ಚೆನ್ನೈ:ವೈದ್ಯಕೀಯ ವಿದ್ಯಾರ್ಥಿಗಳು ಇಂಗ್ಲಿಷ್​ ಬದಲಾಗಿದೆ ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಲು ಹೇಳಿದ ತಮಿಳುನಾಡು ಸರ್ಕಾರ ಕಾಲೇಜಿನ ಡೀನ್ ಎ.ರಾಥಿನಾವೆಲ್​ ಅವರನ್ನು ಎತ್ತಂಗಡಿ ಮಾಡಲಾಗಿದೆ!
ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು ಇಂಗ್ಲಿಷ್ ಬದಲು ಮಹರ್ಷಿ ಚರಕ ಅವರ ಪ್ರಮಾಣವನ್ನು ಸಂಸ್ಕೃತದಲ್ಲಿ ತೆಗೆದುಕೊಳ್ಳುವಂತೆ ಮಾಡಲಾಗಿತ್ತು. ಈ ಬಗ್ಗೆ ಭಾರಿ ವಿವಾದ ಸೃಷ್ಟಿಯಾಗಿತ್ತು. ಈ ಮೆಡಿಕಲ್ ಕಾಲೇಜಿನಲ್ಲಿ ತಲೆತಲಾಂತರಗಳಿಂದ ನಡೆದುಬಂದಿರುವ ಹಿಪೊಕ್ರೆಟಿಕ್ ಪ್ರಮಾಣ ವಚನದ ಬದಲು ಸಂಸ್ಕೃತದಲ್ಲಿ ಅದನ್ನು ತೆಗೆದುಕೊಳ್ಳುವಂತೆ ಮಾಡಿರುವುದು ಸರಿಯಲ್ಲ ಎಂಬ ಕಾರಣಕ್ಕೆ ಡೀನ್​ ಅವರನ್ನು ಎತ್ತಂಗಡಿ ಮಾಡಲಾಗಿದೆ.
ಕಳೆದ ಶನಿವಾರ ಪ್ರಮಾಣ ವಚನ ಸಮಾರಂಭ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ತಮಿಳುನಾಡು ಸರ್ಕಾರದ ಹಣಕಾಸು ಸಚಿವರಾದ ಪಿಟಿಆರ್ ಪಳನಿವೇಲ್ ತ್ಯಾಗ ರಾಜನ್ ಹಾಗೂ ವಾಣಿಜ್ಯ ತೆರಿಗೆ ಸಚಿವ ಪಿ ಮೂರ್ತಿ ಅವರು ಉಪಸ್ಥಿತರಿದ್ದರು. ಸಂಸ್ಕೃತದಲ್ಲಿ ಪ್ರಮಾಣ ವಚನ ತೆಗೆದುಕೊಳ್ಳುತ್ತಿದ್ದಂತೆಯೇ ಉಪಸ್ಥಿತರಿದ್ದ ಸಚಿವರು ಈ ಪ್ರಕ್ರಿಯೆಗೆ ತಕ್ಷಣ ವಿರೋಧ ವ್ಯಕ್ತಪಡಿಸಿದರೆನ್ನಲಾಗಿದೆ. ನಾವು ಹಿಂದಿ ಅಥವಾ ಇನ್ನಾವುದೇ ಭಾಷೆಯ ಹೇರಿಕೆಯನ್ನು ಸಹಿಸುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ (ಡಿಎಂಇ) ಈ ಘಟನೆಯ ತನಿಖೆ ನಡೆಸಲು ಆದೇಶ ನೀಡಿದೆ ಎನ್ನಲಾಗಿದೆ.
ಕೊಲೆ ಯತ್ನ: ಮಹಾನಗರ ಪಾಲಿಕೆ ಸದಸ್ಯೆ ಪತಿ, ಕಾಂಗ್ರೆಸ್ ಮುಖಂಡ ಸೀನ ಅರೆಸ್ಟ್

ಶಾರುಖ್​ ನನ್ನನ್ನು ಎತ್ತಿಕೊಳ್ತಾರೆ ಎಂದು ಬರೀ ಕಡಲೆಕಾಯಿ ತಿಂದಿದ್ದೆ- ಗುಟ್ಟು ಬಿಚ್ಚಿಟ್ಟ ಟ್ವಿಂಕಲ್​ ಖನ್ನಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
