ಯವತ್ಮಲ್ಮ (ಮಹಾರಾಷ್ಟ್ರ):ಮಹಾರಾಷ್ಟ್ರದ ಯವತ್ಮಲ್ಮ ಜಿಲ್ಲೆಯ ಕ್ಯಾಪ್ಸಿಕೊಪ್ರಿಯಲ್ಲಿ ಆರೋಗ್ಯ ಸಿಬ್ಬಂದಿ ಮಾಡಿದ ಎಡವಟ್ಟಿನಿಂದಾಗಿ 12 ಮಕ್ಕಳು ಪ್ರಾಣವನ್ನೇ ಕಳೆದುಕೊಳ್ಳುವ ಭೀತಿ ಸೃಷ್ಟಿಸಿದ ಘಟನೆ ನಡೆದಿದೆ.
ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ವೇಳೆ, 12 ಮಕ್ಕಳಿಗೆ ಪೋಲಿಯೋ ಲಸಿಕೆ ಬದಲು ಸ್ಯಾನಿಟೈಸರ್ ನೀಡಿದ್ದಾರೆ ಈ ಸಿಬ್ಬಂದಿ. ತೀವ್ರವಾಗಿ ಅಸ್ವಸ್ಥಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಅದೃಷ್ಟವಶಾತ್​ ಮಕ್ಕಳ ಪ್ರಾಣಕ್ಕೆ ಯಾವುದೇ ರೀತಿಯ ಅಪಾಯವಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಓರ್ವ ಆರೋಗ್ಯ ಸಿಬ್ಬಂದಿ, ಓರ್ವ ವೈದ್ಯ ಹಾಗೂ ಆಶಾ ಕಾರ್ಯಕರ್ತೆಯನ್ನು ಅಮಾನತು ಮಾಡಲಾಗಿದೆ.
ಯಾವತ್ಮಲ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಪೋಲಿಯೋ ಲಸಿಕಾ ಅಭಿಯಾನದ ವೇಳೆ, ಈ ಘಟನೆ ಸಂಭವಿಸಿದೆ. ಡ್ರಾಪ್ಸ್​ ಪಡೆದ ಮಕ್ಕಳನ್ನು ಪಾಲಕರು ಮನೆಗೆ ಕರೆದುಕೊಂಡು ಹೋದ ತಕ್ಷಣ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಆತಂಕಗೊಂಡ ಪಾಲಕರು ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆಗಲೇ ವಿಷಯ ಬೆಳಕಿಗೆ ಬಂದಿದೆ.
ಮಕ್ಕಳು ಸದ್ಯ ಆರೋಗ್ಯದಿಂದ ಇದ್ದಾರೆ. ಘಟನೆಗೆ ಸಂಬಂಧಿಸಿದವಂತೆ ಮೂವರನ್ನು ವಜಾಮಾಡಲಾಗಿದೆ ಎಂದು ಜಿಲ್ಲಾ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕೃಷ್ಣ ಪಂಚಲ್ ಮಾಹಿತಿ ನೀಡಿದ್ದಾರೆ.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳು ಎಲ್ಲರೂ ಐದು ವರ್ಷ ಒಳಗಿನವರು. ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಇನ್ನು ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಓರ್ವ ಆರೋಗ್ಯ ಸಿಬ್ಬಂದಿ, ಓರ್ವ ವೈದ್ಯ ಹಾಗೂ ಆಶಾ ಕಾರ್ಯಕರ್ತೆಯನ್ನು ಅಮಾನತುಗೊಳಿಸಲಾಗಿದೆ. ಎಂದೂ ಶ್ರೀಕೃಷ್ಣ ಪಂಚಲ್ ಸ್ಷಷ್ಟಪಡಿಸಿದ್ದಾರೆ.
ಪತ್ನಿಯನ್ನು ಕೊಂದು ಮನೆಯೊಳಕ್ಕೇ ಸುಟ್ಟುಹಾಕಿದ ಮಾಜಿ ಕಾರ್ಪೋರೇಟರ್​ ಅಪ್ಪ!

ಬ್ಲೂಫಿಲ್ಮ್​ ವೀಕ್ಷಣೆಗೆ ವೇದಿಕೆಯಾಗ್ತಿದೆ ಸದನ- ಸಭಾಪತಿಯಿಂದ ಹೊರಟಿತೊಂದು ಆದೇಶ

ಮಾಲ್​ ಒಳಗೆ ನುಗ್ಗಿ ಗುಂಡಿನ ದಾಳಿ- ಓರ್ವ ಗ್ರಾಹಕನ ಸಾವು, ಕೆಲವರಿಗೆ ಗಂಭೀರ ಗಾಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × one =
Remember me
