ಪಾಲಿ (ರಾಜಸ್ಥಾನ):ರಾಮ್‌ದೇವ್ರಾದ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಭಿಲ್ವಾರಾ ಜಿಲ್ಲೆಯ ಭಕ್ತರ ಮೇಲೆ ಟ್ರಕ್​ ಹರಿದು ಐವರು ದುರ್ಮರಣ ಹೊಂದಿದ್ದಾರೆ. ನಿನ್ನೆ (ಭಾನುವಾರ) ತಡರಾತ್ರಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ
ರೋಹತ್ ಪೊಲೀಸ್ ಠಾಣೆ ವ್ಯಾಪ್ತಿಯ ಮುಕುನಪುರ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಭಿಲ್ವಾರಾ ಜಿಲ್ಲೆಯ ರಾಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಖೇಮ್ನಾ ಗ್ರಾಮದ ನಿವಾಸಿ ಪಪ್ಪು ಪುತ್ರ ಹೀರಾಲಾಲ್ ಭಿಲ್ ತನ್ನ ಸಹಚರರೊಂದಿಗೆ ದೇಗುಲಕ್ಕೆ ಹೋಗುತ್ತಿದ್ದರು. ಮುಕನಪುರ ಗ್ರಾಮದ ಹೊರವಲಯದ ರಸ್ತೆಯಲ್ಲಿ ಇವರೆಲ್ಲರು ಕಾಲ್ನಡಿಗೆಯಲ್ಲಿ ಹೋಗುತ್ತಿದ್ದಾಗ, ಹಿಂದಿನಿಂದ ಬಂದ ಟ್ರಕ್​ ಅವರಿಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಐವರು ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಪಪ್ಪು ಅವರ ಪುತ್ರ ಹೀರಾಲಾಲ್, ಗಿರ್ಧಾರಿ ಅವರ ಪುತ್ರ ರೋಷನ್​ಲಾಲ್, ಪವನ್ ಅವರ ಪುತ್ರ ಲಾಡು ಜಿ, ಪರಾಸ್ ಪುತ್ರ ಕೈಲಾಸ್ ಮತ್ತು ಸುಶೀಲಾ ಪುತ್ರಿ ರತನ್ ಜೋಧ್‌ಪುರ ಎಂದು ತಿಳಿದುಬಂದಿದೆ. ಈ ಪೈಕಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟರೆ, ಉಳಿದಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ಪೊಲೀಸ್​ ಅಧಿಕಾರಿಗಳು ಹೇಳಿದ್ದಾರೆ.
ಈ ಅಪಘಾತದ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಬಳಿಕ ಮೃತ ದೇಹವನ್ನು ವಶಕ್ಕೆ ಪಡೆದು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದಾರೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.(ಏಜೆನ್ಸೀಸ್​)
ವೈಜಯಂತಿ ಮಾಲಾ@86: ಮೊದಲ ಬಾರಿಗೆ ಬಿಕಿನಿ ಧರಿಸಿ ಸಿನಿ ಜಗತ್ತಲ್ಲಿ ಹಂಗಾಮಾ ಸೃಷ್ಟಿಸಿದ್ದ ನಟಿ ಬಿಚ್ಚಿಟ್ಟ ಅನುಭವದ ಬುತ್ತಿ…

‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ಚಂದು ಮನೆಗೆ ಸಾಕ್ಷಾತ್​ ಲಕ್ಷ್ಮಿಯ ಆಗಮನ: ಹೆಣ್ಣುಮಗುವಿನ ಜನನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + four =
Remember me
