ನವದೆಹಲಿ:2019ರ ಚುನಾವಣಾ ರ‍್ಯಾಲಿ ಸಂದರ್ಭದಲ್ಲಿ ಮೋದಿ ಸರ್​ನೇಮ್​ ಕುರಿತಾಗಿ ಮಾನಹಾನಿಯಾಗುವ ಹೇಳಿಕೆ ನೀಡಿ ಪೇಚಿಗೆ ಸಿಲುಕಿರುವ ರಾಹುಲ್​ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಇವರ ವಿರುದ್ಧ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ ದೂರು ದಾಖಲು ಮಾಡಿದ್ದರು.
ಅರ್ಜಿಯ ವಿಚಾರಣೆ ನಡೆಸಿದ್ದ ಸೂರತ್​ನ ಮ್ಯಾಜಿಸ್ಟ್ರೇಟ್ ಕೋರ್ಟ್‌ ಮಾನಹಾನಿಗೆ ಸಂಬಂಧಿಸಿದಂತೆ ಕೋರ್ಟ್‌ ಮುಂದೆ ಹಾಜರಾಗಲು ಆದೇಶಿಸಿತ್ತು. ಈ ಆದೇಶದ ಅನ್ವಯ ರಾಹುಲ್‌ ಗಾಂಧಿ ಇಂದು ಕೋರ್ಟ್‌ಗೆ ಹಾಜರು ಆಗಿದ್ದರು.
2019ರ ಲೋಕಸಭೆ ಚುನಾವಣೆ ವೇಳೆ ಭಾಷಣ ಮಾಡ್ತಿದ್ದ ರಾಹುಲ್ ಗಾಂಧಿ, ಮೋದಿ ಎಂಬ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದರು.
ಇದರಿಂದ ಸಿಟ್ಟಿಗೆದ್ದಿದ್ದ ಪೂರ್ಣೇಶ್​ ಮೋದಿ ದೂರು ದಾಖಲು ಮಾಡಿದ್ದರು. 2019ರ ಏಪ್ರಿಲ್​​​ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್​​ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಈಗ ಕೋರ್ಟ್‌ಗೆ ಹಾಜರು ಆಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ಮೂರನೆಯ ಬಾರಿ ಕೋರ್ಟ್‌ಗೆ ರಾಹುಲ್‌ ಹಾಜರು ಆಗುತ್ತಿರುವುದು.
VIDEO: ಈ ವಿಡಿಯೋ ನೋಡಿದ್ರೆ ಖಂಡಿತ ನೀವು ಕೊತ್ತಂಬರಿ ಸೊಪ್ಪಿಗೆ ದೊಡ್ಡ ನಮಸ್ಕಾರ ಹಾಕುವಿರಿ!

ಶಾರುಖ್‌ ಪುತ್ರನಿಗೆ ಇಲ್ಲ ಬಿಡುಗಡೆ ಭಾಗ್ಯ: ಜೈಲಿಗೆ ದೌಡಾಯಿಸಿ ಒಂದು ಲಕ್ಷ ರೂ. ನೀಡಿದ ನಟಿ ಜೂಹಿ ಚಾವ್ಲಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
