ಮುಂಬೈ:ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ (ಎಸ್‌ಬಿಐ) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಇದರಲ್ಲಿ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಚೀಫ್​​ ಮ್ಯಾನೇಜರ್ ಸೇರಿದಂತೆ 15 ಹುದ್ದೆಗಳು ಖಾಲಿ ಇವೆ. ಬಿಇ, ಬಿ.ಟೆಕ್​, ಎಲ್‌ಎಲ್‌ಬಿ, ಸಿಎ, ಎಂಬಿಎ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು. ಜ.13 ಕೊನೆಯ ದಿನವಾಗಿದೆ. ಮುಂಬೈ ಬ್ಯಾಂಕ್‌ಗಳಲ್ಲಿ ಈ ಹುದ್ದೆ ಖಾಲಿ ಇವೆ.ಈ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.
ಒಟ್ಟು 15 ಹುದ್ದೆಗಳ ಮಾಹಿತಿ ಇಂತಿದೆ:ಚೀಫ್​​ ಮ್ಯಾನೇಜರ್ -2ಮ್ಯಾನೇಜರ್-6ಡೆಪ್ಯುಟಿ ಮ್ಯಾನೇಜರ್-7ಒಟ್ಟು-15
ವಿದ್ಯಾರ್ಹತೆ:ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್​, ಎಲ್‌ಎಲ್‌ಬಿ, ಸಿಎ, ಅಥವಾ ಎಂಬಿಎ ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ:ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಚೀಫ್​​ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ಮತ್ತು SC/ST/PWD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ :ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ವಿವಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 45 ವರ್ಷ ಮೀರಿರಬಾರದು.
‌ವೇತನ:ಮಾಸಿಕ 48,170 ರಿಂದ 89,890 ರೂ.
ಆಯ್ಕೆ ಪ್ರಕ್ರಿಯೆ:ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್​​ಲಿಸ್ಟಿಂಗ್​ ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಮುಂಬೈನಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ.
ವಿಶೇಷ ಭದ್ರತಾ ಅಧಿಕಾರಿ ಹುದ್ದೆ:ಎಸ್‌ಬಿಐ 25 ವಿಶೇಷ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಯಾವುದೇ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್​ಲೈನ್ ​ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜ.7.ವಿದ್ಯಾರ್ಹತೆ: ಯಾವುದೇ ಒಂದು ಪದವಿ.ವಯಸ್ಸು: 25-40 ವರ್ಷ.
ಆಯ್ಕೆ ಪ್ರಕ್ರಿಯೆ:ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ:https://bit.ly/3Ho8Gcw
ಎಸ್‌ಬಿಐನಲ್ಲಿರುವ ವಿವಿಧ ಹುದ್ದೆಗಳ ಬಗ್ಗೆ ಪರಿಶೀಲನೆಗೆ:https://www.sbi.co.in/web/careers/current-openings
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + six =
Remember me
