ಕೌಲಾಲಂಪುರ (ಮಲೇಷ್ಯಾ):ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದ ವ್ಯಕ್ತಿಯೊಬ್ಬನಿಗೆ ಕೋರ್ಟ್‌ ಮೂರು ಲಕ್ಷ ರೂಪಾಯಿ ದಂಡ ಹಾಗೂ ಐದು ತಿಂಗಳು ಜೈಲು ಶಿಕ್ಷೆ ವಿಧಿಸಿರುವ ಘಟನೆ ಮಲೇಷಿಯಾದಲ್ಲಿ ನಡೆದಿದೆ.
ಇಂಥ ಕಠಿಣ ಶಿಕ್ಷೆ ಅನುಭವಿಸಿರುವವನು ಭಾರತೀಯ. ಕೌಲಾಲಂಪುರದಲ್ಲಿ ರೆಸ್ಟೋರೆಂಟ್‌ ನಡೆಸುತ್ತಿರುವ 57 ವರ್ಷದ ಭಾರತೀಯನಿಗೆ ಇಂಥದ್ದೊಂದು ಶಿಕ್ಷೆ ವಿಧಿಸಲಾಗಿದೆ.
ಕರೊನಾ ಸೋಂಕು ತಡೆಯಲು ಮಲೇಷಿಯಾ ಸರ್ಕಾರ ಕಠಿಣ ಕ್ರಮಗಳಿಗೆ ಮುಂದಾಗಿದೆ. ವಿದೇಶಗಳಿಂದ ಬರುವವರಿಗೆ ಕಡ್ಡಾಯ ಹೋಂ ಕ್ವಾರಂಟೈನ್‌ ಮಾಡಲಾಗುತ್ತಿದೆ. ಇತ್ತೀಚಿಗೆ ಮಲೇಷಿಯಾದಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ.
ಭಾರತಕ್ಕೆ ಬಂದಿದ್ದ ಈತ ಜುಲೈ ತಿಂಗಳಲ್ಲಿ ಕೌಲಾಲಂಪುರಕ್ಕೆ ವಾಪಸ್‌ ಆಗಿದ್ದ. ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ನಡೆಸಿದಾಗ ನೆಗೆಟಿವ್‌ ವರದಿ ಬಂದಿತ್ತು. ಆದರೂ ನಿಯಮದ ಪ್ರಕಾರ 14 ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿತ್ತು.
ಇದನ್ನೂ ಓದಿ:ಹೋಟೆಲ್‌ನಲ್ಲಿ ರಾತ್ರಿ ಕಳೆದ ಪ್ರೇಮಿಗಳು ಮಾರನೆಯ ದಿನ ಶವವಾದರು!
ಆದರೆ ಈತ ಅದನ್ನು ಉಲ್ಲಂಘನೆ ಮಾಡಿ ಪದೇ ಪದೇ ರೆಸ್ಟೋರೆಂಟ್‌ಗೆ ಬಂದು ಹೋಗಿದ್ದ. ಎರಡನೇ ಬಾರಿಗೆ ಪರೀಕ್ಷೆ ನಡೆಸಿದಾಗ ಪಾಸಿಟಿವ್‌ ವರದಿ ಬಂದಿತ್ತು. ಅಂದರೆ ಕರೊನಾ ಸೋಂಕು ದೃಢಪಟ್ಟಿತು. ಈತನ ಜತೆಗೆ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುವವರು ಸೇರಿದಂತೆ ಅವರ ಮನೆಯ 12 ಜನರಿಗೂ ಸೋಂಕು ದೃಢಪಟ್ಟಿದೆ.
ಸದ್ಯ ಸೋಂಕಿತ ಆ ವ್ಯಕ್ತಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ಹರಡಲು ಕಾರಣರಾಗಿರುವ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ಆ ವ್ಯಕ್ತಿಯ ವಿರುದ್ಧ ಸ್ಥಳೀಯ ಪೊಲೀಸರಿಗೆ ದೂರು ನೀಡಿತ್ತು. ಇದರ ಅನ್ವಯ ಆರೋಪಿಯನ್ನು ಆಸ್ಫತ್ರೆಯಲ್ಲೇ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸ್ಥಳೀಯ ನ್ಯಾಯಾಲಯ ವಿಚಾರಣೆ ನಡೆಸಿತ್ತು.
ಆರೋಪಿ ಕ್ವಾರಂಟೈನ್‌ ಉಲ್ಲಂಘನೆ ಮಾಡಿರುವುದು ಸಾಬೀತಾಗಿರುವುದರಿಂದ ನ್ಯಾಯಾಲಯ ದಂಡ ಮತ್ತು 5 ತಿಂಗಳ ಶಿಕ್ಷೆ ವಿಧಿಸಿದೆ.
ನಾಯಿಗೆ ಕೃಷ್ಣವೇಷ ಹಾಕಿ ಕಿಡಿ ಹೊತ್ತಿಸಿದ ಮಂಗಳೂರು ಮಾಡೆಲ್‌!

ಮಚ್ಚು ಹಿಡಿದು ಚಿನ್ನದಂಗಡಿಗೆ ನುಗ್ಗಿದವನ ಚಚ್ಚಿದಳು ಚಿಕ್ಕಮಗಳೂರು ಮಹಿಳೆ!

ನಾಯಿಗಳು ಕಚ್ಚಿ ತಿಂದ ಕರೊನಾ ಸೋಂಕಿತನ ಶವ!

ಪಾಕ್‌ಗೆ ಬಿಗ್‌ ಷಾಕ್‌: ಸಾಲವೂ ಬಂದ್‌, ತೈಲವೂ ಬಂದ್‌ ಎಂದ ಸೌದಿ ಅರೇಬಿಯಾ!

ಫ್ರಿಜ್‌ ಟ್ರೇ ಬಳಸಿ ಆನ್‌ಲೈನ್‌ ಕ್ಲಾಸ್‌: ಶಿಕ್ಷಕಿಯ ಪ್ಲ್ಯಾನ್‌ಗೆ ಅಪಾರ ಮೆಚ್ಚುಗೆ

ದಫನ್‌ ಆಗಿದ್ದವ ರಾತ್ರಿ ಹೆಂಡತಿಗೆ ಪ್ರತ್ಯಕ್ಷನಾಗಿ ನಾನೇ ನಿನ್ನ ಗಂಡ ಎಂದ!

ಸರ್ಕಾರಿ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಪತ್ನಿ ಡೆಲಿವರಿ: ಶ್ಲಾಘನೆಗಳ ಮಹಾಪೂರ

ಹೋಟೆಲ್‌ನಲ್ಲಿ ರಾತ್ರಿ ಕಳೆದ ಪ್ರೇಮಿಗಳು ಮಾರನೆಯ ದಿನ ಶವವಾದರು!

ಅತ್ಯಂತ ಕ್ರೂರವಾಗಿ ಲಾಕಪ್‌ ಡೆತ್‌ ಮಾಡಿದ್ದ ಆರೋಪಿ ಪೊಲೀಸ್‌ ಕರೊನಾಕ್ಕೆ ಬಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + four =
Remember me
