ಮುಂಬೈ: ‌ನೀಲಿ ಸಿನಿಮಾಗಳನ್ನು ಮಾಡಿರುವ ಆರೋಪದ ಮೇಲೆ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ನಿನ್ನೆ ಬಂಧಿಸಲಾಗಿದೆ. ಅಶ್ಲೀಲ ಚಿತ್ರಗಳನ್ನು ಮಾಡಿ ಬೇರೆ ಬೇರೆ ಆ್ಯಪ್​ಗಳಲ್ಲಿ ಅವುಗಳನ್ನು ಅಪ್​ಲೊಡ್​ ಮಾಡುತ್ತಿದ್ದ ಆರೋಪ ಇವರ ಮೇಲಿದೆ.
ಇದಕ್ಕೆ ಸಂಬಂಧಿಸಿದಂತೆ ಇಂದು ಕೋರ್ಟ್​ ಮುಂದೆ ಇವರನ್ನು ಹಾಜರುಪಡಿಸಲಾಗಿದೆ. ಜುಲೈ 23ರವರೆಗೆ ನ್ಯಾಯಾಂಗ ಬಂಧನಕ್ಕೆ ಇವರನ್ನು ಒಪ್ಪಿಸಲಾಗಿದೆ.
ಇದರ ನಡುವೆಯೇ ರಾಜ್ ಕುಂದ್ರಾ ಪರ ಪ್ರಸಿದ್ಧ ಮಾಡೆಲ್ ಗೆಹನಾ ಮಾತನಾಡಿದ್ದಾರೆ. ಟ್ವಿಟರ್​ನಲ್ಲಿ ವಿಡಿಯೋ ಮೂಲಕ ಮಾತನಾಡಿರುವ ಅವರು, ರಾಜ್ ಕುಂದ್ರಾ ಪೋರ್ನ್ ವಿಡಿಯೋಗಳನ್ನು ತಯಾರು ಮಾಡುತ್ತಿರಲಿಲ್ಲ. ಇದು ಎರೊಟಿಕಾ. ಪೋರ್ನ್ ವಿಡಿಯೋಗಳ ಜತೆ ಎರೊಟಿಕಾ ವಿಡಿಯೋಗಳನ್ನು ಸೇರಿಸಬೇಡಿ. ಆ ವಿಡಿಯೋಗಳೇ ಬೇರೆ, ಈ ರೀತಿಯ ವಿಡಿಯೋಗಳೇ ಬೇರೆ. ಇದನ್ನು ಪೊಲೀಸರು ತಪ್ಪು ಅರ್ಥ ಮಾಡಿಕೊಂಡಿದ್ದಾರೆ ಎಂದು ಗೆಹನಾ ಸಮಜಾಯಿಷಿ ಕೊಟ್ಟಿದ್ದಾರೆ.
ಎರೋಟಿಕಾ ರೀತಿಯ ವಿಡಿಯೋಗಳನ್ನು ಬಾಲಿವುಡ್ ಸಿನಿಮಾಗಳಲ್ಲಿ ಬಳಸಲಾಗುತ್ತದೆ. ಏಕ್ತಾ ಕಪೂರ್ ಅವರ ಗಾಂಧಿ ಬಾತ್ ಚಿತ್ರದಲ್ಲಿ ಈ ರೀತಿಯ ವಿಡಿಯೋಗಳನ್ನು ಬಳಕೆ ಮಾಡಲಾಗಿದೆ. ಆದ್ದರಿಂದ ಇವೆರಡೂ ವಿಡಿಯೋಗಳನ್ನು ಹೋಲಿಕೆ ಮಾಡುವುದು ಸರಿಯಲ್ಲ ಎಂದಿದ್ದಾರೆ.
ಬ್ಲೂ ಫಿಲ್ಮ್​ ಕೇಸ್​ನಲ್ಲಿ ಪತಿ ಅರೆಸ್ಟ್​; ನಟಿ ಶಿಲ್ಪಾ ಶೆಟ್ಟಿ ‘ಚಾಪ್ಟರ್​’ ಕ್ಲೋಸ್​?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × 3 =
Remember me
