ಜೈಪುರ (ರಾಜಸ್ಥಾನ):ರಾಜಸ್ಥಾನದಲ್ಲಿ ಲಂಪಿ ವೈರಸ್​ಗೆ ಹಸುಗಳು ಬಲಿಯಾಗುತ್ತಿವೆ. ಈ ಮಾರಕ ರೋಗದಿಂದ ರೈತರು ಕಂಗಾಲಾಗಿ ಹೋಗಿದ್ದಾರೆ. ಈ ರೋಗ ತಡೆಗಟ್ಟಲು ಆಡಳಿತಾರೂಢ ಕಾಂಗ್ರೆಸ್​ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.
ಪ್ರತಿಭಟನೆಯ ಭಾಗವಾಗಿ ಪುಷ್ಕರ್ ಕ್ಷೇತ್ರದ ಶಾಸಕ ಸುರೇಶ್ ಸಿಂಗ್ ರಾವತ್ ಹಸುವಿನೊಂದಿಗೆ ವಿಧಾನಸಭೆಗೆ ಆಗಮಿಸಿದ್ದರು. ಆದರೆ ಹಸು ವಿಧಾನಸಭೆಯ ಸಮೀಪ ಬರುತ್ತಿದ್ದಂತೆಯೇ ಎರ್ರಾಬಿರ್ರಿಯಾಗಿ ಓಡಿ ಹೋಗಿದೆ.
ಹಸುವನ್ನು ತಂದ ಬಗ್ಗೆ ಮಾಧ್ಯಮಗಳಿಗೆ ವಿವರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕೈಯಲ್ಲಿ ಕೋಲೊಂದನ್ನು ಹಿಡಿದುಕೊಂಡಿದ್ದ ಶಾಸಕ ಸುರೇಶ್, ‘ಹಸುಗಳು ಲಂಪಿ ವೈರಸ್‌ನಿಂದ ಬಳಲುತ್ತಿವೆ. ಆದರೆ ರಾಜ್ಯ ಸರ್ಕಾರ ಗಾಢ ನಿದ್ರೆಯಲ್ಲಿದೆ. ಹಸುಗಳಿಗೆ ಮಾರಕವಾಗಿರುವ ಕಾಯಿಲೆಯತ್ತ ಗಮನ ಸೆಳೆಯಲು ನಾನು ಹಸುವನ್ನು ತಂದಿದ್ದೇನೆ’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಹೇಳುತ್ತಿದ್ದರು.
ಈ ವೇಳೆ ಹಸು ತನಗೆ ಕಟ್ಟಿದ್ದ ಹಗ್ಗವನ್ನು ಎಳೆದುಕೊಂಡು ಓಡಿಹೋಗಿದ್ದು, ಇದರ ವಿಡಿಯೋ ಭಾರಿ ವೈರಲ್​ ಆಗಿದೆ. ಹಸು ಓಡಿ ಹೋಗುತ್ತಿದ್ದಂತೆ ಮುಜುಗರಕ್ಕೆ ಒಳಗಾದರೂ ಶಾಸಕ ಸುರೇಶ್​ “ಗೋಮಾತೆಗೂ ಸರ್ಕಾರದ ಮೇಲೆ ಸಿಟ್ಟು ಬಂದಿದೆ ನೋಡಿ” ಎಂದರು.
ಅಧಿವೇಶನ ಪ್ರಾರಂಭವಾಗುವ ಮೊದಲು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೇಂದ್ರ ಸರ್ಕಾರವು ಈ ರೋಗವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ಈ ರೋಗದಿಂದಾಗಿ ಹಸುಗಳ ಜೀವ ಉಳಿಸುವುದು ಹೇಗೆ ಎಂಬುದು ನಮ್ಮ ಆದ್ಯತೆಯಾಗಿದ್ದು, ಕೇಂದ್ರವೇ ಲಸಿಕೆ, ಔಷಧ ನೀಡಬೇಕಿದೆ. ಇಂತಹ ಸಂದರ್ಭದಲ್ಲಿ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಬೇಕು’ ಎಂದರು.
ಪಶುಸಂಗೋಪನಾ ಇಲಾಖೆಯ ಅಂಕಿಅಂಶಗಳ ಪ್ರಕಾರ ಇಲ್ಲಿಯವರೆಗೆ ರಾಜಸ್ಥಾನದಲ್ಲಿ 59,027 ಜಾನುವಾರುಗಳು ಚರ್ಮದ ಕಾಯಿಲೆಯಿಂದ ಮೃತಪಟ್ಟಿದ್ದು, 13,02,907 ಬಾಧಿತವಾಗಿವೆ. (ಏಜೆನ್ಸೀಸ್​)ಇಲ್ಲಿದೆ ನೋಡಿ ವಿಡಿಯೋ:
What happened when Bjp mla from Pushkar reached Rajasthan assembly with a cow🤣🤣🤣pic.twitter.com/I7UHaxjqQ6— Surbhi✨ (@SurrbhiM)September 20, 2022
What happened when Bjp mla from Pushkar reached Rajasthan assembly with a cow🤣🤣🤣pic.twitter.com/I7UHaxjqQ6
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:10 + 16 =
Remember me
