ನವದೆಹಲಿ:ಭಾರಿ ವಿವಾದ ಸೃಷ್ಟಿಸಿದ್ದ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದು, ರೈತರು ಪ್ರತಿಭಟನೆಯನ್ನು ವಾಪಸ್‌ ಪಡೆಯುವಂತೆ ಕೋರಿಕೊಂಡಿದ್ದಾರೆ. ಈ ಬಗ್ಗೆ ಹಲವೆಡೆಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾದರೂ ಪ್ರತಿಭಟನೆಯ ನೇತೃತ್ವ ವಹಿಸಿರುವ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮಾತ್ರ ಸದ್ಯ ಪ್ರಧಾನಿಯ ಮನವಿಗೆ ಸ್ಪಂದಿಸಲ್ಲ ಎಂದಿದ್ದಾರೆ.
ಕೃಷಿ ಕಾಯ್ದೆ ವಾಪಸ್‌ ಪಡೆಯುವುದಾಗಿ ಇದೀಗ ಮಾಡಿರುವುದು ಘೋಷಣೆಯಷ್ಟೇ. ಆದ್ದರಿಂದ ಪ್ರತಿಭಟನೆ ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ. ಇದು ಮೊದಲು ಸಂಸತ್ತಿನಲ್ಲಿ ರದ್ದು ಪಡಿಸಬೇಕಿದೆ. ಅಷ್ಟೇ ಅಲ್ಲದೇ, ಸರ್ಕಾರವು ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕಿದೆ. ಆಗ ಮಾತ್ರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಗುವುದು ಎಂದಿದ್ದಾರೆ.
ಈ ಕುರಿತು ಅವರು ಟ್ವೀಟ್‌ ಮಾಡಿದ್ದು, ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ.ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸುವ ದಿನಕ್ಕಾಗಿ ನಾವು ಕಾಯುತ್ತೇವೆ. ಎಂಎಸ್‌ಪಿ ಜತೆಗೆ ರೈತರ ಇತರೆ ಸಮಸ್ಯೆಗಳ ಬಗ್ಗೆಯೂ ಸರ್ಕಾರ ಮಾತನಾಡಬೇಕು ಎಂದು ಹೇಳಿದ್ದಾರೆ.
आंदोलन तत्काल वापस नहीं होगा, हम उस दिन का इंतजार करेंगे जब कृषि कानूनों को संसद में रद्द किया जाएगा ।
सरकार MSP के साथ-साथ किसानों के दूसरे मुद्दों पर भी बातचीत करें :@RakeshTikaitBKU#FarmersProtest
— Rakesh Tikait (@RakeshTikaitBKU)November 19, 2021

ಕೇಂದ್ರ ಸರ್ಕಾರದಿಂದ ಮೂರು ಕೃಷಿ ಕಾನೂನು ವಾಪಸ್​: ಪ್ರಧಾನಿ ಮೋದಿಯಿಂದ ಮಹತ್ವದ ಘೋಷಣೆ

ಕೃಷಿ ಕಾಯ್ದೆಗಳನ್ನು ಹಿಂಪಡೆದ ಕೇಂದ್ರದ ನಿರ್ಧಾರಕ್ಕೆ ಪಕ್ಷಾತೀತ ಮೆಚ್ಚುಗೆ: ನ. 19 ದೇಶದ ರೈತರ ಗೆಲುವೆಂದ ಕಾಂಗ್ರೆಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − six =
Remember me
