ಉತ್ತರಾಖಂಡ):ಉತ್ತರಾಖಂಡ ಮುಖ್ಯಮಂತ್ರಿ, ಬಿಜೆಪಿಯ ಪುಷ್ಕರ್ ಸಿಂಗ್ ಧಾಮಿ ಅವರು ನಿರ್ಣಾಯಕ ಉಪ ಚುನಾವಣೆಯಲ್ಲಿ ಶುಕ್ರವಾರ ಗೆಲುವು ಕಂಡಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ನಡೆದ ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಗೆಲ್ಲಿಸಿ, ಸೋಲು ಕಂಡಿದ್ದ ಮುಖ್ಯಮಂತ್ರಿ ಪುಷ್ಕರ್​ ಸಿಂಗ್ ಧಾಮಿ ಚಂಪಾವತ್​ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಪುಷ್ಕರ್ ಸಿಂಗ್ ಪರಾಭವಗೊಂಡಿದ್ದರಿಂದ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಉಪ ಚುನಾವಣೆಯ ಗೆಲುವು ಅಗತ್ಯವಾಗಿತ್ತು. ಚಂಪಾವತ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು 55,025 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪುನಃ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ.
ಧಾಮಿ ಅವರು, ಎದುರಾಳಿಯಾದ ಕಾಂಗ್ರೆಸ್​ ಅಭ್ಯರ್ಥಿ ನಿರ್ಮಲಾ ಗೆಹ್​ತೊರ್​, ಸಮಾಜವಾದಿ ಪಕ್ಷದ ಮನೋಜ್ ಕುಮಾರ್ ಭಟ್​ ಹಾಗೂ ಸ್ವತಂತ್ರ ಅಭ್ಯರ್ಥಿ ಹಿಮಾಂಶು ಗಡ್ಕೊಟಿ ಅವರನ್ನು ಸೋಲಿಸಿದ್ದಾರೆ. ಕುತೂಹಲದ ವಿಷಯ ಎಂದರೆ ಕಾಂಗ್ರೆಸ್​ ಅಭ್ಯರ್ಥಿ ನಿರ್ಮಲಾ ಠೇವಣಿ ಸಹ ಕಳೆದುಕೊಂಡಿದ್ದಾರೆಂದು ತಿಳಿದು ಬಂದಿದೆ.
ಮೇ 31ರಂದು ನಡೆದಿದ್ದ ಚುನಾವಣೆಯಲ್ಲಿ ಧಾಮಿ ಅವರು ಎದುರಾಳಿ ಕಾಂಗ್ರೆಸ್​ನ ನಿರ್ಮಲಾ ವಿರುದ್ಧ 54 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ. ಉಪಚುನಾವಣೆಯಲ್ಲಿ ಒಟ್ಟು 61,771 ಮತಗಳು ಚಲಾವಣೆಯಾಗಿದ್ದವು. 13ನೇ ಸುತ್ತಿನವರೆಗೆ 61 ಸಾವಿರಕ್ಕೂ ಹೆಚ್ಚು ಮತಗಳ ಎಣಿಕೆ ನಡೆದಿದೆ.
ಚಂಪಾವತ್ ಕ್ಷೇತ್ರದ ಬಿಜೆಪಿ ಶಾಸಕ ಕೈಲಾಶ್ ಗೆಹ್ತೋರಿ ಅವರು ರಾಜೀನಾಮೆ ನೀಡುವ ಮೂಲಕ ತಮ್ಮ ಸ್ಥಾನ ತ್ಯಾಗ ಮಾಡಿ, ಪುಷ್ಕರ್ ಸಿಂಗ್ ಧಾಮಿ ಅವರಿಗೆ ಅನುವು ಮಾಡಿಕೊಟ್ಟಿದ್ದರು.
ಮರು ಮದುವೆಯಾದಾಕೆ, ತನ್ನ ಮಗುವಿನ ಅಪ್ಪನ ಹೆಸರು ಬದಲಿಸಬಹುದೆ? ಕಾನೂನು ಏನು ಹೇಳಿದೆ ನೋಡಿ…

ಪ್ರತಿ ಮಸೀದಿಯಲ್ಲಿ ಶಿವಲಿಂಗ ಹುಡುಕೋದ್ಯಾಕೆ? ಅವರೇನೂ ಹೊರಗಿನವರಲ್ಲ: ಸಂಚಲನ ಮೂಡಿಸಿದ ಭಾಗವತ್​ ಹೇಳಿಕೆ

ಕರೊನಾದಿಂದ ಸೋನಿಯಾ ಗೈರು, ವಿದೇಶಕ್ಕೆ ಹೋದ ರಾಹುಲ್​ ‘ನಾಪತ್ತೆ’? ಮತ್ತೊಮ್ಮೆ ಇಡಿ ಸಮನ್ಸ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + three =
Remember me
