ಮಂಡ್ಯ: ಕೆಲ ದಿನಗಳ ಹಿಂದೆ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಭಾರತ್​ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಬಾಲಕಿಯ ಚಪ್ಪಲಿ ಸಡಿಲಿಕೆಯಾಗಿ ನಡೆಯಲು ತೊಂದರೆ ಅನುಭವಿಸುತ್ತಿದ್ದಳು. ಇದನ್ನು ಗಮನಿಸಿದ್ದ ಸಂಸದ ರಾಹುಲ್ ಗಾಂಧಿ ತಕ್ಷಣವೇ ತಾವೇ ಬಾಗಿ ಬಾಲಕಿಯ ಚಪ್ಪಲಿಯನ್ನು ಸರಿಪಡಿಸಿದ್ದರು. ಅದು ಭಾರಿ ಮೆಚ್ಚುಗೆ ಗಳಿಸಿತ್ತು.
ಇದೀಗ ಅಮ್ಮ ಸೋನಿಯಾ ಗಾಂಧಿಯವರ ಶೂಸ್​ ಲೇಸ್​ ಅನ್ನು ಕಟ್ಟುವ ಮೂಲಕ ಮತ್ತೆ ರಾಹುಲ್​ ಗಾಂಧಿ ಭಾರಿ ಶ್ಲಾಘನೆ ಗಳಿಸಿದ್ದಾರೆ. ಇಂದು ಮಂಡ್ಯ ಜಿಲ್ಲೆಯಲ್ಲಿ ಯಾತ್ರೆಗೆ ಸೋನಿಯಾ ಗಾಂಧಿ ಆಗಮಿಸಿದ್ದಾರೆ. ಮೆಡಿಕಲ್ ಚೆಕಪ್‍ಗಾಗಿ ವಿದೇಶಕ್ಕೆ ತೆರಳಿದ್ದ ಸೋನಿಯಾ ಗಾಂಧಿ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಮಡಿಕೇರಿಯಿಂದ ತೆರಳಿ ಅವರು ಮಂಡ್ಯ ಜಿಲ್ಲೆಯ ಪಾಂಡವಪುರಕ್ಕೆ ಆಗಮಿಸಿದ್ದರು.ಈ ಸಂದರ್ಭದಲ್ಲಿ ಅವರ ಶೂಸ್​ ಲೇಸ್​ ತೆರೆದುಕೊಂಡಿತ್ತು. ರಾಹುಲ್​ ಗಾಂಧಿ ಇದನ್ನು ಗಮನಿಸಿ ಕೆಳಕ್ಕೆ ಬಗ್ಗಿ ಅವರ ಶೂಸ್​ ಲೇಸ್​ ಸರಿ ಮಾಡಿದರು. ಇದರ ವಿಡಿಯೋ ಭಾರಿ ವೈರಲ್​ ಆಗಿದ್ದು, ಇದ್ದರೆ ಇಂಥ ಮಗ ಇರಬೇಕು ಎಂದು ಹಲವರು ಕಮೆಂಟ್​ ಮೂಲಕ ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಬಿಜೆಪಿ ಅಭಿಮಾನಿಗಳು ಕಿಡಿ ಕಾರುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ತಾಯಿಯ ಪಾದ ತೊಳೆದು ಪೂಜೆ ಮಾಡಿದಾಗ ಸ್ಟಂಟ್​ ಎಂದು ಲೇವಡಿ ಮಾಡಿದ್ದ ಕಾಂಗ್ರೆಸ್ಸಿಗರು ಇದನ್ನು ಹೊಗಳುತ್ತಿರುವುದನ್ನು ನೋಡಿದರೆ ವಿಚಿತ್ರ ಎನಿಸುತ್ತದೆ ಎಂದಿದ್ದಾರೆ.
ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು. ಕಳೆದ ಶುಕ್ರವಾರ ಪಕ್ಷದ ನಾಯಕ ರಾಹುಲ್ ಗಾಂಧಿ ಕೇರಳದ ಗಡಿಯಲ್ಲಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಮೂಲಕ ಕರ್ನಾಟಕಕ್ಕೆ ಪ್ರವೇಶಿಸಿದರು.(ಏಜೆನ್ಸೀಸ್​)
https://t.co/5fy99HSnac— Paras_AtinV2 (@Parasjaincav2)October 6, 2022
https://t.co/5fy99HSnac
ರಾವಣನ ಬದಲು ಇಡಿ, ಸಿಬಿಐ ಪ್ರತಿಕೃತಿ ದಹಿಸಿದ ಕಾಂಗ್ರೆಸ್​: ಕೇಂದ್ರದ ವಿರುದ್ಧ ಕೈ ನಾಯಕರ ಕಿಡಿ
ಇಂಜಿನಿಯರಿಂಗ್​ ಪರೀಕ್ಷೆಯಲ್ಲೂ ಇದೆಂಥ ಗೋಲ್​ಮಾಲ್? ರಷ್ಯನ್​ ಹ್ಯಾಕರ್ಸ್​ ನೆರವು ಪಡೆದಿದ್ದ 820 ವಿದ್ಯಾರ್ಥಿಗಳು!
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:12 − 11 =
Remember me
