ನವದೆಹಲಿ: ಕರೊನಾ ವೈರಸ್​ಗೆ ತುತ್ತಾಗಿದ್ದ ಮರಾಠಿ ನಟಿ ಆಶಾಲತಾ ವಾಬ್​ಗಾಂವ್ಕರ್ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಅವರಿಗೆ 79 ವರ್ಷ ವಯಸ್ಸಾಗಿತ್ತು. ಕೆಲ ದಿನಗಳ ಹಿಂದೆ ಕರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಅವರನ್ನು ಮಹಾರಾಷ್ಟ್ರದ ಸತಾರಾದಲ್ಲಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.
ಇಂದು ಮುಂಜಾನೆ 4.45ಕ್ಕೆ ನಿಧನರಾಗಿದ್ದಾರೆ. ಇವರಿಗೆ ಒಬ್ಬ ಪುತ್ರ ಇದ್ದಾರೆ. ಗೋವಾದಲ್ಲಿ ಹುಟ್ಟಿದ್ದ ಆಶಾಲತಾ ಅವರು ನಂತರ ಮರಾಠಿ ಕಿರುತೆರೆ ಮತ್ತು ಹಿರಿತೆರೆಗಳಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ.
ಇದನ್ನೂ ಓದಿ:ಕರೊನಾ ತಡೆಯಲು ಅಯೋಡಿನ್ ದ್ರಾವಣ: ಸಂಶೋಧಕರಿಂದ ನೂತನ ಆವಿಷ್ಕಾರ
ಆಶಾಲತಾ ಅವರು ಇತ್ತೀಚೆಗೆ ಸತಾರದಲ್ಲಿ ಆಯ್ ಮಜಿ ಕಲುಬಾಯಿ ಎಂಬ ಪೌರಾಣಿಕ ಶೋವೊಂದರ ಶೂಟಿಂಗ್ ನಲ್ಲಿ ತೊಡಗಿದ್ದರು. ಆ ಟಿವಿ ಸೀರಿಯಲ್ ತಂಡದಲ್ಲಿ ಕೆಲವರಿಗೆ ಸೋಂಕು ತಗುಲಿತ್ತು.
ನಂತರ ಆಶಾಲತಾ ಅವರು ಪರೀಕ್ಷೆ ಮಾಡಿಸಿಕೊಂಡಾಗ ಅವರಿಗೂ ಸೋಂಕು ದೃಢಪಟ್ಟಿತ್ತು. ಈ ಚಿತ್ರೀಕರಣದಲ್ಲಿ ಭಾಗವಹಿಸಿದ್ದ 20 ಮಂದಿಗೆ ಸೋಂಕು ತಗುಲಿತ್ತು. ಎಲ್ಲರನ್ನೂ ಸಹ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಶಾಲತಾ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿತ್ತು.
ಹೀಗಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಒಂದೇ ರೂಪಾಯಿಯಲ್ಲಿ ಕರೊನಾ ಗೆದ್ದ 106 ವರ್ಷದ ಅಜ್ಜಿ!

ಕೇಂದ್ರ, ರಾಜ್ಯದ ವಿರುದ್ಧ ಪ್ರತಿಭಟನೆ: 25ರಂದು ಕರ್ನಾಟಕ ಆಗಲಿದೆಯೇ ಬಂದ್​?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen + 2 =
Remember me
