ಪಟ್ನಾ (ಬಿಹಾರ್​):ಮೇವು ಹಗರಣ ಸೇರಿದಂತೆ ಕೆಲವು ಹಗರಣಗಳಲ್ಲಿ ಸಿಲುಕಿ ಪೇಚಿಗೆ ಸಿಲುಕಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್‌ಜೆಡಿ (ರಾಷ್ಟ್ರೀಯ ಜನತಾ ದಳ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮೆಟ್ಟಿಲು ಇಳಿಯುವಾಗ ಎಡವಿ ಬಿದ್ದು ಬಲ ಭುಜದ ಮೂಳೆ ಮುರಿದುಕೊಂಡಿದ್ದಾರೆ. ಈ ಸಂಬಂಧ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಲಾಲೂ ಪ್ರಸಾದ್ ಯಾದವ್ ಅವರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಭಾನುವಾರ ಮುಂಜಾನೆ, ಮೆಟ್ಟಿಲುಗಳಿಂದ ಬಿದ್ದು, ಭುಜದ ಮೂಳೆ ಮುರಿತಕ್ಕೆ ಒಳಗಾಗಿದ್ದ ಅವರನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿತ್ತು ಎಂದು ತಿಳಿದುಬಂದಿದೆ.
ಅವರನ್ನು ಸ್ಕ್ಯಾನಿಂಗ್‌ಗೆ ಒಳಪಡಿಸಿದಾಗ ಭುಜದ ಭಾಗಕ್ಕೆ ಪೆಟ್ಟಾಗಿರುವುದು ತಿಳಿದುಬಂದಿದೆ. ವಯೋಸಹಜ, ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಇವರು ಮೂತ್ರಪಿಂಡ ಸಮಸ್ಯೆಯ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಈ ಮಧ್ಯೆ ಅವಘಡ ಸಂಭವಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾಲು ಪ್ರಸಾದ್ ಯಾದವ್ ಅವರು ನಿನ್ನೆ ಪಾಟ್ನಾದಲ್ಲಿರುವ ತಮ್ಮ ಪತ್ನಿ ರಾಬ್ರಿ ದೇವಿ ಅವರ ನಿವಾಸದಲ್ಲಿ ತಂಗಿದ್ದರು. ಮನೆಯಲ್ಲಿ ಮೆಟ್ಟಿಲು ಇಳಿಯುವಾಗ ಸಮತೋಲನ ಕಾಯ್ದುಕೊಳ್ಳಲು ಸಾಧ್ಯವಾಗದೇ ಎಡವಿ ಬಿದ್ದಿದ್ದಾರೆ. ಇದರಿಂದಾಗಿ ಅವರ ಭುಜ ಮತ್ತು ಬೆನ್ನಿಗೆ ಪೆಟ್ಟಾಗಿದೆ. ಬಲ ಭುಜದ ಮೂಳೆ ಮುರಿದಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಭುಜದ ಮುರಿತ ಮತ್ತು ಬೆನ್ನಿನ ಗಾಯದ ಹೊರತಾಗಿ ಅವರಿಗೆ ಇನ್ಯಾವುದೇ ಸಮಸ್ಯೆಯಾಗಿಲ್ಲ ಎಂದೂ ಮಾಹಿತಿ ಲಭ್ಯವಾಗಿದೆ.
ಬಿಜೆಪಿ ಐಟಿ ಸೆಲ್ ಮುಖ್ಯಸ್ಥನ ಭಯಾನಕ ಹಿಸ್ಟರಿ! ಜಮ್ಮುವಿನಲ್ಲಿ ಬಂಧಿಸಿರೋ ಉಗ್ರನ ಹಿನ್ನೆಲೆ ನೋಡಿ ಶಾಕ್​

ಬೇಡವಾದ ಮಗುವನ್ನು ಬಿಟ್ಟು ಹೋದಳು: ಕರುಳುಕುಡಿಗಾಗಿ ಮತ್ತೆ ಬಂದಳು! ಕೊಳ್ಳೇಗಾಲದಲ್ಲಿ ಹೀಗೊಂದು ಘಟನೆ…

ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ಕನ್ನಡತಿ: ಯಾರೀ ಉಡುಪಿ ಮೂಲದ ಬೆಡಗಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 3 =
Remember me
