ನವದೆಹಲಿ:ನಾಗರಿಕ ತಿದ್ದುಪಡಿ ಕಾಯ್ದೆಗೆ (ಸಿಎಎ) ವಿರೋಧ ವ್ಯಕ್ತಪಡಿಸಿ ಇಲ್ಲಿಯ ಶಾಹೀನ್​ಬಾಗ್​ನಲ್ಲಿ ನಡೆಸಿರುವ ಪ್ರತಿಭಟನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್​, ಇಂಥ ಸಾರ್ವಜನಿಕ ಸ್ಥಳಗಳನ್ನು ಪ್ರತಿಭಟನೆಗಳಿಗೆ ಅನಿರ್ದಿಷ್ಟಾವಧಿಗೆ ಬಳಸಿಕೊಳ್ಳುವುದನ್ನು ನಾವು ಸಹಿಸಲ್ಲ ಎಂದಿದೆ.
ಕಳೆದ ಡಿಸೆಂಬರ್​ 14ರಿಂದ ಪ್ರತಿಭಟನೆಯನ್ನು ಈ ಪ್ರದೇಶದಲ್ಲಿ ಮಾಡಲಾಗಿತ್ತು. ಕರೊನಾ ಹಿನ್ನೆಲೆಯಲ್ಲಿ ಮಾರ್ಚ್ 24ರಂದು ಲಾಕ್​ಡೌನ್​ ಘೋಷಣೆಯಾದ ನಂತರ ಪ್ರತಿಭಟನೆ ಹಿಂತೆಗೆದುಕೊಳ್ಳಲಾಗಿತ್ತು. ಪ್ರತಿಭಟನೆಯಿಂದಾಗಿ ಸಾರ್ವಜನಿಕ ಓಡಾಟಕ್ಕೆ ಭಾರಿ ತೊಂದರೆಯಾಗಿತ್ತು.
ಪ್ರತಿಭಟನಾಕಾರರ ಕ್ರಮ ವಿರುದ್ಧ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕೋರ್ಟ್​ ನಡೆಸುತ್ತಿದೆ. ಪ್ರತಿಭಟನೆಗಳನ್ನು ನಿಗದಿತ ಪ್ರದೇಶಗಳಲ್ಲಿ ಮಾಡಬೇಕು, ಅದಕ್ಕೆ ಪೂರ್ವಾನುಮತಿ ತೆಗೆದುಕೊಳ್ಳಬೇಕು ಎಂದು ಖಡಕ್​ ಆಗಿ ಆದೇಶಿಸಿದೆ.
ಇದನ್ನೂ ಓದಿ:ಹಾಥರಸ್​ ಪ್ರಕರಣ: ಗ್ರಾಮದ ಮುಖಂಡನಿಂದ ಸ್ಫೋಟಕ ಮಾಹಿತಿ!
ಪ್ರತಿಭಟನೆ ನಡೆಸಲು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕಿದೆ. ಆದರೆ ಸಾರ್ವಜನಿಕ ಸ್ಥಳಗಳನ್ನು ಅನಿರ್ದಿಷ್ಟಾವಧಿವರೆಗೆ ಬಂದ್ ಮಾಡಿ ಪ್ರತಿಭಟನೆ ನಡೆಸಬಾರದು. ಅದಕ್ಕೆ ಬೇರೆ ಸ್ಥಳಗಳನ್ನು ನಿಗದಿಮಾಡಿಕೊಳ್ಳಬೇಕು ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠ ಅಭಿಪ್ರಾಯವ್ಯಕ್ತಪಡಿಸಿದೆ.
ಸಾರ್ವಜನಿಕ ಸ್ಥಳಗಳನ್ನು ಅನಿರ್ದಿಷ್ಟಾವಧಿವರೆಗೆ ಆಕ್ರಮಿಸಿಕೊಳ್ಳುವಂತಿಲ್ಲ. ಹೀಗೆ ಪ್ರತಿಭಟನೆ ನಡೆಸಿದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಅಲ್ಲದೇ ಅವರ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಕೋರ್ಟ್​ ಹೇಳಿದೆ.
ಇಂತಹ ಘಟನೆಗಳು ನಡೆದಾಗ ಆಡಳಿತ ವರ್ಗ ತಕ್ಷಣವೇ ಕ್ರಮ ಕೈಗೊಂಡು ಮುಕ್ತವಾಗಿ ಓಡಾಡಲು ಅವಕಾಶ ಮಾಡಿಕೊಡಬೇಕು. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಅದನ್ನು ಬಿಟ್ಟು ನ್ಯಾಯಾಲಯಗಳ ಹಿಂಬದಿ ಅಡಗಿಕೊಳ್ಳಬಾರದು, ಹೀಗಾಗಿ ಕೋರ್ಟ್ ಭುಜದ ಮೂಲಕ ಗುಂಡು ಹಾರಿಸಲು ಕಾಯಬೇಡಿ ಎಂದು ಹೇಳಿದೆ.
ನನಗೆ ಐವರು ಗಂಡಂದಿರು, ಮೂವರು ಅಪ್ಪಂದಿರು: ನಮ್ಮಲ್ಲಿದು ಕಾಮನ್​, ಅಚ್ಚರಿಯ ಮಾಹಿತಿ ಬಿಚ್ಚಿಟ್ಟಿದ್ದಾಳೆ ಯುವತಿ…

ಹಾಥರಸ್​ ಪ್ರಕರಣ: ಗ್ರಾಮದ ಮುಖಂಡನಿಂದ ಸ್ಫೋಟಕ ಮಾಹಿತಿ!

ಅಧಿಕಾರ ನಮ್ಮ ಕೈಯಲ್ಲಿದ್ದಿದ್ರೆ 15 ನಿಮಿಷದಲ್ಲೇ ಚೀನಿ ಸೈನಿಕರು ಕಾಲ್ಕೀಳುತ್ತಿದ್ದರು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × one =
Remember me
