ಚೆನ್ನೈ:ನಟ ರಜನಿಕಾಂತ್ ಅವರು ನಿನ್ನೆ ಇದ್ದಕ್ಕಿದ್ದಂತೆಯೇ ತಲೆತಿರುಗಿಬಿದ್ದು, ಅನಾರೋಗ್ಯ ಕಾಣಿಸಿಕೊಂಡಿದ್ದರಿಂದ ಅವರನ್ನು ರಾತ್ರಿ ಚೆನ್ನೈನಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ಆಸ್ಪತ್ರೆಗೆ ದಾಖಲು ಮಾಡಿರುವ ಸುದ್ದಿ ತಿಳಿಯುತ್ತಲೇ ಅಭಿಮಾನಿಗಳು ತಂಡೋಪತಂಡವಾಗಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ.
ಅವರಿಗೆ ಹೃದಯ ಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಮಾಡಲಾಗಿದೆ. ಹೃದಯದಲ್ಲಿ ರಕ್ತ ಹೆಪ್ಪುಗಟ್ಟಿದ್ದು, ಅದನ್ನು ಚಿಕಿತ್ಸೆ ಮೂಲಕ ಸರಿಮಾಡಲಾಗಿದೆ. ಚಿಕಿತ್ಸೆಯು ಯಶಸ್ವಿಯಾಗಿ ನಡೆದಿದ್ದು, ಶೀಘ್ರದಲ್ಲಿ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.
ಇವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ಹಲವಾರು ವದಂತಿಗಳು ಹುಟ್ಟಿಕೊಂಡಿದ್ದವು. ‘ರಜನಿಕಾಂತ್ ಕ್ಷೇಮವಾಗಿದ್ದಾರೆ, ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ವದಂತಿಗಳನ್ನು ನಂಬಬೇಡಿ’ ಎಂದು ಅಭಿಮಾನಿಗಳು ಹೇಳಿದ್ದಾರೆ.
ಕಳೆದ ವರ್ಷ ಇವರಿಗೆ ಅನಾರೋಗ್ಯ ಸಮಸ್ಯೆ ಉಂಟಾಗಿ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಜುಲೈನಲ್ಲಿ ಅಮೆರಿಕಕ್ಕೂ ತೆರಳಿದ್ದರು. ಆರೋಗ್ಯ ಸಮಸ್ಯೆಯಿಂದ ಹೊಸ ರಾಜಕೀಯ ಪಕ್ಷ ಸ್ಥಾಪಿಸುವ ನಿರ್ಧಾರದಿಂದ ಅವರು ಹಿಂದೆ ಸರಿದಿದ್ದರು.
ಅತಿಯಾದ ವರ್ಕ್‌ಔಟ್‌ ಪ್ರೀತಿ ಪುನೀತ್‌ ಪ್ರಾಣ ಕಸಿದುಕೊಂಡಿತಾ? ಹಿಂದೆಯೂ ನಡೆದಿತ್ತು ಇಂಥ ಘಟನೆ

ದೊಡ್ಮನೆ ಹುಡುಗನ ದೊಡ್ಡತನಕ್ಕೆ ಲೆಕ್ಕವೇ ಇಲ್ಲ: ಅಬ್ಬಾ! ಸದ್ದಿಲ್ಲದೇ ನಡೀತಿದ್ವು ಇಷ್ಟೊಂದು ಸಮಾಜಸೇವೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 4 =
Remember me
