ಜೈಪುರ:ರಾಜಸ್ಥಾನದ ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಜಗನ್ನಾಥ್ ಪಹಾಡಿಯಾ ಅವರು ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ. ಇವರಿಗೆ 89 ವರ್ಷ ವಯಸ್ಸಾಗಿತ್ತು. ಇವರು ರಾಜಸ್ಥಾನದ ಮೊದಲ ದಲಿತ ಮುಖ್ಯಮಂತ್ರಿ ಎಂದೂ ಕರೆಸಿಕೊಂಡವರು.
ಕರೊನಾ ಸೋಂಕು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಇವರನ್ನು ದೆಹಲಿಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಇವರ ಪತ್ನಿ ಕೂಡ ಕೋವಿಡ್‌ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
प्रदेश के पूर्व मुख्यमंत्री श्री जगन्नाथ पहाड़िया जी के निधन की खबर बेहद दुखद है। श्री पहाड़िया ने मुख्यमंत्री के रूप में, राज्यपाल के रूप में, केंद्रीय मंत्री के रूप में लम्बे समय तक देश की सेवा की, वे देश के वरिष्ठ नेताओं में से थे।
— Ashok Gehlot (@ashokgehlot51)May 19, 2021

ಜಗನ್ನಾಥ್‌ ಅವರು, 1980-81ರಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಹಾಗೂ ಹರಿಯಾಣ ಮತ್ತು ಬಿಹಾರದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದರು. ಇವರ ನಿಧನಕ್ಕೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‍ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಗೆಹ್ಲೋಟ್‌, ರಾಜ್ಯ ಸರ್ಕಾರದ ವತಿಯಿಂದ ಒಂದು ದಿನ ಶೋಕಾಚರಣೆಯನ್ನು ಘೋಷಿಸಲಾಗಿದೆ, ಜತೆಗೆ ಎಲ್ಲಾ ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗಿದ್ದು, ರಾಷ್ಟ್ರಧ್ವಜವನ್ನು ಅರ್ಧದಷ್ಟು ಹಾರಿಸಲಾಗುತ್ತದೆ ಎಂದಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆಗೆ ಸಚಿವ ಸಂಪುಟದ ಸಭೆ ನಡೆಯಲಿದ್ದು, ಜಗನ್ನಾಥ್‌ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುತ್ತದೆ ಎನ್ನಲಾಗಿದೆ.
ಒಂದೇ ರಾಜ್ಯದ ನಾಲ್ವರು ಶಾಸಕರನ್ನು ಬಲಿ ಪಡೆದ ಕರೊನಾ! ಬಿಜೆಪಿಯ ಗೋತಮ್‌ ಲಾಲ್‌ ಸಾವು

ಮಳೆಯಲ್ಲಿ ನೆನೆದು ಕೂಲ್‌ ಕೂಲ್‌ ಆದ ನಟಿ ದೀಪಿಕಾ ವಿಡಿಯೋ ನೋಡಿ ಗರಂ ಗರಂ ಆದ ನೆಟ್ಟಿಗರು!

ನಂಗೆ ಸಾಯಲು ಇಷ್ಟ ಇಲ್ಲ ಆಂಟಿ… ಪ್ಲೀಸ್‌ ಏನಾದ್ರೂ ಹೇಳಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 6 =
Remember me
