ಜೈಪುರ್:ರಾಜಸ್ಥಾನದ ಪಂಚಾಯತ್​ ರಾಜ್​ ಚುನಾವಣೆಯಲ್ಲಿ ಕಳೆದ ವಾರವಷ್ಟೇ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಗೆಲುವಿನ ನಗುಚೆಲ್ಲಿತ್ತು. ಈ ಮೂಲಕ ಆಡಳಿತಾರೂಢ ಕಾಂಗ್ರೆಸ್​ಗೆ ಭಾರಿ ಮುಖಭಂಗವಾಗಿತ್ತು. ಆದರೆ ಇದೀಗ ಬಿಡುಗಡೆಗೊಂಡಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಫಲಿತಾಂಶ ಉಲ್ಟಾ ಆಗಿದೆ.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್​ ಭರ್ಜರಿ ಗೆಲುವು ಸಾಧಿಸಿದ್ದರೆ, ಬಿಜೆಪಿ ಮೂರನೆಯ ಸ್ಥಾನಕ್ಕಿಳಿದಿದೆ. 12 ಜಿಲ್ಲೆಗಳ 50 ಸ್ಥಳೀಯ ನಗರ ಸಂಸ್ಥೆಯ 1,775 ವಾರ್ಡ್​ಗಳಿಗೆ ಚುನಾಣೆ ನಡೆದಿತ್ತು. ಇದರ ಫಲಿತಾಂಶ ಬಿಡುಗಡೆಯಾಗಿದೆ.
ಈ ಪೈಕಿ 619 ವಾರ್ಡ್​ಗಳಲ್ಲಿ ಜಯ ಸಾಧಿಸಿರುವ ಕಾಂಗ್ರೆಸ್​ ಗೆಲುವಿನ ನಗೆ ಬೀರಿದೆ. 596 ವಾರ್ಡ್​ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿ ಎರಡನೆಯ ಸ್ಥಾನ ಗಳಿಸಿದ್ದರೆ, ಜಿಲ್ಲಾ ಪಂಚಾಯತ್​ ಚುನಾವಣೆಯಲ್ಲಿ ಭಾರಿ ಗೆಲುವಿನಿಂದ ಬೀಗಿದ್ದ ಬಿಜೆಪಿ 548 ವಾರ್ಡ್​ಗಳಲ್ಲಿ ಜಯ ಸಾಧಿಸುವ ಮೂಲಕ ಮೂರನೆಯ ಸ್ಥಾನಕ್ಕೆ ಇಳಿದಿದೆ.
ಪಂಚಾಯತ್ ರಾಜ್ ಚುನಾವಣೆಯಲ್ಲಿ ಬಿಜೆಪಿ 12 ಜಿಲ್ಲಾ ಪರಿಷತ್​ನಲ್ಲಿ ಗೆದ್ದಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಕೇವಲ ಐದು ಕ್ಷೇತ್ರಗಳಲ್ಲಿ ಜಯಗಳಿಸಿತ್ತು.
ಇಂದಿನ ಫಲಿತಾಂಶದ ಕುರಿತು ಮಾತನಾಡಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಎಲ್ಲರಿಗೂ ಹೃದಯ ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇರಿಸಿ ಪಕ್ಷದ ಗೆಲುವಿಗೆ ಕಾರಣರಾದ ಜನತೆಗೂ ಅಭಿನಂದನೆ ಸಲ್ಲಿಸಿದ್ದಾರೆ.ರಾಜಸ್ಥಾನ್ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಗೋವಿಂದ್ ಸಿಂಗ್ ಮಾತನಾಡಿ, ಸ್ಥಳೀಯ ನಗರ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಪ್ರದರ್ಶನ ತೋರಿದ್ದು, ಹೆಚ್ಚು ಸ್ಥಾನ ಗಳಿಸಿರುವುದು ಸಂತೋಷ ತಂದಿದೆ ಎಂದಿದ್ದಾರೆ.
ತೆಂಗಿನಕಾಯಿ ಕೀಳಲು 55 ಅಡಿ ಮರವೇರಿದ, ಗಂಟೆ ಕಳೆದರೂ ಏರಿದವನ ಪತ್ತೆಯೇ ಇಲ್ಲ; ಆಗಿದ್ದೇನು?

ಜೂಜಾಟದಲ್ಲಿ ಪತ್ನಿಯನ್ನೇ ಪಣಕ್ಕಿಟ್ಟು ಗೆದ್ದವರ ಬಳಿ ಆಕೆಯ ಕಳುಹಿಸಿದ- ಮುಂದಾದದ್ದೆಲ್ಲವೂ ಭಯಾನಕ!

ಪತ್ನಿ ಒಳ್ಳೆಯವಳು, ಆದರೆ ಪುರುಷರ ಬಳಿ ಮಾತನಾಡಿದರೆ ಕಿರಿಕಿರಿಯಾಗುತ್ತದೆ- ಈ ಸಂಶಯಕ್ಕೆ ಪರಿಹಾರ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × two =
Remember me
