ನವದೆಹಲಿ:ಪಂಜಾಬ್​ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಕಂಠಪೂರ್ತಿ ಕುಡಿದು ವಿಮಾನ ಹತ್ತಿದ್ರಾ? ಹೀಗೊಂದು ಸುದ್ದಿ ಈಗ ಪಂಜಾಬ್​ನ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಜರ್ಮನಿಯ ಪ್ರವಾಸದಲ್ಲಿದ್ದ ಭಗವಂತ್ ಮಾನ್ ಅವರು ಮದ್ಯ ಸೇವನೆ ಮಾಡಿ ವಿಮಾನ ಹತ್ತಿದ್ದರಿಂದ ಅವರನ್ನು ವಿಮಾನದಿಂದ ಕೆಳಗಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೂಡಿಕೆದಾರರನ್ನು ಆಕರ್ಷಿಸಲು ಜರ್ಮನಿ ಪ್ರವಾಸ ಕೈಗೊಂಡಿದ್ದರು. ತಮ್ಮ ಎಂಟು ದಿನಗಳ ಪ್ರವಾಸದ ಬಳಿಕ ಸೋಮವಾರ ಮರಳಿದ್ದಾರೆ. ಆದರೆ, ಪಾನಮತ್ತರಾಗಿದ್ದರು ಎಂಬ ಕಾರಣಕ್ಕೆ ದೆಹಲಿಗೆ ಬರುತ್ತಿದ್ದ ವಿಮಾನದಿಂದ ಫ್ರಾಂಕ್‌ಫರ್ಟ್ ವಿಮಾನ ನಿಲ್ದಾಣದಲ್ಲಿ ಅವರನ್ನು ಕೆಳಗಿಸಲಾಗಿತ್ತು ಎಂದು ಹೇಳಲಾಗುತ್ತಿದೆ.
ಈ ರೀತಿ ಆರೋಪ ಮಾಡಿದವರು, ಫ್ರಾಂಕ್‌ಫರ್ಟ್ ವಿಮಾನ ನಿಲ್ದಾಣದಲ್ಲಿ ಲುಫ್ಥಾನ್ಸ ವಿಮಾನದಿಂದ ಕೆಳಗಿಳಿಸಲಾಗಿತ್ತು ಎಂದು ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್. ಆದರೆ ಈ ಆರೋಪವನ್ನು ಆಮ್ ಆದ್ಮಿ ಪಕ್ಷವು ಆಧಾರರಹಿತ ಎಂದು ತಳ್ಳಿ ಹಾಕಿದೆ.
ತನಿಖೆ ನಡೆಸಬೇಕೆಂದು ಒತ್ತಾಯಿಸಿ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಕಾಂಗ್ರೆಸ್ ನಾಯಕ ಪರತಾಪ್ ಸಿಂಗ್ ಬಾಜ್ವಾ ಪತ್ರ ಬರೆದಿದ್ದಾರೆ.
ಈ ಘಟನೆ ಬಗ್ಗೆ ಪರಿಶೀಲಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ‘ಇದು ಜರ್ಮನಿಯಲ್ಲಿ ನಡೆದ ಘಟನೆ ಆಗಿರುವ ಕಾರಣ, ಸತ್ಯಾಸತ್ಯತೆ ಪರಿಶೀಲಿಸಬೇಕಿದೆ’ ಎಂದಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾತನಾಡಿ, ‘ಈ ಆರೋಪದಲ್ಲಿ ಸತ್ಯಾಂಶ ಇಲ್ಲ. ಇದು ಪ್ರತಿಪಕ್ಷಗಳ ಕುತಂತ್ರ. 75 ವರ್ಷಗಳ ನಂತರ ಪಂಜಾಬ್‌ಗೆ ಅತ್ಯಂತ ಪ್ರಾಮಾಣಿಕ ಮತ್ತು ಕಠಿಣ ಪರಿಶ್ರಮದ ಮುಖ್ಯಮಂತ್ರಿ ಸಿಕ್ಕಿದ್ದಾರೆ. ಮಾನ್​ ಅವರ ಕೆಲಸದಲ್ಲಿ ತಪ್ಪು ಹುಡುಕಲು ಪ್ರತಿಪಕ್ಷಗಳಿಗೆ ಸಾಧ್ಯವಿಲ್ಲ. ಹೀಗಾಗಿ ಅವರ ಹೆಸರಿಗೆ ಕಪ್ಪು ಚುಕ್ಕೆ ಇಡಲು ಹೀಗೆ ಸುದ್ದಿ ಮಾಡಿವೆ’ ಎಂದಿದ್ದಾರೆ.(ಏಜೆನ್ಸೀಸ್​)
ಮಗು ದತ್ತುಪಡೆಯ ಹೊರಟಿದ್ದ ಮಾಜಿ ಸಚಿವ, ನಟಿ ! ಜೈಲಲ್ಲಿರೋ ಜೋಡಿಯ ರಹಸ್ಯ ಇಡಿಯಿಂದ ಬಯಲು
ಶಿವಮೊಗ್ಗದಲ್ಲಿ ಬಂಧಿತ ಶಂಕಿತ ಉಗ್ರರ ಮೊಬೈಲ್​ ಫೋನ್​ ಬಿಚ್ಚಿಟ್ಟಿತು ಕರಾಳ ರಹಸ್ಯ!
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:two × 2 =
Remember me
