ನವದೆಹಲಿ:ಮಹತ್ವದ ಬೆಳವಣಿಗೆಯೊಂದರಲ್ಲಿ ಸುಪ್ರೀಂಕೋರ್ಟ್​, 1992ರಲ್ಲಿ ನಡೆದ ಬಾಬ್ರಿ ಮಸೀದಿ ಕಟ್ಟಡ ಧ್ವಂಸ ಪ್ರಕರಣ ಹಾಗೂ 2002ರಲ್ಲಿ ನಡೆದಿರುವ ಬಹು ವಿವಾದಿತ ಗುಜರಾತ್​ ಗಲಭೆ ಪ್ರಕರಣಗಳಿಂದ ಸಂಬಂಧಿಸಿದಂತೆ ವಿವಿಧ ಕೋರ್ಟ್​ಗಳಲ್ಲಿ ಇರುವ ಎಲ್ಲಾ ಕೇಸ್​ಗಳನ್ನೂ ಮುಕ್ತಾಯಗೊಳಿಸಿದೆ.
ಅಯೋಧ್ಯೆಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣದ ಕುರಿತು 2019ರಲ್ಲಿ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿತ್ತು. ಈ ವಿವಾದಿತ ಪ್ರದೇಶದಲ್ಲಿ ರಾಮ ಮಂದಿರವನ್ನು ನಿರ್ಮಿಸಲು ಕೋರ್ಟ್​ ಆದೇಶಿಸಿತ್ತು. ಅಯೋಧ್ಯೆಯಲ್ಲಿ 5 ಎಕರೆ ಪರ್ಯಾಯ ಭೂಮಿಯನ್ನು ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಗೆ ನಿರ್ಮಾಣಕ್ಕಾಗಿ ನೀಡಲು ಸೂಚಿಸಿತ್ತು.
ಅದೇ ರೀತಿ, ಬಾಬ್ರಿ ಮಸೀದಿ ಕಟ್ಟಡವನ್ನು ಕರಸೇವಕರು ಕೆಡವಿಹಾಕಿದ ಘಟನೆ ಸಂಬಂಧ 2020ರಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. 28 ವರ್ಷಗಳ ಈ ಹಳೆಯ ಪ್ರಕರಣದ ಅಂತಿಮ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಿತ್ತು. ಬಾಬರಿ ಮಸೀದಿ ಧ್ವಂಸ ಮಾಡಿದ್ದು ಪೂರ್ವನಿಯೋಜಿತ ಎಂದು ಅನಿಸುವುದಕ್ಕೆ ಪ್ರಬಲ ಸಾಕ್ಷ್ಯಾಧಾರಗಳು ಇಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಎಲ್ಲಾ 32 ಆರೋಪಿಗಳನ್ನ ಖುಲಾಸೆಗೊಳಿಸಿತ್ತು. ಆದ್ದರಿಂದ ಎಲ್ಲಾ ಪ್ರಮುಖ ಕೇಸ್​ಗಳೂ ಮುಗಿದಿರುವ ಹಿನ್ನೆಲೆಯಲ್ಲಿ ಉಳಿದ ಕೇಸ್​ಗಳಿಗೆ ಯಾವುದೇ ಮಾನ್ಯತೆ ಇಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್​ ನೇತೃತ್ವದ ಪೀಠ ಹೇಳಿದೆ.
ಇನ್ನು 2002ರ ಗುಜರಾತ್​ನ ಗೋಧ್ರಾ ಗಲಭೆ ಪ್ರಕರಣಕ್ಕೆ ಬರುವುದಾದರೆ, ಕೋರ್ಟ್​ ಆದೇಶದ ಮೇರೆಗೆ ವಿಶೇಷ ತನಿಖಾ ತಂಡವು ಒಂಬತ್ತು ಪ್ರಮುಖ ಪ್ರಕರಣಗಳಲ್ಲಿ ಕೇಸ್​ ದಾಖಲು ಮಾಡಿತ್ತು. ಈ ಪೈಕಿ ಎಂಟು ಪ್ರಕರಣಗಳಲ್ಲಿ ವಿಚಾರಣೆಗಳು ಮುಗಿದು ಹೋಗಿವೆ. ಈ ಹಿನ್ನೆಲೆಯಲ್ಲಿ ಸದ್ಯ ಇವು ನಿರುಪಯುಕ್ತವಾಗಿವೆ ಎಂದು ಕೋರ್ಟ್​ ಅಭಿಪ್ರಾಯ ಪಟ್ಟಿದೆ. ಇನ್ನೊಂದು ಪ್ರಕರಣದಲ್ಲಿ ಮಾತ್ರ ನರೋದಾಗಾಂವ್‌ನ ವಿಚಾರಣಾ ನ್ಯಾಯಾಲಯ ವಿಚಾರಣೆ ನಡೆಸುತ್ತಿದ್ದು ಅದು ಮುಂದುವರಿಯಲಿದ್ದು, ಉಳಿದ ಕೇಸ್​ಗಳು ಕ್ಲೋಸ್​ ಮಾಡುವುದಾಗಿ ಹೇಳಿದೆ.
ಇದೇ ವೇಳೆ, 2002 ರ ಗೋಧ್ರಾ ಗಲಭೆ ಪ್ರಕರಣಗಳಲ್ಲಿ ಸುಳ್ಳು ಸಾಕ್ಷ್ಯ ಸೃಷ್ಟಿಸಿ ಅಮಾಯಕರನ್ನು ಬಂಧಿಸುವಲ್ಲಿ ಪಿತೂರಿ ಮಾಡಿದ ಆರೋಪ ಹೊತ್ತ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ಇವರನ್ನು ಕಳೆದ ಜುಲೈ 30ರಂದು ಬಂಧಿಸಲಾಗಿದೆ. (ಏಜೆನ್ಸೀಸ್​)
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಹೈಕೋರ್ಟ್​ ಆದೇಶಕ್ಕಿಲ್ಲ ಸುಪ್ರೀಂ ತಡೆ- ಆಗಿದ್ದೇನು?
ಶಾಲಾ ಕಾಲೇಜುಗಳಲ್ಲಿ ಹಿಜಾಬ್​ ಬ್ಯಾನ್​- ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ನೋಟಿಸ್​, ಕೋರ್ಟ್​ ಹೇಳಿದ್ದೇನು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 13 =
Remember me
