ನವದೆಹಲಿ:ಸಂಸದ ರಾಹುಲ್​ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಇದಾಗಲೇ ಸತತ ಮೂರು ದಿನ ರಾಹುಲ್​ ಗಾಂಧಿಯವರ ವಿಚಾರಣೆ ನಡೆಸಲಾಗಿತ್ತು. ನ್ಯಾಷನಲ್​ ಹೆರಾಲ್ಡ್​ನ ಕೋಟ್ಯಂತರ ರೂಪಾಯಿ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಇಂದು ನಾಲ್ಕನೆಯ ದಿನ ರಾಹುಲ್​ ವಿಚಾರಣೆ ಎದುರಿಸುತ್ತಿದ್ದಾರೆ.
ಇಂದು ಬೆಳಗ್ಗೆ 11.30ರ ಸುಮಾರಿಗೆ ರಾಹುಲ್​ ಗಾಂಧಿ ಇ.ಡಿ. ಕಚೇರಿಗೆ ತೆರಳಿದ್ದಾರೆ. ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ಅವರಿಗೆ ಸಾಥ್​ ನೀಡಿದರು.
ಇದೇ ವೇಳೆ, ಇ.ಡಿ ವಿಚಾರಣೆಯನ್ನು ವಿರೋಧಿಸಿ ಕಾಂಗ್ರೆಸ್​ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ. ಇಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್​ನ ಹಿರಿಯ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿಯ ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಇದೇ ವೇಳೆ, ಮುನ್ನೆಚ್ಚರಿಕೆಯ ಕ್ರಮವಾಗಿ ಕಾಂಗ್ರೆಸ್ ಮುಖಂಡ ಮತ್ತು ಸ್ವಯಂಘೋಷಿತ ಆಧ್ಯಾತ್ಮಿಕ ಗುರು, ಆಚಾರ್ಯ ಪ್ರಮೋದ್ ಕೃಷ್ಣಂ ಅವರನ್ನು ಸ್ಥಳೀಯ ಪೊಲೀಸರು ಗೃಹಬಂಧನದಲ್ಲಿ ಇರಿಸಿದ್ದಾರೆ.
ಅದೇ ಇನ್ನೊಂದೆಡೆ, ಸಹೋದರನಿಗೆ ಸಾಥ್​ ನೀಡಲು ಪ್ರಿಯಾಂಕಾ ಗಾಂಧಿ ಬರುತ್ತಿರುವ ವೇಳೆ, ರಾಹುಲ್​ ಗಾಂಧಿಯವರ ಫೋಟೋ ಹಿಡಿದುಕೊಂಡ ಅಭಿಮಾನಿಯೊಬ್ಬರನ್ನು ಪೊಲೀಸರು ಹಿಡಿದುಕೊಂಡು ಹೋಗುತ್ತಿರುವುದನ್ನು ನೋಡಿದರು. ಕೂಡಲೇ ತಮ್ಮ ಕಾರನ್ನು ನಿಲ್ಲಿಸಿ ತಮ್ಮ ಕಾರಿನಲ್ಲಿಯೇ ಕುಳಿತುಕೊಳ್ಳುವಂತೆ ಹೇಳಿದರು. ಆದರೆ ಪೊಲೀಸರು ಅವರನ್ನು ಕರೆದುಕೊಂಡು ಹೋಗಿದ್ದು, ಇದರ ವಿಡಿಯೋ ಭಾರಿ ವೈರಲ್​ ಆಗಿದೆ.
ಇ.ಡಿ ಡ್ರಿಲ್​: ರಾಹುಲ್​ ಪರ ಟ್ವೀಟ್​ ಮಾಡಿ ಸಂಕಷ್ಟಕ್ಕೆ ಸಿಲುಕಿದ ನಟಿ ರಮ್ಯಾ: ಕಮೆಂಟಿಗರು ಮಾಡಿದರು ‘ಚಾರ್ಟ್’​ ಪಾಠ!

ಅಗ್ನಿಪಥ್​ v/s ಕಾಂಗ್ರೆಸ್​- ಎಲ್ಲಿದ್ದೆ ಇಲ್ಲೀ ತನಕ…ಈಗ್ಯಾಕೆ ಬಂದ್ಯಯ್ಯ: ವಿಂಗ್​ ಕಮಾಂಡರ್​ ಹೇಳಿದ್ದೇನು ನೋಡಿ…

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:18 − six =
Remember me
