ಮುಂಬೈ:ಉಸಿರಾಟದ ಸಮಸ್ಯೆಯಿಂದ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್‌ ನಟ ಸಂಜಯ್​ ದತ್ ಅವರಿ​ಗೆ ಶ್ವಾಸಕೋಶದ ಕ್ಯಾನ್ಸರ್​ ಇರುವ ವಿಚಾರ ತಿಳಿದು ಬಂದಿದೆ.
ಇದೇ 8ರಂದು ಎದೆನೋವು ಮತ್ತು ಉಸಿರಾಟದ ತೊಂದರೆಯಿಂದಾಗಿ ಬಾಲಿವುಡ್‌ನ ಬಾಬಾ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರ ಕರೊನಾ ವೈರಸ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು. ಆದರೆ ನಂತರ ಪರೀಕ್ಷೆ ಮಾಡಿದಾಗ ಕ್ಯಾನ್ಸರ್‌ ಇರುವುದು ತಿಳಿದು ಬಂದಿದೆ ಎನ್ನಲಾಗಿದೆ.
ಈ ಕುರಿತು ಸಿನಿಮಾ ವಿಮರ್ಶಕ ಕೋಮಲ್ ನಹ್ತಾ ಟ್ವೀಟ್‌ ಮಾಡಿದ್ದು, ‘ಸಂಜಯ್ ದತ್ ಅವರು ಲಂಗ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಅವರು ಬೇಗ ಹುಷಾರಾಗಲಿ ಎಂದು ಪ್ರಾರ್ಥಿಸಿ’ ಎಂದು ಟ್ವೀಟ್ ಮಾಡಿದ್ದಾರೆ.
Sanjay Dutt diagnosed with lung cancer. Let’s pray for his speedy recovery.https://t.co/IBc6j2XchZ
— Komal Nahta (@KomalNahta)August 11, 2020

ಕ್ಯಾನ್ಸರ್ ಈಗ ಮೂರನೇ ಹಂತಕ್ಕೆ ತಲುಪಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಅವರು ಅಮೆರಿಕಕ್ಕೆ ಚಿಕಿತ್ಸೆಗೆಂದು ತೆರಳುವ ಸಾಧ್ಯತೆ ಇದೆ ಎಂದು ಅವರ ಆಪ್ತ ವಲಯಗಳು ಹೇಳಿವೆ.
ಆದರೆ ತಮಗೆ ಕ್ಯಾನ್ಸರ್​ ಇರುವ ವಿಚಾರವನ್ನು ನೇರವಾಗಿ ದತ್‌ ಯಾರ ಬಳಿಯೂ ಹೇಳಿಕೊಂಡಿಲ್ಲ. ಈ ಬಗ್ಗೆ ಟ್ವೀಟ್​ ಮಾಡಿರುವ ಅವರು​ ನಾನು ವೈದ್ಯಕೀಯ ಚಿಕಿತ್ಸೆ ದೃಷ್ಟಿಯಿಂದ ಚಿಕ್ಕ ವಿರಾಮ ತೆಗೆದುಕೊಳ್ಳುತ್ತಿದ್ದೇನೆ. ನನ್ನ ಕುಟುಂಬ ಹಾಗೂ ಗೆಳೆಯರು ನನ್ನ ಜತೆ ಇದ್ದಾರೆ. ನನ್ನ ಬಗ್ಗೆ ಚಿಂತೆ ಬೇಡ. ನಿಮ್ಮ ಹಾರೈಕೆ ನನ್ನ ಮೇಲಿರಲಿ. ನಾನು ಬೇಗ ವಾಪಾಸಾಗುತ್ತೇನೆ, ಎಂದು ಅವರು ಬರೆದುಕೊಂಡಿದ್ದಾರೆ.
ನಟ ಸಂಜಯ್ ದತ್ ಅವರ ಪತ್ನಿ ಹಾಗೂ ಮಕ್ಕಳು ದುಬೈನಲ್ಲಿ ಇದ್ದಾರೆ. ಲಾಕ್‌ಡೌನ್‌ನಿಂದಾಗಿ ಇವರು ಯಾರೂ ಡ ಭಾರತಕ್ಕೆ ಬರಲು ಆಗುತ್ತಿಲ್ಲ.
100ಕ್ಕೆ ಕರೆ ಮಾಡಿ ಪ್ರಧಾನಿ ಮೋದಿಗೆ ಬೆದರಿಕೆ ಹಾಕಿದ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × 4 =
Remember me
