ಜಮ್ಮು:ಅನಂತ್‍ನಾಗ್ ಜಿಲ್ಲೆಯ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮನೆಗೆ ಮರಳುತ್ತಿದ್ದ ಪೊಲೀಸ್ ಇನ್ಸ್​ಪೆಕ್ಟರ್ ಒಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಉಗ್ರರು ಅವರನ್ನು ಹತ್ಯೆ ಮಾಡಿದ್ದಾರೆ.
ಜಮ್ಮು ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯ ಬಿಜ್‍ಬೆಹರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅನಂತ್‍ನಾಗ್ ಜಿಲ್ಲೆಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಅಶ್ರಫ್ ಉಗ್ರರಿಂದ ಹತ್ಯೆಯಾದವರು.
ತೀವ್ರವಾಗಿ ಗಾಯಗೊಂಡಿದ್ದ ಅಶ್ರಫ್ ಅವರನ್ನು ಬಿಜ್‍ಬೆಹರಾ ಉಪ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯಲ್ಲಿ ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ:ಸಿಎಸ್​ಕೆ ಕ್ಯಾಪ್ಟನ್​ ಧೋನಿ ನಂತರ ನಟ ವಿಜಯ್​ ಸೇತುಪತಿ ಮಗಳಿಗೆ ಅತ್ಯಾಚಾರ ಬೆದರಿಕೆ..!
ಮೊಹಮ್ಮದ್ ಅಶ್ರಫ್ ಅವರು ಪ್ರಸ್ತುತ ಪುಲ್ವಾಮಾ ಜಿಲ್ಲೆಯ ಲೆಥ್‍ಪೊರಾದ ಪೊಲೀಸ್ ತರಬೇತಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರುಘಟನೆ ನಡೆದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದಾರೆ.
ಇದೇ ವೇಳೆ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್‍ಕೌಂಟರ್ ಮಾಡಿದ್ದು, ಈ ಗುಂಡಿನ ದಾಳಿಯಲ್ಲಿ ಒಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದೆ. ಶೋಪಿಯಾನ್ ಜಿಲ್ಲೆಯ ಮೆಲ್ಹೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ದಾಳಿ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಓರ್ವ ಉಗ್ರ ಸತ್ತಿರುವುದಾಗಿ ಸೇನೆಯ ಮೂಲಗಳು ಹೇಳಿವೆ.
ಬ್ರಿಟನ್​ ಪ್ರಧಾನಿಗೆ ಸಂಬಳ ಸಾಕಾಗುತ್ತಿಲ್ಲವಂತೆ! ಇನ್ಫಿ ಅಳಿಯನಿಗೆ ಒಲಿಯಲಿದೆಯೇ ಈ ಪಟ್ಟ?

ರೈಲಲ್ಲಿ ಹೋದ ಕಳ್ಳನನ್ನು ಹಿಡಿಯಲು ವಿಮಾನವೇರಿ ಹೊರಟ ಬೆಂಗಳೂರು ಪೊಲೀಸರು

ನಟಿಯರನ್ನು ಬಿಡುಗಡೆ ಮಾಡದಿದ್ರೆ ಬಾಂಬ್​ ಬ್ಲಾಸ್ಟ್​: ಉಗ್ರ ಸಂಘಟನೆ ಹೆಸರಲ್ಲಿ ಪತ್ರ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − nine =
Remember me
