ನವಾಡಾ (ಬಿಹಾರ):ಬಿಹಾರದಲ್ಲಿ ಚುನಾವಣೆಯ ರಂಗು ಕಾವೇರುತ್ತಿರುವ ನಡುವೆಯೇ, ಆರೋಪ- ಪ್ರತ್ಯಾರೋಪಗಳ ಸುರಿಮಳೆ ಶುರುವಾಗಿದೆ.
ಬಿಹಾರದ ನವಾಡಾ ಜಿಲ್ಲೆಯ ಹಿಸುವಾದಲ್ಲಿ ತೇಜಸ್ವಿ ಯಾದವ್ ಜತೆ ‘ಬದಲಾವ್ ಸಂಕಲ್ಪ್’ ರ‍್ಯಾಲಿಯಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೋದಿಯವರೇ, ಬಿಹಾರದ ಜನರ ಮುಂದೆ ಸುಳ್ಳು ಹೇಳಬೇಡಿ. ನೀವು ಬಿಹಾರಿಗಳಿಗೆ ಉದ್ಯೋಗ ನೀಡಿದ್ದೀರಾ? ಕಳೆದ ಚುನಾವಣೆಯಲ್ಲಿ ನೀವು 2 ಕೋಟಿ ಉದ್ಯೋಗದ ಭರವಸೆ ಕೊಟ್ಟಿದ್ದಿರಿ. ಆದರೆ ಯಾರೊಬ್ಬರಿಗೂ ಉದ್ಯೋಗ ಸಿಕ್ಕಿಲ್ಲ ಎಂದು ಹರಿಹಾಯ್ದರು.ಮೋದಿಯವರು ಸೇನಾಪಡೆ , ರೈತರು, ಕಾರ್ಮಿಕರು ಮತ್ತು ವ್ಯಾಪಾರಿಗಳ ಮುಂದೆ ತಲೆ ಬಾಗುತ್ತೇನೆ ಎಂದು ಹೇಳುತ್ತಿದ್ದಾರೆ. ಮನೆಗೆ ಹೋದ ಮೇಲೆ ಅಂಬಾನಿ ಮತ್ತು ಅದಾನಿಗೆ ಮಾತ್ರ ಕೆಲಸ ಮಾಡುತ್ತಾರೆ ಎಂದು ಹೇಳಿದರು.
ಕಪ್ಪು ಹಣದ ವಿರುದ್ಧ ಹೋರಾಡುವುದಾಗಿ ಮೋದಿಯವರು ಹೇಳಿದ್ದರು. ಆದರೆ ಅದಾನಿ, ಅಂಬಾನಿ ಸರತಿ ಸಾಲಿನಲ್ಲಿ ನಿಂತಿರುವುದನ್ನು ನೀವು ನೋಡಿದ್ದೀರಾ? ಇವರೆಲ್ಲರೂ ಹವಾನಿಯಂತ್ರಿತ ಕೋಣೆಗಳಲ್ಲಿರುತ್ತಾರೆ. ನಮ್ಮ ಪ್ರಧಾನಿಯವರು ಶ್ರೀಮಂತರ ಪರವಾಗಿದ್ದಾರೆ. ರೈತರು ಮತ್ತು ಸಣ್ಣ ಉದ್ಯಮಿಗಳನ್ನು ಕಡೆಗಣಿಸುತ್ತಿದ್ದಾರೆ.
ಇದನ್ನೂ ಓದಿ:ವಿಜಯಲಕ್ಷ್ಮೀ ಮೇಲೆ ಇನ್ನೊಂದು ದೂರು … ಈ ಬಾರಿ ಕೊಟ್ಟವರು ಲಾಡ್ಜ್​ ಓನರ್​
ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತರುವ ಮೂಲಕ ರೈತರ ವಿರೋಧಿ ಎನ್ನುವುದು ಸಾಬೀತು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಚೀನಾ ವಿರುದ್ಧದ ಸಂಘರ್ಷದಲ್ಲಿ ನಮ್ಮ 20 ಯೋಧರು ಹುತಾತ್ಮರಾದರು. ಚೀನಾ ನಮ್ಮ 1200 ಕಿಮಿ ಭೂಭಾಗವನ್ನು ಅತಿಕ್ರಮಿಸಿತು. ಚೀನಾ ನಮ್ಮ ಗಡಿಯೊಳಗೆ ನುಗ್ಗಿದರೂ ಯಾರೊಬ್ಬರೂ ಒಳಗೆ ಬಂದಿಲ್ಲ ಎಂದು ಹೇಳುವ ಮೂಲಕ ಪ್ರಧಾನಿ ನಮ್ಮ ಯೋಧರನ್ನು ಅವಮಾನಿಸಿದ್ದು ಯಾಕೆ? ಇವತ್ತು ನಾನು ತಲೆಬಾಗುತ್ತಿದ್ದೇನೆ ಅಂತಿದ್ದಾರೆ ಎಂದು ಮೋದಿ ವಿರುದ್ಧ ರಾಹುಲ್ ಹೇಳಿದರು.
ಈ ಸಂದರ್ಭದಲ್ಲಿ ತೇಜಸ್ವಿ ಯಾದವ್​ ಕೂಡ ಮಾತನಾಡಿ ಬಿಹಾರಿಗಳ ಉದ್ಯೋಗವನ್ನು ಮೋದಿ ಕಸಿದುಕೊಂಡಿದ್ದಾರೆ ಎಂದು ಹೇಳಿದರು.
ಕ್ರಿಕೆಟ್​ ದಿಗ್ಗಜ ಕಪಿಲ್​ ದೇವ್​ಗೆ ಹೃದಯಾಘಾತ- ಆಸ್ಪತ್ರೆಗೆ ದಾಖಲು

ವಿಮಾನದೊಳಗೆ ಉಗ್ರ- ಕೂಗಿದ ‘ಪೊಲೀಸ್​ ಅಧಿಕಾರಿ’!ಬೆಚ್ಚಿಬಿದ್ದ ಪ್ರಯಾಣಿಕರು

ಮ್ಯಾನೇಜ್​ಮೆಂಟ್​ ಕೋಟಾದವರು ಸ್ವರ್ಗದಿಂದ ಇಳಿದವರೆ? ವೈದ್ಯರ ವಿರುದ್ಧ ಹೈಕೋರ್ಟ್​ ಕಿಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 3 =
Remember me
