ಥಾಣೆ ( ಮಹಾರಾಷ್ಟ್ರ):ಗಾಂಧಿಯ ಹತ್ಯೆಯ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಸಂಸದ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಈಗ ಪುನಃ ಕೋರ್ಟ್​ ಮೊರೆ ಹೋಗಿದ್ದಾರೆ. ವಿಚಾರಣೆ ವೇಳೆ ಅವರು ಖುದ್ದು ಹಾಜರಾಗಬೇಕಿರುವ ಹಿನ್ನೆಲೆಯಲ್ಲಿ ತಮಗೆ ಇದರಿಂದ ಮುಕ್ತಿ ಕೊಡಬೇಕು ಎಂದು ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದಾರೆ.
ಮಹಾರಾಷ್ಟ್ರದ ಥಾಣೆಯ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ (ಜೆಎಂಎಫ್‌ಸಿ) ಕೋರ್ಟ್​ನಲ್ಲಿ ನಡೆಯುತ್ತಿರುವ ಈ ಕೇಸ್​ಗೆ ಸಂಬಂಧಿಸಿದಂತೆ ಕೋರ್ಟ್​ಗೆ ಮನವಿ ಸಲ್ಲಿಸಲಾಗಿದೆ. ಈ ಹಿಂದೆ ಕೂಡ ಅನೇಕ ಬಾರಿ ಇದೇ ಮನವಿಯನ್ನು ಮಾಡಿಕೊಂಡು ವಿನಾಯಿತಿ ಪಡೆದುಕೊಂಡಿರುವ ರಾಹುಲ್​ ಗಾಂಧಿ, ಇದೀಗ ಶಾಶ್ವತ ವಿನಾಯಿತಿ ನೀಡುವಂತೆ ಕೋರಿದ್ದಾರೆ.
ನಾನು ಸಂಸದ. ತಮ್ಮ ಕ್ಷೇತ್ರಕ್ಕೆ ಆಗಾಗ ಭೇಟಿ ನೀಡಬೇಕಾಗುತ್ತದೆ, ಜನರ ಕಷ್ಟ ಆಲಿಸಬೇಕಾಗುತ್ತದೆ, ಅಷ್ಟೇ ಅಲ್ಲದೇ ಪಕ್ಷದ ಕೆಲಸಕ್ಕೆ ಹಾಜರಾಗಬೇಕಿರುತ್ತದೆ. ಆದ್ದರಿಂದ ಸದಾ ಬಿಜಿಯಾಗಿರುತ್ತೇನೆ. ಕೋರ್ಟ್​ಗೆ ಪದೇ ಪದೇ ಬರುವುದು ಕಷ್ಟವಾಗುವ ಹಿನ್ನೆಲೆಯಲ್ಲಿ ಶಾಶ್ವತ ವಿನಾಯಿತಿ ಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಪ್ರಕರಣದ ಹಿನ್ನೆಲೆ: ಗಾಂಧಿಯ ಹತ್ಯೆಯ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕೈವಾಡವಿದೆ ಎಂದು 2014 ರಲ್ಲಿ ಥಾಣೆಯ ಭಿವಂಡಿ ಟೌನ್‌ಶಿಪ್‌ನಲ್ಲಿ ನಡೆದ ಸಮಾರಂಭದಲ್ಲಿ ರಾಹುಲ್​ ಗಾಂಧಿ ಹೇಳಿಕೆ ನೀಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಆರ್​​ಎಸ್​ಎಸ್​ ಕಾರ್ಯಕರ್ತ ರಾಜೇಶ್​ ಕುಂಟೆ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದು ಅದರ ವಿಚಾರಣೆ ನಡೆಯುತ್ತಿದೆ.
ರಾಹುಲ್​ ಗಾಂಧಿ ಅವರ ಈ ಹೇಳಿಕೆ ಆರ್‌ಎಸ್‌ಎಸ್‌ನ ಪ್ರತಿಷ್ಠೆಗೆ ಧಕ್ಕೆ ತಂದಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ. ವಿಚಾರಣೆಯನ್ನು ಕೋರ್ಟ್​ ಮುಂದೂಡಿದೆ.
ಕೋರ್ಟ್​ ಕಟಕಟೆಯಲ್ಲಿ ನೆಹರೂ, ಎಡ್ವಿನಾ ಲವ್​ ಸ್ಟೋರಿ: ಇಬ್ಬರ ನಡುವಿನ ಪತ್ರ ಬಹಿರಂಗಕ್ಕೆ ನಕಾರ

ಅವಳ ಗಂಡ ಇವಳಿಗೆ, ಇವಳ ಗಂಡ ಅವಳಿಗೆ: ಕರೆಂಟ್‌ ಹೋದಾಗ ಆಗೋಯ್ತು ಎಡವಟ್ಟು…

ಕಾಂಡೋಮ್‌ನಲ್ಲಿ ರಂಧ್ರ ಮಾಡಿದ ಮಹಿಳೆ ವಿರುದ್ಧ ಕ್ರಿಮಿನಲ್‌ ಕೇಸ್‌: ಆರು ತಿಂಗಳು ಶಿಕ್ಷೆ ವಿಧಿಸಿದ ಕೋರ್ಟ್‌!

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:one × 2 =
Remember me
