ಶಹರಾನಪುರ (ಉತ್ತರ ಪ್ರದೇಶ):ಅತ್ಯಾಚಾರ ಮಾಡಿದ್ದೂ ಅಲ್ಲದೇ, ಅದನ್ನು ರಿಕಾರ್ಡ್‌ ಮಾಡಿಕೊಂಡು ಅದನ್ನು ಜಾಲತಾಣದಲ್ಲಿ ಹರಿಬಿಟ್ಟ ಪಾಪಿಗಳಿಂದಾಗಿ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡಿರುವ ವಿಷಾದಕರ ಘಟನೆ ಉತ್ತರ ಪ್ರದೇಶದ ಶಹರಾನಪುರದಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಹರ್ಬರ್‌ ಹಾಗೂ ನೂಮನ್‌ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
17 ವರ್ಷದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿಷ ಸೇವನೆ ನಂತರ ಅವಳನ್ನು ಸ್ಥಳೀಯ ಶಹರಾನಪುರದ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಕಕಾರಿಯಾಗದೇ ಮೃತಪಟ್ಟಿದ್ದಾಳೆ.
ಇದನ್ನೂ ಓದಿ:ಸೋಂಕಿತೆಯನ್ನು ಆಸ್ಪತ್ರೆಗೆ ಸಾಗಿಸುವಾಗ ಅತ್ಯಾಚಾರ ಮಾಡಿದ ಆಂಬ್ಯುಲೆನ್ಸ್ ಚಾಲಕ!
ಯುವತಿಯ ಸಹೋದರ ನೀಡಿರುವ ದೂರಿನ ಆಧಾರದ ಮೇಲೆ ಕೇಸನ್ನು ದಾಖಲು ಮಾಡಿಕೊಳ್ಳಲಾಗಿದೆ.
ನೂಮನ್‌ ಎಂಬಾತ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ, ಆತನ ಚಾಲಕ ರರ್ಬರ್‌ ಕೃತ್ಯದ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ. ಈ ವಿಡಿಯೋ ಇಟ್ಟುಕೊಂಡು ಆರೋಪಿಗಳು ಯುವತಿಯನ್ನು ಬ್ಲ್ಯಾಕ್‍ಮೇಲ್ ಮಾಡಲು ಆರಂಭಿಸಿದ್ದರು. ಅವರ ಮಾತನ್ನು ಯುವತಿ ಕೇಳದಿದ್ದ ಕಾರಣ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದಾನೆ ಪಾಪಿ. ಇದರಿಂದಾಗಿ ಯುವತಿ ಒತ್ತಡಕ್ಕೊಳಗಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಮುಸ್ಲಿಂ ಸಮುದಾಯಕ್ಕೆ ತೆಲಂಗಾಣ ಭರ್ಜರಿ ಗಿಫ್ಟ್‌: ಹಲವಾರು ಯೋಜನೆಗೆ ಗ್ನೀನ್‌ ಸಿಗ್ನಲ್‌

ವಿಚಾರಣೆ ಮಾಡೋದಿದ್ರೆ ಆಫ್ರಿಕನ್‌ ಭಾಷೆಯಲ್ಲಿ ಮಾಡಿ, ಉತ್ತರಿಸುವೆ ಎಂದ ಡ್ರಗ್ಸ್ ಪೆಡ್ಲರ್‌!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 10 =
Remember me
