ನವದೆಹಲಿ:ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ. ಆದರೆ ಈ ಪ್ರಕರಣದ ವಿಚಾರಣೆಯನ್ನು ತುರ್ತಾಗಿ ನಡೆಸಲು ಸಾಧ್ಯವಿಲ್ಲ ಎಂದು ಕೋರ್ಟ್‌ ಹೇಳಿದೆ.
ಈ ವಿವಾದದ ಮಧ್ಯಪ್ರವೇಶಿಸಿ ತುರ್ತು ವಿಚಾರಣೆ ನಡೆಸಬೇಕು ಎಂದು ಮಾಡಿಕೊಂಡ ಮನವಿಯನ್ನು ನ್ಯಾಯಮೂರ್ತಿಗಳು ನಿರಾಕರಿಸಿದ್ದಾರೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವಾಗ, ಅದಕ್ಕಾಗಿ ವಿಸ್ಕೃತ ಪೀಠ ರಚನೆಯಾಗಿರುವಾಗ ತುರ್ತು ವಿಚಾರಣೆಯನ್ನು ನಾವು ನಡೆಸುವುದು ಏಕೆ ಎಂದು ಕೋರ್ಟ್‌ ಪ್ರಶ್ನಿಸಿದೆ. ಈ ಹಂತದಲ್ಲಿ ನಾವು (ಸುಪ್ರೀಂಕೋರ್ಟ್‌) ಮಧ್ಯೆ ಪ್ರವೇಶಿಸುವುದಿಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.
ಕಾಂಗ್ರೆಸ್​ ಹಿರಿಯ ನಾಯಕ ಕಪಿಲ್ ಸಿಬಲ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದು ಭಾರಿ ವಿವಾದ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಮಧ್ಯಪ್ರವೇಶಿಸಿ ತುರ್ತು ವಿಚಾರಣೆ ನಡೆಸುವಂತೆ ಅವರ ಮನವಿ ಮಾಡಿಕೊಂಡಿದ್ದರು.
ಕರ್ನಾಟಕ ಹೈಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾ.ಖಾಜಿ ಜೈಬುನ್ನೀಸಾ ಅವರನ್ನು ಒಳಗೊಂಡ ಪೀಠವು ಇದರ ವಿಚಾರಣೆ ನಡೆಸುತ್ತಿದೆ.
VIDEO: ಬುರ್ಕಾಧಾರಿ ಹಿಂದೆ ಹೋದ ಎಸ್‌ಪಿ ಕಾರ್ಯಕರ್ತ ಮಾಡಿದ್ದೇನು ನೋಡಿ! ಜಾಲತಾಣದಲ್ಲಿ ಆಕ್ರೋಶ

‘ಅಮ್ಮಾ ಭಯವಾಗ್ತಿದೆ, ಬೇಗ ಬಾ…ಎಲ್ಲಾ ಸೇರಿ ಸಾಯಿಸ್ತಾರೆ’ ಎಂದು ಕರೆ ಮಾಡಿದ್ದ ಮರುಕ್ಷಣವೇ ಶವವಾದ ಮಹಿಳೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
