ನವದೆಹಲಿ:ಇತ್ತ ಮುಂಗಾರು ಅಧಿವೇಶನ ಶುರುವಾಗುತ್ತಿದ್ದಂತೆಯೇ ವೈದ್ಯಕೀಯ ತಪಾಸಣೆ ಎಂದು ಹೇಳಿ ಅಮೆರಿಕಕ್ಕೆ ಹಾರಿದ್ದ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಅಧಿವೇಶನ ಮುಗಿಯುತ್ತಿದ್ದಂತೆಯೇ ಕೊನೆಗೂ ಭಾರತಕ್ಕೆ ವಾಪಸ್​ ಆಗಿದ್ದಾರೆ.
ವೈದ್ಯಕೀಯ ಚಿಕಿತ್ಸೆಗಾಗಿ ತಾವು ತೆರಳಲಿದ್ದು, ಅಧಿವೇಶನಕ್ಕೆ ಹಾಜರಾಗುವುದಾಗಿ ಸೋನಿಯಾ ಹೇಳಿದ್ದರೆ, ಅವರಿಗಿಂತಲೂ ಒಂದು ವಾರ ಮುಂಚಿತವಾಗಿ ತಾವು ಬರುವುದಾಗಿ ರಾಹುಲ್​ ಗಾಂಧಿ ಹೇಳಿ ಹೋಗಿದ್ದರು.
ಇದೀಗ ಇಬ್ಬರೂ ಒಟ್ಟಿಗೇ ಬಂದಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಸಿಬಿಸಿ ಚರ್ಚೆ ಶುರುವಾಗಿದೆ.
ನಿಗದಿತ ವೈದ್ಯಕೀಯ ತಪಾಸಣೆಗಾಗಿ ತೆರಳಿರುವೆ ಎಂದು ಸೋನಿಯಾ ಗಾಂಧಿ ಅವರು ಸೆಪ್ಟೆಂಬರ್ 12ರಂದು ಅಮೆರಿಕಕ್ಕೆ ತೆರಳಿದ್ದರು.
ಇದನ್ನೂ ಓದಿ:‘ನೆಹರೂ ಕಟ್ಟಿಸಿರೋ ‘ಏಮ್ಸ್’​ ಇರೋವಾಗ ಸೋನಿಯಾ ಪದೇ ಪದೇ ವಿದೇಶಕ್ಕೆ ಹೋಗೋದ್ಯಾಕೆ?’
ಸೋನಿಯಾ ಗಾಂಧಿ ಅವರು ತುಂಬಾ ದಿನಗಳಿಂದ ತಪಾಸಣೆಗೆ ಒಳಗಾಗಿರಲಿಲ್ಲ. ಹೀಗಾಗಿ ಅಮೆರಿಕಕ್ಕೆ ಹೋಗಿ ತಪಾಸಣೆ ಮಾಡಿಕೊಂಡು ಬಂದಿದ್ದಾರೆ. ಕರೊನಾ ಕಾರಣದಿಂದಾಗಿ ಅವರು ಮರಳುವುದು ತಡವಾಗಲಿದೆ, ಆದರೆ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್​ ಮೂಲಗಳು ಹೇಳಿದ್ದವು. ರಾಹುಲ್​ ಗಾಂಧಿಯವರು ಒಂದು ವಾರ ಮುಂಚೆಯೇ ಬರಲಿದ್ದಾರೆ ಎಂದು ಹೇಳಲಾಗಿತ್ತು.
ಇದೀಗ ಅಧಿವೇಶವನ್ನು ಮೊಟಕುಗೊಳಿಸಿರುವ ಕಾರಣ, ತಾವು ಅದರಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ತಾಯಿ-ಮಗ ಸ್ಪಷ್ಟನೆ ನೀಡಿದ್ದಾರೆ.
ಕೃಷಿ ಮಸೂದೆ ವಿಚಾರವಾಗಿ ಅಧಿವೇಶನದಲ್ಲಿ ಕಾಂಗ್ರೆಸ್​ ಕೋಲಾಹಲ ಎಬ್ಬಿಸುತ್ತಿರುವ ಈ ಸಂದರ್ಭದಲ್ಲಿ ಹಂಗಾಮಿ ಅಧ್ಯಕ್ಷೆ ಇಲ್ಲದಿರುವುದು ಪಕ್ಷದ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ನುಗ್ಗೇಕಾಯಿಯನ್ನು ಹ್ಯಾಷ್​ಟ್ಯಾಗ್​ ಮಾಡಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದೇಕೆ?

ಮಂಚಕ್ಕೆ ಬಾ ಎಂದು ಕಳ್ಳಿಗೆ ಆಫರ್​ ನೀಡಿದ ಪೊಲೀಸ್! ಮುಂದೇನಾಯ್ತು ನೋಡಿ…

ಹಣ ಗುಳುಂ ಮಾಡೋದೆಂದ್ರೆ ಇದೇನಾ? ಲಂಚದ ಡುಡ್ಡನ್ನು ತಿಂದ ಕಾನ್ಸ್​ಟೆಬಲ್​- ಆದದ್ದೇ ಬೇರೆ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − 14 =
Remember me
